ಮುಂದಿನ ಸಾರ್ವತ್ರಿಕ ಚುನಾವಣೆಯು ಕಾಂಗ್ರೆಸ್ ಗೆಲುವಿಗೆ ಪೂರಕವಾಗಿದೆ. ಇದನ್ನು ಸದ್ಬಳಕೆ ಮಾಡಿಕೊಂಡು ಭಿನ್ನಮತಗಳನ್ನು ಬದಿಗಿಟ್ಟು ಪಕ್ಷದ ಅಭ್ಯರ್ಥಿ ಗೆಲುವಿಗೆ ಒಟ್ಟಾಗಿ ಶ್ರಮಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸಲಹೆ ನೀಡಿದ್ದಾರೆ.
ಬೆಂಗಳೂರು (ನ.07): ಮುಂದಿನ ಸಾರ್ವತ್ರಿಕ ಚುನಾವಣೆಯು ಕಾಂಗ್ರೆಸ್ ಗೆಲುವಿಗೆ ಪೂರಕವಾಗಿದೆ. ಇದನ್ನು ಸದ್ಬಳಕೆ ಮಾಡಿಕೊಂಡು ಭಿನ್ನಮತಗಳನ್ನು ಬದಿಗಿಟ್ಟು ಪಕ್ಷದ ಅಭ್ಯರ್ಥಿ ಗೆಲುವಿಗೆ ಒಟ್ಟಾಗಿ ಶ್ರಮಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸಲಹೆ ನೀಡಿದ್ದಾರೆ. ಯಲಹಂಕದ ಖಾಸಗಿ ಹೋಟೆಲ್‌ನಲ್ಲಿ ಮುಂದುವರೆದ ಜಿಲ್ಲಾ ನಾಯಕರೊಂದಿಗಿನ ಸರಣಿ ಸಭೆಯ ಭಾಗವಾಗಿ ಶನಿವಾರ ಬೆಳಗಾವಿ, ಬೆಳಗಾವಿ ಗ್ರಾಮಾಂತರ, ಚಿಕ್ಕೋಡಿ, ಹಾಸನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ವಿಧಾನಸಭಾ ಚುನಾವಣಾ ಟಿಕೆಟ್ ಆಕಾಂಕ್ಷಿಗಳು, ಪ್ರಮುಖ ನಾಯಕರ ಸಭೆ ನಡೆಸಿ ಅವರು ಮಾತನಾಡಿದರು.
ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಿ, ಜನ ಬೆಂಬಲವಿರುವವರಿಗೆ ಟಿಕೆಟ್ ನೀಡಲಾಗುವುದು. ಯಾರಿಗೇ ಟಿಕೆಟ್ ನೀಡಿದರೂ ಇನ್ನುಳಿದ ಆಕಾಂಕ್ಷಿಗಳು ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ಪಕ್ಷದ ಅಧಿಕೃತ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಕರೆ ನೀಡಿರುವುದಾಗಿ ಮೂಲಗಳು ತಿಳಿಸಿವೆ. ಅಭ್ಯರ್ಥಿ ಆಯ್ಕೆ ಕುರಿತು ಕೆಪಿಸಿಸಿ ಹಾಗೂ ಎಐಸಿಸಿ ತನ್ನ ತಳಮಟ್ಟದ ಸಮೀಕ್ಷಾ ಕೆಲಸ ಮಾಡಲಿದೆ. ಆದರೆ, ಸ್ಥಳೀಯವಾಗಿ ಪ್ರಭಾವ ಬೀರುವ ಹಲವು ಅಂಶಗಳು ನಿಮಗೆ ತಿಳಿದಿರುತ್ತವೆ. ಹೀಗಾಗಿ ಯಾವ್ಯಾವ ಜಿಲ್ಲೆಯಲ್ಲಿ ಯಾವ್ಯಾವ ಜಾತಿಯ ಮತದಾರರು ಎಷ್ಟಿದ್ದಾರೆ, ಯಾವ ಜಾತಿಯವರನ್ನು ಚುನಾವಣಾ ಅಖಾಡಕ್ಕೆ ಇಳಿಸಿದರೆ ಅನುಕೂಲವಾಗುತ್ತದೆ ಎಂಬ ನೀಲನಕ್ಷೆಯನ್ನೂ ನೀವೇ ನೀಡಿ.
Belagavi: ಜೆಡಿಎಸ್‌ಗೆ 123 ಸ್ಥಾನ ಗೆಲ್ಲುವ ಗುರಿ: ಸಿ.ಎಂ.ಇಬ್ರಾಹಿಂ
ಟಿಕೆಟ್ ನೀಡುವ ಸಮಯದಲ್ಲಿ ಇದನ್ನೂ ಪರಿಗಣಿಸಲಾಗುವುದು ಎಂದು ಭರವಸೆ ನೀಡಿರುವುದಾಗಿ ತಿಳಿದುಬಂದಿದೆ. ಇನ್ನು ಚುನಾವಣೆ ದೃಷ್ಟಿಯಿಂದ ಕೆಪಿಸಿಸಿಯಿಂದ ಆಯೋಜಿಸಲಿರುವ ಬಸ್ ಯಾತ್ರೆಯು ನಿಮ್ಮ ಜಿಲ್ಲೆಗಳಿಗೆ ಆಗಮಿಸಿದಾಗ ಹೆಚ್ಚು ಜನರನ್ನು ಸೇರಿಸಿ ಯಶಸ್ವಿಗೊಳಿಸಬೇಕು. ಅದಕ್ಕಾಗಿ ಈಗಿನಿಂದಲೇ ಸಿದ್ಧತೆಗಳನ್ನು ಕೈಗೊಳ್ಳಬೇಕು, ಸಭೆ ನಡೆಸಬೇಕು. ಕೃಷ್ಣಾ, ಮಹದಾಯಿ ಯೋಜನೆಗಳ ಅನುಷ್ಠಾನದಲ್ಲಿ ಆಗುತ್ತಿರುವ ವಿಳಂಬ, ಕಳಪೆ ಕಾಮಗಾರಿ ವಿರೋಧಿಸಿ ನಡೆಸಲಿರುವ ಟ್ರ್ಯಾಕ್ಟರ್ ರಾರಯಲಿ ಯಶಸ್ಸಿಗೆ ಆಯಾ ಜಿಲ್ಲೆಯ ಮುಖಂಡರು ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ತಿಳಿಸಿದ್ದಾರೆ.
ಕಾಂಗ್ರೆಸಿಗರಿಗೆ ಸುರ್ಜೇವಾಲಾ ಒಗ್ಗಟ್ಟಿನ ಮಂತ್ರ: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಾವ ಅಭ್ಯರ್ಥಿಗೆ ಟಿಕೆಟ್ ನೀಡಿದರೂ ನಿಮ್ಮ ಸ್ವಕ್ಷೇತ್ರಗಳಲ್ಲಿ ಆ ಅಭ್ಯರ್ಥಿ ಗೆಲವಿಗೆ ಎಲ್ಲರೂ ಒಗ್ಗಟ್ಟಾಗಿ ಕಾರ್ಯ ನಿರ್ವಹಿಸಬೇಕು’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸ್ಪಷ್ಟವಾಗಿ ಹೇಳಿದ್ದಾರೆ. ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಪಕ್ಷದಿಂದ ಯಲಹಂಕದ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಂಡಿದ್ದ ಸರಣಿ ಸಭೆಯಲ್ಲಿ ಹುಬ್ಬಳ್ಳಿ-ಧಾರವಾಡ, ಹಾವೇರಿ, ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ವಿಧಾನಸಭಾ ಚುನಾವಣಾ ಟಿಕೆಟ್ ಆಕಾಂಕ್ಷಿಗಳು, ಪ್ರಮುಖ ನಾಯಕರ ಸಭೆಯಲ್ಲಿ ‘ಒಗ್ಗಟ್ಟಿನ ಮಂತ್ರ’ ಬೋಧಿಸಿದ ಸುರ್ಜೇವಾಲಾ, ಪಕ್ಷ ಅಧಿಕಾರಕ್ಕೆ ಬರಲು ಎಲ್ಲರ ಶ್ರಮವೂ ಅಗತ್ಯ ಎಂಬುದನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ.
ಗ್ರಾಮೀಣ ಪ್ರದೇಶಗಳಿಗೆ ಅತ್ಯಾಧುನಿಕ ದೂರಸಂಪರ್ಕ ವ್ಯವಸ್ಥೆ: ಸಂಸದ ಬಿ.ವೈ.ರಾಘವೇಂದ್ರ
ಈಗಿನಿಂದಲೇ ಚುನಾವಣಾ ಅಖಾಡಕ್ಕಿಳಿದು ರಣತಂತ್ರ ರೂಪಿಸಲು ಮುಂದಾಗಿರುವ ಸುರ್ಜೇವಾಲಾ, ಟಿಕೆಟ್ ಆಕಾಂಕ್ಷಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕಾರ್ಯ ಆರಂಭಿಸಿದ್ದಾರೆ. ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಿ, ಜನ ಬೆಂಬಲವಿರುವವರಿಗೆ ಟಿಕೆಟ್ ನೀಡಲಾಗುವುದು. ಯಾರಿಗೇ ಟಿಕೆಟ್ ನೀಡಿದರೂ ಇನ್ನುಳಿದ ಆಕಾಂಕ್ಷಿಗಳು ಬಂಡಾಯ ಏಳದೇ ಹೊಂದಾಣಿಕೆ ಮಾಡಿಕೊಂಡು ಪಕ್ಷದ ಅಧಿಕೃತ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಕರೆ ನೀಡಿದ್ದಾರೆ. ಯಾವ್ಯಾವ ಜಿಲ್ಲೆಯಲ್ಲಿ ಯಾವ್ಯಾವ ಜಾತಿಯ ಮತದಾರರು ಎಷ್ಟಿದ್ದಾರೆ, ಯಾವ ಜಾತಿಯವರನ್ನು ಚುನಾವಣಾ ಅಖಾಡಕ್ಕೆ ಇಳಿಸಿದರೆ ಅನುಕೂಲವಾಗುತ್ತದೆ ಎಂಬ ನೀಲನಕ್ಷೆಯನ್ನೂ ನೀವೇ ನೀಡಿ. ಟಿಕೆಟ್ ನೀಡುವ ಸಮಯದಲ್ಲಿ ಇದನ್ನೂ ಪರಿಗಣಿಸಲಾಗುವುದು.
