Asianet Suvarna News Asianet Suvarna News

ತಂದೆಗಾಗಿ ಕ್ಷೇತ್ರ ತ್ಯಾಗಕ್ಕೆ ಸಿದ್ಧ: ಸಿದ್ದರಾಮಯ್ಯ ಪುತ್ರ

ಈ ಬಾರಿ ಮತ್ತೆ ಮುಖ್ಯಮಂತ್ರಿಯಾಗುವ ಅವಕಾಶ ಇರುವುದರಿಂದ ನನ್ನ ತಂದೆ ಸಿದ್ದರಾಮಯ್ಯ ಅವರಿಗೆ ವರುಣ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕೇಳಿಕೊಂಡಿದ್ದೇನೆ: ಡಾ.ಯತೀಂದ್ರ ಸಿದ್ದರಾಮಯ್ಯ 

Ready for Constituency Sacrifice for Father Says Dr Yathindra Siddaramaiah grg
Author
First Published Dec 1, 2022, 1:00 PM IST

ಮೈಸೂರು(ಡಿ.01):  ‘ಅಪ್ಪನಿಗಾಗಿ ವರುಣ ಕ್ಷೇತ್ರ ಬಿಟ್ಟುಕೊಡಲು ಸಿದ್ಧ’ ಎಂದು ವರುಣ ಕ್ಷೇತ್ರದ ಹಾಲಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿ ಮತ್ತೆ ಮುಖ್ಯಮಂತ್ರಿಯಾಗುವ ಅವಕಾಶ ಇರುವುದರಿಂದ ನನ್ನ ತಂದೆ ಸಿದ್ದರಾಮಯ್ಯ ಅವರಿಗೆ ವರುಣ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕೇಳಿಕೊಂಡಿದ್ದೇನೆ. ವರುಣ ಕ್ಷೇತ್ರ ಸಿದ್ದರಾಮಯ್ಯನವರ ಪಾಲಿಗೆ ಅದೃಷ್ಟದ ಕ್ಷೇತ್ರ. ಇಲ್ಲಿಂದ ಸ್ಪರ್ಧಿಸಿದಾಗ ಮೊದಲು ವಿರೋಧ ಪಕ್ಷದ ನಾಯಕರಾದರು, ಎರಡನೇ ಬಾರಿ ಮುಖ್ಯಮಂತ್ರಿಯಾದರು. ಈ ಬಾರಿಯೂ ಅವರಿಗೆ ಸಿಎಂ ಆಗುವ ಅವಕಾಶವಿದೆ ಅಂತ ಹೇಳಿದ್ದಾರೆ.

ವರುಣ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಫಿಕ್ಸ್, ಪುತ್ರ ಬಿಟ್ಟು ಕೊಟ್ಟ ಸುಳಿವು 

ಕೋಲಾರ ಸೇರಿದಂತೆ ಹಲವು ಕ್ಷೇತ್ರಗಳು ಅಪ್ಪನಿಗೆ ಸೇಫ್‌ ಇವೆ. ಆದರೆ, ವರುಣಕ್ಕೆ ಬರಲಿ ಅನ್ನೋದು ನನ್ನ ಮತ್ತು ಪಕ್ಷದ ಕಾರ್ಯಕರ್ತರ ಬಯಕೆ. ನನ್ನ ಆಸೆಯನ್ನು ಅಪ್ಪನ ಮುಂದೆ ಹೇಳಿದ್ದೇನೆ. ಆದರೆ, ಅಪ್ಪ ಈವರೆಗೂ ಯಾವ ತೀರ್ಮಾನವನ್ನೂ ಮಾಡಿಲ್ಲ. ಅವರು ವರುಣ ಕ್ಷೇತ್ರದಿಂದ ಸ್ಪರ್ಧಿಸಿದರೆ ನಾನು ಬೇರೆ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ. ಅಪ್ಪನ ಪರವಾಗಿ ನಿಂತು ಕೆಲಸ ಮಾಡುತ್ತೇನೆ ಎಂದರು.
 

Follow Us:
Download App:
  • android
  • ios