ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹೈಕಮಾಂಡ್‌ ಟಿಕೆಟ್‌ ನೀಡಿದರೆ ಚಿಕ್ಕಬಳ್ಳಾಪುರದಿಂದ ಸ್ಪರ್ಧೆಗೆ ರೆಡಿ ಎಂದು ಶಾಸಕ ಪ್ರದೀಪ್ ಈಶ್ವರ್ ತಿಳಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿ, ಬಿಜೆಪಿಯಿಂದ ಮಾಜಿ ಸಚಿವ ಡಾ.ಕೆ.ಸುಧಾಕರ್ ಗೆ ಟಿಕೆಟ್ ಕೊಟ್ಟರೆ, ಕಾಂಗ್ರೆಸ್ ಪಕ್ಷದಿಂದ ನನಗೆ ಟಿಕೆಟ್ ಕೊಡಲಿ, ಸ್ಪರ್ಧೆ ಮಾಡುತ್ತೇನೆ ಎಂದರು.

ಚಿಕ್ಕಬಳ್ಳಾಪುರ (ಜ.12): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹೈಕಮಾಂಡ್‌ ಟಿಕೆಟ್‌ ನೀಡಿದರೆ ಚಿಕ್ಕಬಳ್ಳಾಪುರದಿಂದ ಸ್ಪರ್ಧೆಗೆ ರೆಡಿ ಎಂದು ಶಾಸಕ ಪ್ರದೀಪ್ ಈಶ್ವರ್ ತಿಳಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿ, ಬಿಜೆಪಿಯಿಂದ ಮಾಜಿ ಸಚಿವ ಡಾ.ಕೆ.ಸುಧಾಕರ್ ಗೆ ಟಿಕೆಟ್ ಕೊಟ್ಟರೆ, ಕಾಂಗ್ರೆಸ್ ಪಕ್ಷದಿಂದ ನನಗೆ ಟಿಕೆಟ್ ಕೊಡಲಿ, ಸ್ಪರ್ಧೆ ಮಾಡುತ್ತೇನೆ ಎಂದರು.

ಲೋಕಸಭಾ ಚುನಾವಣೆಗೆ ಚಿಕ್ಕಬಳ್ಳಾಪುರದಿಂದ ಮಾಜಿ ಸಂಸದ ಡಾ.ಎಂ.ವೀರಪ್ಪ ಮೊಯ್ಲಿ, ಎಐಸಿಸಿ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ, ಸಚಿವ ಡಾ.ಎಂ.ಸಿ.ಸುಧಾಕರ್‌ ಸಹೋದರ ಡಾ.ಎಂ.ಸಿ.ಬಾಲಾಜಿ, ಮಾಜಿ ಸಚಿವ ಶಿವಶಂಕರರೆಡ್ಡಿ ಹಾಗೂ ವಿಧಾನ ಪರಿಷತ್‌ ಸದಸ್ಯ ಎಸ್. ರವಿ ಹೆಸರು ಕೇಳಿ ಬರುತ್ತಿದೆ. ಪಕ್ಷ ಯಾರಿಗೇ ಟಿಕೆಟ್‌ ನೀಡಿದರೂ ಅವರನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಹೇಳಿದರು.

ಇದೇ ವೇಳೆ, ಸಂಸದ ಪ್ರತಾಪ್ ಸಿಂಹ ವಿರುದ್ಧ ಹರಿಹಾಯ್ದ ಅವರು, ಈ ಸಲ ಲೋಕಸಭಾ ಚುನಾವಣೆಯಲ್ಲಿ ಮೈಸೂರಿನಲ್ಲಿ ಪ್ರತಾಪ್‌ಗೆ ಸೋಲು ಗ್ಯಾರಂಟಿ. ಯತೀಂದ್ರಣ್ಣ ಗೆಲ್ತಾರೆ ಎಂದು ಪರೋಕ್ಷವಾಗಿ ಯತೀಂದ್ರ ಸಿದ್ದರಾಮಯ್ಯ ಅವರು ಮೈಸೂರಿನಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬಹುದು ಎಂಬ ಸುಳಿವು ನೀಡಿದರು.

ಹಿಂದೂ ವಿರೋಧಿ ಸರ್ಕಾರ ಎಂದು ಸಚಿವೆ ಲಕ್ಷ್ಮೀ ಸಾಬೀತು ಮಾಡಿದ್ದಾರೆ: ಶಾಸಕ ಯಶಪಾಲ್

ಪ್ರತಾಪ್‌ ಸಿಂಹ ಒಬ್ಬ ಮುಠ್ಠಾಳ, ಅಯೋಗ್ಯ. ರಾಜಕೀಯದಲ್ಲಿ 40-50 ವರ್ಷ ಅನುಭವ ಇರುವ ಸಿದ್ದರಾಮಯ್ಯರವರ ಬಗ್ಗೆ ಬಾಯಿಗೆ ಬಂದ ಹಾಗೆ ಮಾತನಾಡ್ತಾರೆ. ಲೋಕಸಭೆಯಲ್ಲಿ ಸ್ಮೋಕ್‌ ಬಾಂಬ್ ಹಾಕಿದವರಿಗೆ ಲೋಕಸಭೆಯ ಒಳಗೆ ಪ್ರವೇಶಿಸಲು ಪಾಸ್ ಕೊಟ್ಟಿರುವ ಅವರು ದೇಶದ್ರೋಹಿಗಳಲ್ವಾ ಎಂದು ಆರೋಪಿಸಿದರು.