ಮಲ್ಲಿಕಾರ್ಜುನ ಖರ್ಗೆಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲು ಸಿದ್ಧ: ಡಿಕೆಶಿ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ದೇಶದ ಆಲ್ ಇಂಡಿಯಾ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಸ್ಥಾನಕ್ಕೇರಿರುವ ಜನಪ್ರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬಯಸಿದರೆ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡುತ್ತೇವೆ.
ಬೆಂಗಳೂರು (ಏ.08): ರಾಜ್ಯದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ದೇಶದ ಆಲ್ ಇಂಡಿಯಾ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಸ್ಥಾನಕ್ಕೇರಿರುವ ಜನಪ್ರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬಯಸಿದರೆ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಲು ಸಿದ್ಧರಾಗಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು, ರಾಜ್ಯದಲ್ಲಿ 1972 ರಿಂದ ಅವರು ಕಾಂಗ್ರೆಸ್ ನಲ್ಲಿ ಇದ್ದವರು. ನಾನು 1985 ರಲ್ಲಿ ಬಂದಿದ್ದೇನೆ. ಕಾಂಗ್ರೆಸ್ ನ ಅತ್ಯಂತ ಹಿರಿಯ ನಾಯಕ ಖರ್ಗೆ ಆಗಿದ್ದಾರೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಏರಿದ್ದಾರೆ. ಪಕ್ಷಕ್ಕೆ ಅವರ ಕೊಡುಗೆ ಜಾಸ್ತಿ ಇದೆ. ನನಗಿಂತಲೂ 20 ವರ್ಷಗಳ ಕಾಲ ಹಿರಿಯ ರಾಜಕಾರಣಿ. ಅವರು ಶಾಸಕಾಂಗ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡಿ ಹೋದರು. ಹೀಗಾಗಿ ಪಕ್ಷನಿಷ್ಠ ಖರ್ಗೆಯವರು ಬಯಸಿದ್ರೆ ನಾನು ನನ್ನ ಅವಕಾಶ ಬಿಟ್ಟು ಕೊಡುತ್ತೀನಿ. ಅವರ ಕೈಕೆಳಗೆ ಕೆಲಸ ಮಾಡಲು ಸಿದ್ದನಿದ್ದೇನೆ ಎಂದು ತಿಳಿಸಿದರು.
ಬೆಂಗಳೂರು ಕೆಪಿಸಿಸಿ ಇಂದಿರಾಗಾಂಧಿ ಭವನ ಏ.16ಕ್ಕೆ ಉದ್ಘಾಟನೆ: ಡಿ.ಕೆ. ಶಿವಕುಮಾರ್ ಮಾಹಿತಿ
ಪ್ರಧಾನಿ ಅವಕಾಶವನ್ನು ತ್ಯಾಗ ಮಾಡಿದ ಸೋನಿಯಾ ಗಾಂಧಿ: ಅಬ್ದುಲ್ ಕಲಾಂ ಅವರು ರಾಷ್ಟ್ರಪತಿ ಆಗಿದ್ದಾಗ ಸೋನಿಯಾ ಗಾಂಧಿಯವರಿಗೆ ಸರ್ಕಾರ ರಚನೆಗೆ ಆಹ್ವಾನ ಕೊಟ್ಟರು. ಪ್ರಧಾನಿ ಆಗುವ ಅವಕಾಶ ಇದ್ದರೂ ಸೋನಿಯಾಗಾಂಧಿಯವರು ಅದನ್ನು ತ್ಯಾಗ ಮಾಡಿದರು. ಇದನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮೊದಲು ತಿಳಿದುಕೊಳ್ಳಲಿ. ರಾಜೀವ್ ಗಾಂಧಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಈ ದೇಶಕ್ಕೆ ಸಾಕಷ್ಟು ತ್ಯಾಗ ಮಾಡಿದ್ದಾರೆ. ಸಿ ಟಿ ರವಿ ಅವರು ಇಂತಹ ಒಂದು ತ್ಯಾಗವನ್ನು ಪಂಚಾಯತಿ ಮಟ್ಟದಲ್ಲಿಯೂ ಮಾಡಿಲ್ಲ ಎಂದು ಟೀಕೆ ಮಾಡಿದರು.
ನಂದಿನಿ ಉಳಿಸುವುದು ನಮ್ಮ ಬದ್ಧತೆ: ರಾಜ್ಯದಲ್ಲಿ ಹಲವು ವರ್ಷಗಳಿಂದ ಬೆಳೆದು ಬಂದಿರುವ ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್) ನಂದಿನಿ ನಮ್ಮವಳು. ನಂದಿನಿ ಅಂದರೆ ರೈತರದ್ದು. ನಮ್ಮ ನಂದಿನಿಯನ್ನು ನಾವು ಬೆಳೆಸಬೇಕು, ರೈತರಿಗೆ ಸಹಕಾರ ಕೊಡಬೇಕು. ಅದನ್ನು ಉಳಿಸಿಕೊಳ್ಳಬೇಕಾಗಿದೆ. ಗುಜರಾತ್ ರೈತರ ಬಗ್ಗೆಯೂ ನಮಗೆ ಗೌರವ ಇದೆ. ಆದರೆ ನಮ್ಮ ರೈತರನ್ನು ಉಳಿಸಿಕೊಳ್ಳಲು ಮೊದಲ ಆಧ್ಯತೆ ನೀಡಬೇಕಾಗಿದ್ದು, ನಮ್ಮ ನಂದಿನಿಯನ್ನು ಉಳಿಸಬೇಕು. ಈ ನಿಟ್ಟಿನಲ್ಲಿ ನಾವೆಲ್ಲ ಬದ್ಧರಾಗಿರಬೇಕು. ನಮ್ಮ ಪಕ್ಷದ ಬದ್ಧತೆಯೂ ಇದೇ ಆಗಿದೆ ಎಂದು ಕೆಪಿಸಿಸಿ ಆಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಮತದಾರರಿಗೆ ಉಡುಗೊರೆ: ಕುಸುಮಾ, ಡಿಕೆಸು ಸೇರಿ ಮೂವರ ವಿರುದ್ಧ ಕೇಸ್
ಬಿಜೆಪಿ ಒತ್ತಡಕ್ಕೆ ಮಣಿದು ಸದಸ್ಯತ್ವ ರದ್ದು: ದೇಶದಲ್ಲಿ ರಾಹುಲ್ ಗಾಂಧಿ ಅವರು ಮಾತನಾಡಿದ್ದ ಬಗ್ಗೆ ಕೋರ್ಟ್‌ನಿಂದ ತೀರ್ಮಾನ ಆಗಿದೆ. ನಂತರ ಕೇಂದ್ರದಲ್ಲಿ ಲೋಕಸಭಾ ಸದಸ್ಯರಾಗಿದ್ದರೂ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯ ಸ್ಥಾನವನ್ನು ಅನರ್ಹತೆ ಮಾಡಲಾಗಿದೆ. ಆದರೆ, ಇಷ್ಟು ಬೇಗ ತೀರ್ಪು ಆಗಿರೋದು ನನಗೆ ಗೊತ್ತಿಲ್ಲ. ಇಲ್ಲಿ ಬಿಜೆಪಿ ನಾಯಕರ ಒತ್ತಡದ ಕಾರಣದಿಂದಲೇ ಲೋಕಸಭಾ ಸ್ಪೀಕರ್ ಅವರು ಈ ತಿರ್ಮಾನ ಮಾಡಿದ್ದಾರೆ ಎಂದು ಹೇಳಿದರು.
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.