ವರ್ಷಾಂತ್ಯದ ಒಳಗೆ ಬಿಬಿಎಂಪಿಗೆ ಚುನಾವಣೆ ನಡೆಸಲು ಸಿದ್ಧ: ಸಿಎಂ ಸಿದ್ದರಾಮಯ್ಯ
ಈ ವರ್ಷದ ಅಂತ್ಯದೊಳಗೆ ಬಿಬಿಎಂಪಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಅದಕ್ಕಾಗಿ ಸಿದ್ಧರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ ಮಾಜಿ ಸದಸ್ಯರಿಗೆ ಸೂಚಿಸಿದ್ದಾರೆ.
ಬೆಂಗಳೂರು (ಜೂ.08): ಈ ವರ್ಷದ ಅಂತ್ಯದೊಳಗೆ ಬಿಬಿಎಂಪಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಅದಕ್ಕಾಗಿ ಸಿದ್ಧರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ ಮಾಜಿ ಸದಸ್ಯರಿಗೆ ಸೂಚಿಸಿದ್ದಾರೆ. ಗೃಹ ಕಚೇರಿ ಕೃಷ್ಣದಲ್ಲಿ ತಮ್ಮನ್ನು ಭೇಟಿಯಾದ ಬಿಬಿಎಂಪಿ ಮಾಜಿ ಮೇಯರ್, ಆಡಳಿತ ಪಕ್ಷದ ಮಾಜಿ ನಾಯಕರು ಹಾಗೂ ಸದಸ್ಯರೊಂದಿಗೆ ಚರ್ಚಿಸಿ, ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಸಿದ್ಧವಾಗಿದೆ. ಅದಕ್ಕಿರುವ ಕಾನೂನು ತೊಡಕನ್ನು ನಿವಾರಿಸಲು ಕ್ರಮ ಕೈಗೊಳ್ಳುತ್ತೇವೆ. ಚುನಾವಣೆಗೆ ಎಲ್ಲರೂ ಸಿದ್ಧರಾಗಿರಬೇಕು ಎಂದರು.
ಈ ವೇಳೆ ಮಾಜಿ ಸದಸ್ಯರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಲಾಗಿರುವ ವಾರ್ಡ್ ಮರುವಿಂಗಡಣೆ ಸಮರ್ಪಕವಾಗಿಲ್ಲ. 198 ವಾರ್ಡ್‌ಗಳನ್ನು ಮರುವಿಂಗಡಿಸಿ 243 ವಾರ್ಡ್‌ಗಳನ್ನಾಗಿ ಮಾಡಲಾಗಿದೆ. ಆದರೆ, ಈ ವೇಳೆ ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳ ವಾರ್ಡ್‌ಗಳನ್ನು ಕಡಿಮೆ ಮಾಡಿ, ಬಿಜೆಪಿ ಶಾಸಕರ ಕ್ಷೇತ್ರ ವ್ಯಾಪ್ತಿಯಲ್ಲಿನ ವಾರ್ಡ್‌ಗಳ ಸಂಖ್ಯೆ ಹೆಚ್ಚಿಸಲಾಗಿದೆ. ಸದ್ಯ ಇರುವ 243 ವಾರ್ಡ್‌ಗಳಂತೆಯೇ ಚುನಾವಣೆ ನಡೆದರೆ ಕಾಂಗ್ರೆಸ್ ಪಕ್ಷಕ್ಕೆ ಅನಾನುಕೂಲವಾಗಲಿದೆ. ಹೀಗಾಗಿ 243 ವಾರ್ಡ್‌ಗಳ ಗಡಿಯಲ್ಲಿ ಬದಲಾವಣೆ ಮಾಡಬೇಕು ಅಥವಾ ಹಿಂದಿದ್ದಂತೆ 198 ವಾರ್ಡ್‌ಗಳನ್ನು ಮರುಸ್ಥಾಪಿಸಿ ಚುನಾವಣೆ ನಡೆಸಬೇಕು ಎಂದು ಮನವಿ ಮಾಡಿದರು.
ಸದ್ಯಕ್ಕೆ ಮೆಟ್ರೋ ಪ್ರಯಾಣ ದರ ಹೆಚ್ಚಿಸುವುದಿಲ್ಲ: ಪರ್ವೇಜ್ ಸ್ಪಷ್ಟನೆ
ಅದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಬಿಎಂಪಿ ಚುನಾವಣೆ ವಿಚಾರ ಸುಪ್ರೀಂಕೋರ್ಚ್‌ನಲ್ಲಿದೆ. ಹೀಗಿರುವಾಗ ವಾರ್ಡ್ ಮರುವಿಂಗಡಣೆ ಸೇರಿ ಇನ್ನಿತರ ವಿಚಾರಗಳನ್ನು ಮುಂದಿಟ್ಟುಕೊಂಡು ಹೋದರೆ ಚುನಾವಣೆ ಮುಂದೂಡಬೇಕಾಗುತ್ತದೆ. ಆಗ ಸುಪ್ರೀಂಕೊರ್ಚ್‌ನಲ್ಲಿ ಸರ್ಕಾರ ಉತ್ತರಿಸಲು ಕಷ್ಟವಾಗುತ್ತದೆ. ವಾರ್ಡ್ ಮರು ವಿಂಗಡಣೆಯಲ್ಲಿ ಲೋಪ ಸರಿಪಡಿಸಲು ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್‌ಗಳ ಮನೆ ಮೇಲೆ ಪೊಲೀಸರ ದಾಳಿ: ಮಾರಕಾಸ್ತ್ರ ಪತ್ತೆ
ಪಾಲಿಕೆ 3 ವಿಭಾಗ ಕ್ಯಾಬಿನೆಟ್ಟಲ್ಲಿ ಚರ್ಚೆ: ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಬಿಎಂಪಿಯನ್ನು ಎರಡು ಅಥವಾ ಮೂರು ಭಾಗವಾಗಿ ವಿಂಗಡಿಸಿದರೆ ಹೇಗೆ ಎಂದು ಪ್ರಶ್ನಿಸಿದರು. ಕೊನೆಗೆ ಈ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಆದರೆ, ಈ ವರ್ಷದ ಅಂತ್ಯದಲ್ಲಿ ಚುನಾವಣೆ ನಡೆಸುತ್ತೇವೆ. ಅದರ ಬಗ್ಗೆ ಎಲ್ಲರೂ ಗಮನಹರಿಸಬೇಕು ಎಂದು ಸೂಚಿಸಿದರು.