ಕೆಪಿಸಿಸಿ ಅಧ್ಯಕ್ಷನನ್ನಾಗಿ ಮಾಡಿದ್ರೆ ಸಚಿವ ಸ್ಥಾನ ಬಿಡಲು ಸಿದ್ಧ: ಕೆಎನ್ ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸನ್ನಿವೇಶ ಸೃಷ್ಟಿಯಾದರೆ ನನ್ನನ್ನ ಕೆಪಿಸಿಸಿ ಅಧ್ಯಕ್ಷನನ್ನಾಗಿ ಮಾಡಲಿ. ನಾನು ಮಂತ್ರಿ ಸ್ಥಾನ ತ್ಯಜಿಸಲು ಸಿದ್ಧನಿದ್ದೇನೆ ಎಂದು ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಬೆಂಗಳೂರು (ಮೇ.26) : ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸನ್ನಿವೇಶ ಸೃಷ್ಟಿಯಾದರೆ ನನ್ನನ್ನ ಕೆಪಿಸಿಸಿ ಅಧ್ಯಕ್ಷನನ್ನಾಗಿ ಮಾಡಲಿ. ನಾನು ಮಂತ್ರಿ ಸ್ಥಾನ ತ್ಯಜಿಸಲು ಸಿದ್ಧನಿದ್ದೇನೆ ಎಂದು ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಚಿವ ಸ್ಥಾನ ತ್ಯಜಿಸಲು ಸಿದ್ಧನಿದ್ದೇನೆ. ಮುಂದೆ ಯಾವ ಚುನಾವಣೆಗೂ ಸ್ಪರ್ಧಿಸುವುದಿಲ್ಲ. ಜತೆಗೆ ಪಕ್ಷಕ್ಕಾಗಿ ತನು-ಮನ ಅರ್ಪಿಸಿ ಕೆಲಸ ಮಾಡಲು ಸಿದ್ಧನಿದ್ದೇನೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆದರೆ ನನ್ನನ್ನು ಕೆಪಿಸಿಸಿ ಅಧ್ಯಕ್ಷನನ್ನಾಗಿ ಮಾಡಲಿ ಎಂದು ಹೇಳಿದರು.ಪೆನ್‌ಡ್ರೈವ್ ಪಿತಾಮಹನೇ
'ಮೋದಿ ಇನ್ನೊಮ್ಮೆ ಗೆದ್ರೆ ತಮ್ಮ ದೇವಸ್ಥಾನ ತಾವೇ ಕಟ್ಕೋತಾರೆ': ಶಿವರಾಜ ತಂಗಡಗಿ ವಾಗ್ದಾಳಿ
ಕುಮಾರಸ್ವಾಮಿ: ರಾಜಣ್ಣ
- ಎಚ್‌ಡಿಕೆಗೆ ಬುದ್ಧಿಭ್ರಮಣೆ ಆಗಿದೆ: ಸಹಕಾರ ಸಚಿವಕನ್ನಡಪ್ರಭ ವಾರ್ತೆ ಬೆಂಗಳೂರು‘ಪೆನ್‌ಡ್ರೈವ್ ಪಿತಾಮಹನೇ ಎಚ್.ಡಿ. ಕುಮಾರಸ್ವಾಮಿ. ಈ ಹಿಂದೆ ಕುಮಾರಸ್ವಾಮಿ ತೋರಿಸಿದ್ದ ಪೆನ್‌ಡ್ರೈವ್‌ನಲ್ಲಿ ಅದೇ ಇತ್ತು. ಇದೀಗ ಅವರಿಗೆ ಬುದ್ಧಿ ಭ್ರಮಣೆ ಆಗಿ ಏನೇನೋ ಮಾತನಾಡುತ್ತಿದ್ದಾರೆ. ದೇವರು ಅವರಿಗೆ ಸದ್ಬುದ್ಧಿ ನೀಡಲಿ’ ಎಂದು ಸಚಿವ ಕೆ.ಎನ್. ರಾಜಣ್ಣ ಕಿಡಿ ಕಾರಿದ್ದಾರೆ.
'ಧರ್ಮಯುದ್ಧ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿಕೆ ಶಿವಕುಮಾರ
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕುಮಾರಸ್ವಾಮಿ ತೋರಿಸಿದ್ದ ಪೆನ್‌ಡ್ರೈವ್‌ನಲ್ಲಿ ಅದೇ ಇತ್ತು. ಪೆನ್‌ಡ್ರೈವ್ ಬಗ್ಗೆ ಎಲ್ಲರಿಗೂ ಹೇಳಿಕೊಟ್ಟಿದ್ದೇ ಕುಮಾರಸ್ವಾಮಿ. ಆಗ ತೋರಿಸಿದ ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂದು ಹೇಳಬೇಕಿತ್ತಲ್ಲ? ಇಷ್ಟು ದಿನ ಯಾಕೆ ಮುಚ್ಚಿಟ್ಟುಕೊಂಡಿದ್ದಾರೆ? ಎಂದು ಕಿಡಿ ಕಾರಿದರು.ಕೈಯಲ್ಲಿ ತಲೆ ಹಿಡಿಯುವವರು ಇದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ಕುಮಾರಸ್ವಾಮಿ ಅವರಿಗೆ ಬುದ್ಧಿ ಭ್ರಮಣೆ ಆಗಿದೆ. ಅವರ ಹೇಳಿಕೆಗಳಿಗೆ ಅವರಿಗಿಂತ ತೀಕ್ಷ್ಣವಾಗಿ ನಾವು ಪ್ರತಿಕ್ರಿಯೆ ನೀಡಬಹುದು. ಅವರ ಸುತ್ತ ಇರುವವರು ಯಾರು ಎಂದು ಆಕ್ರೋಶ ವ್ಯಕ್ತಪಡಿಸಿದರು.