ಈಗಾಗಲೇ ನಿಗಮ ಮಂಡಳಿಯ ನೇಮಕಾತಿಗಾಗಿ ಹೈಕಮಾಂಡ್‌ಗೆ ಲಿಸ್ಟ್ ಕಳುಹಿಸಿದ್ದೇವೆ. ಆದಷ್ಟು ಬೇಗ ಮಂಡಳಿಗಳಿಗೆ ನೇಮಕಾತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

ನವದೆಹಲಿ (ಡಿ.21): ಈಗಾಗಲೇ ನಿಗಮ ಮಂಡಳಿಯ ನೇಮಕಾತಿಗಾಗಿ ಹೈಕಮಾಂಡ್‌ಗೆ ಲಿಸ್ಟ್ ಕಳುಹಿಸಿದ್ದೇವೆ. ಆದಷ್ಟು ಬೇಗ ಮಂಡಳಿಗಳಿಗೆ ನೇಮಕಾತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ನವದೆಹಲಿಯಲ್ಲಿ ಮಾತನಾಡಿ, ಮೊದಲ ಹಂತದಲ್ಲಿ ಶಾಸಕರು, ಎರಡನೆಯ ಹಂತದಲ್ಲಿ ಮಾಜಿ ಶಾಸಕರು, ಬಳಿಕ ಪರಿಷತ್‌ ಸದಸ್ಯರನ್ನು ನೇಮಕ ಮಾಡಲಾಗುತ್ತದೆ. ಇನ್ನು, ಲೋಕಸಭಾ ಚುನಾವಣೆಗೂ ಮುನ್ನವೇ ನಿಗಮ ಮಂಡಳಿಗಳಿಗೆ ನೇಮಕ ಮಾಡಲಾಗುತ್ತದೆ ಎಂದರು. 

ಸೋಮವಾರ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರನ್ನು ಭೇಟಿಯಾಗುತ್ತೇನೆ ಎಂದು ಹೇಳಿದರು. ಇನ್ನು, ಕೋವಿಡ್ ಕುರಿತು ಎಲ್ಲ ಮುಂಜಾಗೃತಾ ಕ್ರಮಗಳ ಬಗ್ಗೆ ಸೂಚನೆ ನೀಡಲಾಗಿದೆ. ಆರೋಗ್ಯ ಇಲಾಖೆಗೆ ಸಭೆ ನಡೆಸಲು ಹಾಗೂ ರಾಜ್ಯದ ಗಡಿಯಲ್ಲಿ ಎಚ್ಚರಿಕೆ ಕ್ರಮವಹಿಸಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಲಂಚ ಕೇಸ್: ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ನಿಗಮ-ಮಂಡಳಿ ಪಟ್ಟಿಗೆ ಇಂದು ವರಿಷ್ಠರ ಒಪ್ಪಿಗೆ?: ನಿಗಮ-ಮಂಡಳಿ ಅಧ್ಯಕ್ಷರ ನೇಮಕಕ್ಕೆ ರಾಜ್ಯದಿಂದ ಅಖೈರುಗೊಳಿಸಿ ಕಳುಹಿಸಿರುವ ಪಟ್ಟಿಗೆ ಅಂಕಿತ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತು ಸಚಿವರ ತಂಡ ಸೋಮವಾರ ಸಂಜೆಯೇ ದೆಹಲಿ ತಲುಪಿದ್ದು, ಮಂಗಳವಾರ ಹೈಕಮಾಂಡ್‌ ಜತೆ ಅಂತಿಮ ಹಂತದ ಚರ್ಚೆ ನಡೆಸಿದ ಬಳಿಕ ಪಟ್ಟಿಗೆ ಒಪ್ಪಿಗೆ ದೊರೆಯುವ ಸಾಧ್ಯತೆಯಿದೆ. ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. 

ಬಳಿಕ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಯಲಿರುವ ಹೈಕಮಾಂಡ್‌ ಸಭೆಯಲ್ಲಿ ನಿಗಮ-ಮಂಡಳಿ ನೇಮಕದ ಬಗ್ಗೆ ಅಂತಿಮ ಚರ್ಚೆ ನಡೆಯಲಿದೆ. ವಾಸ್ತವವಾಗಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್‌ ಸುರ್ಜೇವಾಲಾ ಅವರು ಬುಧವಾರದಿಂದ ವಿದೇಶ ಪ್ರವಾಸಕ್ಕೆ ತೆರಳಲಿದ್ದು, ಮುಂದಿನ ಒಂದೆರಡು ವಾರ ಲಭ್ಯರಿಲ್ಲ. ವಿದೇಶಕ್ಕೆ ತೆರಳುವ ಮುನ್ನ ನಿಗಮ-ಮಂಡಳಿ ಅಂತಿಮಗೊಳಿಸಬೇಕು ಎಂಬ ಕಾರಣಕ್ಕೆ ಮಂಗಳವಾರ ಸಭೆ ಆಯೋಜಿಸಲಾಗಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಮಂಗಳವಾರದ ಸಭೆಯ ನಂತರ ನಿರ್ಧಾರವೊಂದು ಹೊರಬೀಳುವ ಸಾಧ್ಯತೆ ಹೆಚ್ಚು ಎನ್ನಲಾಗುತ್ತಿದೆ.

ನಿಗಮ-ಮಂಡಳಿ ಪಟ್ಟಿ ಫೈನಲ್‌ಗೆ ದಿಲ್ಲೀಲಿ ತಡರಾತ್ರಿವರೆಗೆ ಸರ್ಕಸ್‌: ಪಟ್ಟಿಯಲ್ಲಿ ಬದಲಾವಣೆ?

ರಾಜ್ಯ ಉಸ್ತುವಾರಿ: ಎಲ್ಲವೂ ನಿರೀಕ್ಷಿಸಿದಂತೆ ನಡೆದರೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಗೂ ಮೊದಲೇ 39 ಮಂದಿ ನಿಗಮ-ಮಂಡಳಿ ಅಧ್ಯಕ್ಷರ ಅಂತಿಮ ಪಟ್ಟಿಯೂ ಬಿಡುಗಡೆಯಾಗಲಿದೆ. ನಿಗಮ-ಮಂಡಳಿ ನೇಮಕ ಪಟ್ಟಿಗೆ ಒಪ್ಪಿಗೆ ಪಡೆದೇ ಬರುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೀಡಿರುವ ಹೇಳಿಕೆಯಿಂದ ಆಕಾಂಕ್ಷಿಗಳಲ್ಲಿ ಮತ್ತಷ್ಟು ವಿಶ್ವಾಸ ಮೂಡಿದೆ.