ಸಿದ್ದು ಆಪ್ತನ ಮನೆಗೆ ರೆಡ್ಡಿ ಭೇಟಿ; ಕಾಂಗ್ರೆಸ್ ಮತಬ್ಯಾಂಕ್‌ಗೆ ಲಗ್ಗೆ ಇಟ್ರಾ ಗಣಿಧಣಿ?

ಮಾಜಿ ಸಿಎಂ ಸಿದ್ದರಾಮಯ್ಯನ ಆಪ್ತ ತಾಲೂಕಿನ ವನಬಳ್ಳಾರಿಯ ಕುರುಬ ಸಮಾಜದ ಮುಖಂಡ ಹನುಮಂತ ಅರಸನಕೇರಿ ಅವರ ನಿವಾಸಕ್ಕೆ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಜನಾರ್ದನ ರೆಡ್ಡಿ ಅವರು ಮಂಗಳವಾರ ಸಂಜೆ ದಿಢೀರ್‌ ಭೇಟಿ ನೀಡುವ ಮೂಲಕ ರಾಜಕೀಯ ಸಂಚಲನ ಮೂಡಿಸಿದರು.

Reddy visits Siddaramaiah supporters leader at gangavati rav

ಕೊಪ್ಪಳ (ಜ.4) : ಮಾಜಿ ಸಿಎಂ ಸಿದ್ದರಾಮಯ್ಯನ ಆಪ್ತ ತಾಲೂಕಿನ ವನಬಳ್ಳಾರಿಯ ಕುರುಬ ಸಮಾಜದ ಮುಖಂಡ ಹನುಮಂತ ಅರಸನಕೇರಿ ಅವರ ನಿವಾಸಕ್ಕೆ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಜನಾರ್ದನ ರೆಡ್ಡಿ ಅವರು ಮಂಗಳವಾರ ಸಂಜೆ ದಿಢೀರ್‌ ಭೇಟಿ ನೀಡುವ ಮೂಲಕ ರಾಜಕೀಯ ಸಂಚಲನ ಮೂಡಿಸಿದರು.

ಗಂಗಾವತಿ(Gangavati)ಗೆ ತೆರಳುವ ಮಾರ್ಗ ಮಧ್ಯೆ ಹನುಮಂತ ಅರಸನಕೇರಿ ಅವರ ನಿವಾಸಕ್ಕೆ ಭೇಟಿ ನೀಡಿದ ಜನಾರ್ದನ ರೆಡ್ಡಿ(janardanareddy) ಅವರನ್ನು ಕಂಬಳಿ ಹೊದಿಸಿ, ಕನಕದಾಸರ ಮೂರ್ತಿ ನೀಡಿ ಸನ್ಮಾನಿಸಲಾಯಿತು. ಬಳಿಕ ಜನಾರ್ದನರೆಡ್ಡಿ ಮಾತನಾಡಿ, ನೀವು(ಹನುಮಂತ ಅರಸನಕೇರಿ ಅವರಿಗೆ) ನಮ್ಮ ಪಕ್ಷಕ್ಕೆ ಬನ್ನಿ ಎಂದು ಆಹ್ವಾನಿಸಿದರು. ಬರದೆ ಇದ್ದರೂ ಪರವಾಗಿಲ್ಲ, ನಿಮ್ಮ ಮನೆಯಲ್ಲಿ ಒಂದು ಮತವನ್ನಾದರೂ ನಮ್ಮ ಪಕ್ಷಕ್ಕೆ ನೀಡಿ ಎನ್ನುವ ಮೂಲಕ ಬಹಿರಂಗ ಆಹ್ವಾನ ನೀಡಿದರು.

Ballari: ಜನಾರ್ಧನ ರೆಡ್ಡಿಯ ಕೆಆರ್‌ಪಿಪಿ ಪಕ್ಷದ ಬಾವುಟ ಲೋಕಾರ್ಪಣೆ: ಪ್ರಚಾರ ಕಾರ್ಯ ಆರಂಭಿಸಿದ ಲಕ್ಷ್ಮೀ ಅರುಣಾ

ಇತ್ತೀಚೆಗೆ ಹನುಮಂತ ಅರಸನಕೇರಿ ಅವರ ಅಣ್ಣನ ಮಕ್ಕಳ ಮದುವೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆಗಮಿಸಿದ್ದರು. ಆಗ ಸಿದ್ದರಾಮಯ್ಯ ಅವರು ಜಿಲ್ಲೆಯ ಐದು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದರು. ಇದು ಕಾಂಗ್ರೆಸ್‌ ನಾಯಕರಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಹನುಮಂತ ಅರಸನಕೇರಿ ಅವರ ನಿವಾಸಕ್ಕೆ ಜನಾರ್ದನ ರೆಡ್ಡಿ ಅವರು ಸಹ ಭೇಟಿ ನೀಡಿ ಸಂಚಲನ ಮೂಡಿಸಿದ್ದಾರೆ.

ಜನಾರ್ದನ ರೆಡ್ಡಿಗೆ ಬೆಂಬಲ: ಬಿಜೆಪಿಯಲ್ಲಿ ಮುಂದುವರೆದ ರಾಜೀನಾಮೆ ಪರ್ವ..!

ಹನುಮಂತ ಅರಸನಕೇರಿ ಅವರು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಹರಿಬಿಟ್ಟು, ನಾನು ಇನ್ನು ಮುಂದೆ ಯಾವುದೇ ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಳ್ಳುವುದಿಲ್ಲ, ರಾಜಕೀಯದಿಂದ ಅಂತರ ಕಾಯ್ದುಕೊಳ್ಳುತ್ತೇನೆ ಎಂದು ಹೇಳಿಕೊಂಡಿದ್ದರು. ಇದೀಗ ರೆಡ್ಡಿ ಅವರ ಭೇಟಿಯಿಂದ ರಾಜಕೀಯ ವಲಯದಲ್ಲಿ ನಾನಾ ಚರ್ಚೆಗೆ ಇಂಬು ನೀಡಿದೆ. ಜನಾರ್ದನ ರೆಡ್ಡಿ ಅವರು ಹನುಮಂತ ಅರಸನಕೇರಿ ಅವರನ್ನು ಪಕ್ಷಕ್ಕೆ ಸೆಳೆಯಲು ಯತ್ನಿಸುವುದಕ್ಕಾಗಿಯೇ ಅವರ ಮನೆಗೆ ಭೇಟಿ ನೀಡಿದ್ದಾರೆ ಎಂದೇ ಹೇಳಲಾಗುತ್ತಿದೆ.

Latest Videos
Follow Us:
Download App:
  • android
  • ios