Asianet Suvarna News Asianet Suvarna News

ತುಮಕೂರು ತನಕ ಮೆಟ್ರೋಗೆ ಸಿಎಂ ಸಿದ್ದರಾಮಯ್ಯಗೆ ಮನವಿ: ಸಚಿವ ಪರಮೇಶ್ವರ್

ತುಮಕೂರಿಗೆ ಮೆಟ್ರೋ ರೈಲು ಯೋಜನೆಗೆ ಸಿಎಂ ಮತ್ತು ಡಿಸಿಎಂಗೆ ಮನವಿ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. ಅವರು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಡಿಪಿಅರ್‌ ಮಾಡಲು ಸೂಚಿಸಲಾಗಿದೆ. 

Request to CM Siddaramaiah for Metro till Tumakuru Says Minister Dr G Parameshwar gvd
Author
First Published Jan 29, 2024, 2:00 AM IST

ತುಮಕೂರು (ಜ.29): ತುಮಕೂರಿಗೆ ಮೆಟ್ರೋ ರೈಲು ಯೋಜನೆಗೆ ಸಿಎಂ ಮತ್ತು ಡಿಸಿಎಂಗೆ ಮನವಿ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. ಅವರು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಡಿಪಿಅರ್‌ ಮಾಡಲು ಸೂಚಿಸಲಾಗಿದೆ. ಇದಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಬೇಕು. ಕೇಂದ್ರ ಸರ್ಕಾರದ ಅನುಮತಿ ಬೇಕು. ಪಿಪಿಪಿ ಬಂಡಾವಾಳ ಹೂಡಿಕೆಗೆ ಸಜ್ಜಾದಾಗ ಅನುಮತಿ ಬೇಕು ಎಂದು ತಿಳಿಸಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಆರು ವಾರ್ಡ್‌ಗಳು ಮಾತ್ರ ಸ್ಮಾರ್ಟ್ ಆಗಿವೆ. ಇನ್ನು 29 ಬಾಕಿ ಇವೆ. ಇವುಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕಾಗಿ ಮುಖ್ಯಮಂತ್ರಿಗೆ ಒತ್ತಾಯಿಸಲಾಗುವುದು. 

ತುಮಕೂರು ನಗರದ ವಾರ್ಡ್‌ಗಳ ಅಭಿವೃದ್ಧಿಗೆ ಮಾತ್ರ 500. ಕೋಟಿ ರು. ಕೇಳಲಾಗುವುದು ಎಂದರು.  ಜಿಲ್ಲೆಯ ಒಂದು ಸಾವಿರ ಶಾಲೆಗಳಿಗೆ ಕಾಂಪೌಂಡ್, ಶೌಚಾಲಯ, ಆಟದ ಮೈದಾನ ಸೇರಿದಂತೆ ಇನ್ನಿತರ ಮೂಲಭೂತ ಸೌಲಭ್ಯಗಳನ್ನು ನೀಡಲು 85 ಕೋಟಿ ರೂ. ಅನುದಾನ ಖರ್ಚು ಮಾಡಲಾಗುತ್ತಿದೆ. ಕೆಲ ಶಾಲೆಗಳ ಅಭಿವೃದ್ಧಿ ಕಾರ್ಯ ಮುಗಿಯುತ್ತ ಬಂದಿದೆ. ಸುಸಜ್ಜಿತ ಸೌಲಭ್ಯ ಕಲ್ಪಿಸಲಾಗಿದೆ. ವಿಜ್ಞಾನ, ತಾಂತ್ರಿಕ ಪದವಧರ ಕೋರ್ಸ್‌ಗಳಾದ, ಸೈಬರ್ ಕ್ರೈಂ, ಆರ್ಥಿಕ ಪದವಿಗಳನ್ನು ಪ್ರಾರಂಭಿಸಲು ಹೆಚ್ಚು ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು.

ರಾಜಕಾರಣದ ಮೇಲೆ ಧರ್ಮದ ಪ್ರಭಾವ ಹೆಚ್ಚುತ್ತಿದೆ, ಇದು ಪ್ರಜಾಪ್ರಭುತ್ವಕ್ಕೆ ಮಾರಕ: ವೀರಪ್ಪ ಮೊಯ್ಲಿ

ಹೇಮಾವತಿ ನೀರು 15 ಟಿಎಂಸಿ ಮಾತ್ರ ಬಂದಿದೆ. ಬಾಕಿ ಉಳಿದ ನೀರನ್ನು ಈ ತಿಂಗಳ ಕೊನೆಗೆ ಅಥವಾ ಮುಂದಿನ ತಿಂಗಳ ಮಧ್ಯಭಾಗದಲ್ಲಿ ಹರಿಸುವಂತೆ ಕೋರಲಾಗುವುದು. ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಹಾಸನ ಜಿಲ್ಲಾ ಉಸ್ತುವಾರಿಯಾಗಿರುವುದರಿಂದ ಹೆಚ್ಚು ಅನುಕೂಲವಾಗುತ್ತಿದೆ. ಮಹಾನಗರ ಪಾಲಿಕೆ ವಿಸ್ತರಣೆಗೆ ಪರ ವಿರೋಧ ಸಹಜ. ಒಳ್ಳೆ ದೃಷ್ಟಿಯಿಂದ ಎನು ಮಾಡಬೇಕು ಅದನ್ನು ಮಾಡುತ್ತೇವೆ. ಪದೇಪದೇ ಮುಖ್ಯಮಂತ್ರಿಗಳು ಬರುವುದಿಲ್ಲ. ಹೀಗಾಗಿ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣವನ್ನು ಮುಖ್ಯಮಂತ್ರಿಗಳ ಅಮೃತ ಹಸ್ತದಿಂದ ಉದ್ಘಾಟಿಸಲಾಗುವುದು ಎಂದರು.

ನೇಮಕದ ಬಗ್ಗೆ ನಮ್ಮ ಅನಿಸಿಕೆಯನ್ನೇ ಯಾರೂ ಕೇಳಿಲ್ಲ: ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ವಿಚಾರ ಕಾಂಗ್ರೆಸ್‌ನಲ್ಲಿ ದಿನಕ್ಕೊಂದು ಹೊಸ ಅವಾಂತರ ಸೃಷ್ಟಿಸುತ್ತಿದ್ದು, ಇದೀಗ ಈ ನೇಮಕಾತಿ ವಿಚಾರದಲ್ಲಿ ನಮ್ಮ ಅಭಿಪ್ರಾಯವನ್ನೇ ಕೇಳಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ನಡುವೆ, ಕಳೆದ ಮೂರು ತಿಂಗಳಿನಿಂದ ನಿಗಮ ಮಂಡಳಿ ನೇಮಕಾತಿ ಪ್ರಕ್ರಿಯೆ ನಡೆದಿದ್ದರೂ ಈ ಬಗ್ಗೆ ಚಕಾರವೆತ್ತದ ಪರಮೇಶ್ವರ್‌ ಅವರು ಇನ್ನೇನೂ ಪಟ್ಟಿ ಅಂತಿಮಗೊಳ್ಳುತ್ತಿದೆ ಎನ್ನುವಾಗ ಅಪಸ್ವರ ಎತ್ತಿರುವುದು ಏಕೆ ಎಂಬ ಬಗ್ಗೆಯೂ ಕಾಂಗ್ರೆಸ್‌ ವಲಯದಲ್ಲಿ ಚರ್ಚೆ ಆರಂಭವಾಗಿದೆ.

ಮಂಗಳವಾರ ನಿಗಮ-ಮಂಡಳಿ ನೇಮಕದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಡಾ.ಜಿ. ಪರಮೇಶ್ವರ್‌, ‘ನಿಗಮ-ಮಂಡಳಿ ಮಾಡುವಾಗ ನಮ್ಮನ್ನು ಯಾರೂ ಕೇಳಿಲ್ಲ. ಒಂದೆರಡು ಹೆಸರು ಕೊಡಿ ಎಂದಾಗ ಕೊಟ್ಟಿರಬಹುದು. ಆದರೆ ನಮ್ಮ ಜತೆ ಮಾತನಾಡಿ ಪಟ್ಟಿ ಮಾಡಿಲ್ಲ. ಕಾರ್ಯಕರ್ತರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ಕೊಡುವಾಗ ಜಿಲ್ಲಾವಾರು ಕೆಲಸ ಮಾಡಿರುವವರು ಯಾರು ಎಂಬುದನ್ನು ನಮ್ಮ ಬಳಿ ತಿಳಿದುಕೊಳ್ಳಬೇಕಿತ್ತು’ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಭವಿಷ್ಯದ ವಿದ್ಯುತ್ ಭಾರ ನಿಭಾಯಿಸಲು ಸರ್ಕಾರ ಬದ್ಧ: ಸಚಿವ ಸತೀಶ್‌ ಜಾರಕಿಹೊಳಿ

ಚುನಾವಣೆಯಲ್ಲಿ ಕೆಲಸ ಮಾಡಿದವರು ಯಾರು? ಕೆಲಸ ಮಾಡದವರು ಯಾರು? ಎಂಬುದು ನಮಗೆ ಚೆನ್ನಾಗಿ ಗೊತ್ತಿದೆ. ಕೆಲಸ ಮಾಡಿದವರಿಗೆ ಕೊಡದಿದ್ದರೆ ಕೆಲಸ ಮಾಡಿರುವವರಿಗೆ ಅಸಮಾಧಾನ, ನೋವಾಗುತ್ತದೆ. ಹೀಗಾಗಿ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರು ಜಿಲ್ಲಾ ನಾಯಕರ ಅಭಿಪ್ರಾಯ ಪಡೆದು ಪಟ್ಟಿ ಮಾಡಬೇಕು. ಎಐಸಿಸಿಯು ಇದರ ಜವಾಬ್ದಾರಿ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಿಗೆ ಬಿಡಬೇಕು. ಆದರೆ ಎಐಸಿಸಿಸಿ ಪ್ರಧಾನ ಕಾರ್ಯದರ್ಶಿಗಳೇ ಪಟ್ಟಿ ಮಾಡುತ್ತಿದ್ದಾರೆ. ನಮ್ಮ ಅಭಿಪ್ರಾಯ ಪಡೆಯದ ಕಾರಣದಿಂದಲೇ ಹೀಗೆ (ವಿಳಂಬ) ಆಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Latest Videos
Follow Us:
Download App:
  • android
  • ios