ಬೆಂಗಳೂರು (ಅ.15): ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಿರುವ ಮುನಿರತ್ನ ಅವರು 89.13 ಕೋಟಿ ರು.ಗಿಂತ ಹೆಚ್ಚು ಆಸ್ತಿ ಹೊಂದಿದ್ದು, ದ್ವಿಚಕ್ರ ವಾಹನ, ಕಾರು ಸೇರಿದಂತೆ 30 ವಾಹನಗಳ ಮಾಲಿಕರಾಗಿದ್ದಾರೆ. ಚುನಾವಣಾಧಿಕಾರಿಗೆ ಬುಧವಾರ ಸಲ್ಲಿಕೆ ಮಾಡಿರುವ ಆಸ್ತಿ ವಿವರದಲ್ಲಿ ಮುನಿರತ್ನ ಅವರು ಈ ಬಗ್ಗೆ ಉಲ್ಲೇಖ ಮಾಡಿದ್ದಾರೆ.

ಮುನಿರತ್ನ ಅವರ ಬಳಿ 10.66 ಲಕ್ಷ ರು. ನಗದು ಇದೆ. 26.11 ಕೋಟಿ ರು. ಮೌಲ್ಯದ ಚರಾಸ್ತಿ ಮತ್ತು 51.91 ಕೋಟಿ ರು. ಮೌಲ್ಯದ ಸ್ಥಿರಾಸ್ತಿ ಇದೆ. ಪತ್ನಿ ಬಳಿ 3.98 ಲಕ್ಷ ರು. ನಗದು ಹೊಂದಿದ್ದು, ಅವರ ಹೆಸರಲ್ಲಿ 40.97 ಲಕ್ಷ ರು. ಮೌಲ್ಯದ ಚರಾಸ್ತಿ, 24.14 ಕೋಟಿ ರು. ಮೌಲ್ಯದ ಸ್ಥಿರಾಸ್ತಿ ಇದೆ. ಮುನಿರತ್ನ ವಿರುದ್ಧ ಮೂರು ಪೊಲೀಸ್‌ ಠಾಣೆಯಲ್ಲಿ ಕ್ರಿಮಿನಲ್‌ ಮೊಕದ್ದಮೆ ದಾಖಲಾಗಿರುವ ಬಗ್ಗೆಯೂ ಆಸ್ತಿ ವಿವರದಲ್ಲಿ ನಮೂದಿಸಲಾಗಿದೆ.

RR ನಗರ ಚುನಾವಣೆ: ಗೆಲುವು ನಮ್ಮದೇ ಎನ್ನುವ ನಿರೀಕ್ಷೆಯಲ್ಲಿ ಮುನಿರತ್ನ ..

ವಿವಿಧ ಬ್ಯಾಂಕ್‌, ಹಣಕಾಸು ಸಂಸ್ಥೆಯ ಖಾತೆಯಲ್ಲಿ 1.08 ಕೋಟಿ ರು. ಇದ್ದು, 21.37 ಕೋಟಿ ರು. ಸಾಲ ನೀಡಿದ್ದಾರೆ. ದ್ವಿಚಕ್ರ ವಾಹನ, ಕಾರುಗಳು ಸೇರಿ 1.31 ಕೋಟಿ ರು. ಮೌಲ್ಯದ ವಾಹನಗಳು ಇವೆ. ಮುನಿರತ್ನ ಹೆಸರಲ್ಲಿ 42.03 ಕೋಟಿ ರು. ಸಾಲ ಇದ್ದು, ಪತ್ನಿ ಹೆಸರಲ್ಲಿ 4.38 ಕೋಟಿ ರು. ಸಾಲ ಇದೆ. ಮುನಿರತ್ನ ಹೆಸರಲ್ಲಿ 3 ಕೆ.ಜಿ.ಗೂ ಅಧಿಕ ಚಿನ್ನ, 40.94 ಕೆ.ಜಿ. ಬೆಳ್ಳಿ ಇದ್ದು, 1.23 ಕೋಟಿ ರು. ಮೌಲ್ಯದ್ದಾಗಿದೆ. ಪತ್ನಿ ಬಳಿ 4.40 ಲಕ್ಷ ರು. ಮೌಲ್ಯದ 360 ಗ್ರಾಂ ಚಿನ್ನ ಇದೆ ಎಂದು ಆಸ್ತಿ ವಿವರದಲ್ಲಿ ತಿಳಿಸಲಾಗಿದೆ.