ಬೆಂಗಳೂರು, (ಅ.13):  ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕೊನೆಗಳಿಗೆಯಲ್ಲಿ ಅಂತಿಮವಾಗಿ ಬಿಜೆಪಿ ಮುನಿರತ್ನ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ. 

ಇದರ ಬೆನ್ನಲ್ಲೇ  ಬಿಜೆಪಿಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ರಾಜೀನಾಮೆ ನೀಡಿದ್ದಾರೆ. 

RR ನಗರ, ಶಿರಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ

ಆರ್.ಆರ್. ನಗರ ಯುವ ಮೋರ್ಚಾ ಅಧ್ಯಕ್ಷ ಸಂದೇಶ್ ಬಂಡಪ್ಪ ಅವರು ತಮ್ಮ ರಾಜೀನಾಮೆ ಪತ್ರವನ್ನು ಕ್ಷೇತ್ರದ ಅಧ್ಯಕ್ಷ ಶಿವಣ್ಣಗೌಡರಿಗೆ ರವಾನಿಸಿದ್ದಾರೆ.

ಕಳೆದ 12 ವರ್ಷಗಳಿಂದ ನಾನು ಪಕ್ಷಕ್ಕಾಗಿ ದುಡಿದಿದ್ದೇನೆ. ಪಕ್ಷದಲ್ಲಿ ನಿಷ್ಠಾವಂತರಾಗಿದ್ದ ತುಳಸಿ ಮುನಿರಾಜುಗೌಡರಿಗೆ ಟಿಕೆಟ್ ಸಿಗದ ಕಾರಣ ನಾನು ನೊಂದು ಯುವ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಪತ್ರದಲ್ಲಿ ಸಂದೇಶ್ ಬಂಡಪ್ಪ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.

ಒಂದೇ ದಿನ ಮುನಿರತ್ನಗೆ ಡಬಲ್ ಧಮಾಕಾ..! 

ಸುಪ್ರೀಂ ಕೋರ್ಟ್ ನಲ್ಲಿ ಮುನಿರತ್ನ ವಿರುದ್ಧದ ಚುನಾವಣೆಯಲ್ಲಿ ಅಕ್ರಮವೆಸಗಿ ಗೆಲುವು ಸಾಧಿಸಿದ ಪ್ರಕರಣ ಸಂಬಂಧ ಬಿಜೆಪಿ ಅಭ್ಯರ್ಥ್ಯಿ ತುಳಸಿ ಮುನಿರಾಜುಗೌಡ ಸಲ್ಲಿಸಿದ ಅರ್ಜಿ ವಜಾಗೊಂಡ ಬೆನ್ನಲ್ಲೆ ಅಭ್ಯರ್ಥಿಯನ್ನು ಬಿಜೆಪಿ ಹೈಕಮಾಂಡ್ ಅಂತಿಮಗೊಳಿಸಿ ಘೋಷಣೆ ಮಾಡಿದೆ. 

ತುಳಸಿ ಮುನಿರಾಜುಗೌಡ ಅವರು ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಂದಿದ್ದರಿಂದ ಬಿಎಸ್ ಯಡಿಯೂರಪ್ಪ ಅವರು ಮುನಿರತ್ನ ಅವರಿಗೆ ಟಿಕೆಟ್ ಕೊಡಿಸಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.

ಆದ್ರೆ, ಇದೀಗ ಚುನಾವಣೆಗೂ ಮುನ್ನವೇ ಬಿಜೆಪಿಗೆ ಬಿಗ್ ಶಾಕ್ ಆಗಿದ್ದು, ಮುನಿರತ್ನ ಅವರಿಗೆ ಮತ್ತಷ್ಟು ಆತಂಕ ಶುರುವಾಗಿದೆ.