ಬೆಂಗಳೂರು, (ಡಿ.11): ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ನಡೆಯುತ್ತಿರುವ ಹೋರಾಟದ ಹಿಂದೆ ಆರ್‍ಎಸ್‍ಎಸ್ ಕೈವಾಡ ಇದೆ. ಸಿದ್ದರಾಮಯ್ಯ ಅವರ ನಾಯಕತ್ವವನ್ನು ಒಡೆಯುವ ಹುನ್ನಾರ ನಡೆದಿದೆ ಎಂದು ಕಾಂಗ್ರೆಸ್‍ನ ಕುರುಬ ಸಮುದಾಯದ ಶಾಸಕರು, ಮಾಜಿ ಸಚಿವರು ಹಾಗೂ ನಾಯಕರು ಗಂಭೀರ ಆರೋಪ ಮಾಡಿದ್ದಾರೆ.

ಕುರುಬ ಸಮಾಜದ ಎಸ್ ಟಿ ಹೋರಾಟದ ಕುರಿತು ಇಂದು (ಶುಕ್ರವಾರ) ಬೆಂಗಳೂರನಲ್ಲಿ ಕಾಂಗ್ರೇಸ್ ಶಾಸಕರುಗಳಾದ ಕೆ.ರಾಘವೇಂದ್ರ ಹಿಟ್ನಾಳ ಯತೀಂದ್ರ ಸಿದ್ದರಾಮಯ್ಯ ಮತ್ತು ಸುರೇಶ ಭೈರತಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

'ಹೋರಾಟಕ್ಕೆ ಬಾರದಿರಲು ಸಿದ್ದರಾಮಯ್ಯನವರ ಒಳ ಮರ್ಮ ಗೊತ್ತಿಲ್ಲ' 

ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಇದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 2014ರಲ್ಲಿ ಬೀದರ್, ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿನ ಗೋಂಡಾ ಮತ್ತು ರಾಜಗೊಂಡಾ ಸಮುದಾಯವನ್ನೇ ಹೋಲುವ ಕುರುಬ ಮತ್ತು ಹಾಲುಮತ ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಈಶ್ವರಪ್ಪ ಅವರು ಮೊದಲು ಈ ಶಿಫಾರಸಿಗೆ ಕೇಂದ್ರ ಸರ್ಕಾರದಿಂದ ಅಂಗೀಕಾರ ಪಡೆದುಕೊಳ್ಳಲಿ ಎಂದು ಒತ್ತಾಯಿಸಿದರು. 

ಶಾಸಕ ಬೈರತಿ ಸುರೇಶ್ ಮಾತನಾಡಿ, ಸಿದ್ದರಾಮಯ್ಯ ಅವರು ಎಸ್ಟಿ ಮೀಸಲಾತಿಯ ಹೋರಾಟಕ್ಕೆ ವಿರುದ್ಧವಾಗಿದ್ದಾರೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಕುರುಬ ಸಮುದಾಯದ ಎಲ್ಲಾ ಜನಪ್ರತಿನಿಧಿಗಳು, ಮುಖಂಡರು ಎಸ್ಟಿ ಮೀಸಲಾತಿ ಸಿಗಬೇಕು ಎಂಬ ಹೋರಾಟಕ್ಕೆ ಸಂಪೂರ್ಣ ಬೆಂಬಲರಾಗಿದ್ದಾರೆ. ಇದರಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಆದರೆ, ಈಶ್ವರಪ್ಪ ಅವರು ಸಚಿವರಾಗಿದ್ದುಕೊಂಡು ಯಾರ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.