ಬೆಂಗಳೂರು, [ಜ.05]: ಮಾಜಿ ರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಸಂಬಂಧಿ ಸುಬ್ರಹ್ಮಣ್ಯಮ್ ಶರ್ಮಾ ಇಂದು [ಶನಿವಾರ] ದೆಹಲಿಯಲ್ಲಿ ಬಿಜೆಪಿ ಸೇರ್ಪಡೆಯಾದರು.

ಸುಬ್ರಹ್ಮಣ್ಯಮ್ ಶರ್ಮಾ ಗೌರವರಂ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ [2018] ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಿಂದ MEPಯಿಂದ ಸ್ಪರ್ಧಿಸಿ ಸೋಲು ಕಂಡಿದ್ದರು.

ಇದೀಗ MEP ತೊರೆದು ಬಿಜೆಪಿ ಸೇರಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅನಂತಕುಮಾರ್ ನಿಧನದಿಂದ ತೆರವಾಗಿರುವ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮುಂದಿನ ಲೋಕಸಭಾ ಚುನಾವಣೆಗೆ ಟಿಕೇಟ್ ನೀಡುವಂತೆ ಮನವಿ ಮಾಡಿದ್ದಾರೆ.