ಕೆಲದಿನಗಳ ಹಿಂದಷ್ಟೇ ಭಾರತೀಯ ಜನತಾ ಪಕ್ಷವು ದಾವಣಗೆರೆ ಕ್ಷೇತ್ರಕ್ಕೆ ಬಿಜೆಪಿ ಲೋಕಸಭಾ ಅಭ್ಯರ್ಥಿಯಾಗಿ ಗಾಯಿತ್ರಿ ಸಿದ್ದೇಶ್ವರ್ ಅವರ ಹೆಸರನ್ನು ಘೋಷಿಸಿತ್ತು. ಈ ಬಗ್ಗೆ ಮಾತನಾಡಿದ್ದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ, 'ರಾಜಕೀಯಕ್ಕೆ ಬಂದ ಮೇಲೆ ಹೇಗೆ ಮಾತನಾಡಬೇಕು ಎಂದು ಗೊತ್ತಿರಬೇಕು. ಆದರೆ ಅವರಿಗೆ ಮನೆಯೊಳಗೆ ಅಡುಗೆ ಮಾಡುವುದಕ್ಕಷ್ಟೇ ಬರುತ್ತೆ' ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಬೆಂಗಳೂರು(ಮಾ.30): ದೇಶಾದ್ಯಂತ ಲೋಕಸಭಾ ಚುನಾವಣೆಯ ಕಾವು ಜೋರಾಗುತ್ತಿದೆ. ಹೀಗಿರುವಾಗಲೇ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪನವರ ಸ್ತ್ರೀದ್ವೇಷದ ಮಾತುಗಳನ್ನಾಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಈ ಕುರಿತಾಗಿ ಭಾರತದ ತಾರಾ ಬ್ಯಾಡ್ಮಿಂಟನ್ ಪಟು ಸೈನಾ ನೆಹ್ವಾಲ್, ಕಾಂಗ್ರೆಸ್ ಹಿರಿಯ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ಕೆಲದಿನಗಳ ಹಿಂದಷ್ಟೇ ಭಾರತೀಯ ಜನತಾ ಪಕ್ಷವು ದಾವಣಗೆರೆ ಕ್ಷೇತ್ರಕ್ಕೆ ಬಿಜೆಪಿ ಲೋಕಸಭಾ ಅಭ್ಯರ್ಥಿಯಾಗಿ ಗಾಯಿತ್ರಿ ಸಿದ್ದೇಶ್ವರ್ ಅವರ ಹೆಸರನ್ನು ಘೋಷಿಸಿತ್ತು. ಈ ಬಗ್ಗೆ ಮಾತನಾಡಿದ್ದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ, 'ರಾಜಕೀಯಕ್ಕೆ ಬಂದ ಮೇಲೆ ಹೇಗೆ ಮಾತನಾಡಬೇಕು ಎಂದು ಗೊತ್ತಿರಬೇಕು. ಆದರೆ ಅವರಿಗೆ ಮನೆಯೊಳಗೆ ಅಡುಗೆ ಮಾಡುವುದಕ್ಕಷ್ಟೇ ಬರುತ್ತೆ' ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
KKR ಎದುರು ಆರ್‌ಸಿಬಿ ಸೋಲಿಗೆ ಕಾರಣಗಳೇನು..? ಇಲ್ಲಿದೆ ಇಂಟ್ರೆಸ್ಟಿಂಗ್ ಡೀಟೈಲ್ಸ್
ಇದೀಗ ಈ ಕುರಿತಂತೆ ಸಾಮಾಜಿಕ ಜಾಲತಾಣವಾದ 'ಎಕ್ಸ್'ನಲ್ಲಿ ಬರೆದುಕೊಂಡಿರುವ ಸೈನಾ ನೆಹ್ವಾಲ್, "ಮಹಿಳೆಯನ್ನು ಅಡುಗೆ ಕೋಣೆಗೆ ಮಾತ್ರ ಸೀಮಿತಗೊಳಿಸಬೇಕು ಎಂದು ಕರ್ನಾಟಕದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪನವರು ಹೇಳಿದ್ದಾರೆ. ದಾವಣಗೆರೆಯ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಅವರ ಮೇಲಿನ ಈ ಸೆಕ್ಸಿಸ್ಟ್ ಹೇಳಿಕೆ ಬಗ್ಗೆ ಪಕ್ಷವೂ ಲಡ್ಕಿ ಹೂಂ ಲಡ್ ಸಕ್ತಿ ಹೂಂ(ನಾನು ಹುಡುಗಿಯಿರಬಹುದು, ಆದ್ರೆ ಹೋರಾಡುತ್ತೇನೆ) ಎನ್ನುವ ಕನಿಷ್ಠ ಬೆಂಬಲವನ್ನಾದರೂ ನೀಡಬೇಕು ಎನ್ನುವ ನಿರೀಕ್ಷಿಸುತ್ತೇನೆ.
ನಾನು ದೇಶಕ್ಕಾಗಿ ಹೋರಾಡಿ ಪದಕ ಗೆದ್ದಾಗ, ನಾನು ಏನು ಮಾಡಬೇಕೆಂದು ಕಾಂಗ್ರೆಸ್ ಪಕ್ಷ ಆದ್ಯತೆ ನೀಡುತ್ತಿತ್ತು?. ಮತ್ತೆ ಯಾಕಾಗಿ ಹೆಣ್ಣು ಮಕ್ಕಳು ಹಾಗೂ ಮಹಿಳೆಯರು ತಾವು ಬಯಸಿದ ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಲು ಕನಸು ಕಾಣಿರಿ ಎಂದು ಹೇಳಬೇಕು. ಒಂದು ಕಡೆ ನಾವು ನಾರಿ ಶಕ್ತಿಗೆ ನಮನ ಸಲ್ಲಿಸುತ್ತೇವೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹಿಳಾ ಮೀಸಲಾತಿ ಕಾಯ್ದೆಯನ್ನು ಪಾಸ್ ಮಾಡಲಾಗಿದೆ. ಮತ್ತೊಂದೆಡೆ ಈ ನಾರಿಶಕ್ತಿಗೆ ಅವಮಾನ ಮಾಡುವ ಕೆಲಸ ಆಗುತ್ತಿದೆ. ನಮ್ಮ ನಡುವೆ ಎಂತಹ ಜನರಿದ್ದಾರೆ ಎಂದು ಸೈನಾ ಆಕ್ರೋಶ ಹೊರಹಾಕಿದ್ದಾರೆ.