ಸಭಾಪತಿ ಬಸವರಾಜ ಹೊರಟ್ಟಿ ಬದಲಾವಣೆ ಆಗಲ್ಲ. ಈ ಕುರಿತು ಚರ್ಚೆ ಆಗಿಲ್ಲ. ಪರಿಷತ್ತಿನಲ್ಲಿ ಕಾಂಗ್ರೆಸ್, ಬಿಜೆಪಿ ಸಮಬಲ ಇದೆ. ಈ ಕುರಿತು ಸಿಎಂ, ಡಿಸಿಎಂ, ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಸಲೀಂ ಅಹ್ಮದ್ ಸ್ಪಷ್ಟಪಡಿಸಿದರು.
ಬೆಳಗಾವಿ (ಡಿ.09): ಸಭಾಪತಿ ಬಸವರಾಜ ಹೊರಟ್ಟಿ ಬದಲಾವಣೆ ಆಗಲ್ಲ. ಈ ಕುರಿತು ಚರ್ಚೆ ಆಗಿಲ್ಲ. ಪರಿಷತ್ತಿನಲ್ಲಿ ಕಾಂಗ್ರೆಸ್, ಬಿಜೆಪಿ ಸಮಬಲ ಇದೆ. ಈ ಕುರಿತು ಸಿಎಂ, ಡಿಸಿಎಂ, ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ವಿಧಾನ ಪರಿಷತ್ ಸರ್ಕಾರದ ಮುಖ್ಯಸಚೇತಕ ಸಲೀಂ ಅಹ್ಮದ್ ಸ್ಪಷ್ಟಪಡಿಸಿದರು. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬ್ರೇಕ್‌ಫಾಸ್ಟ್ ಸಭೆ ಮುಗಿದ ಮೇಲೆ ಸಿಎಂ, ಡಿಸಿಎಂ ಕೊಟ್ಟ ಹೇಳಿಕೆಗಳನ್ನು ವಿರೋಧಿಗಳಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಅವರು ಇಡ್ಲಿ ತಿಂದ್ರೋ, ನಾಟಿಕೋಳಿ ತಿಂದ್ರೋ ಅದು ಬೇಕಾಗಿಲ್ಲ.
ಬಿಜೆಪಿ ಸದನದಲ್ಲಿ ಪ್ರಶ್ನೆಗಳನ್ನು ಕೇಳಲಿ. ನಾವು ಉತ್ತರ ಕೊಡಲು ಸಿದ್ದರಿದ್ದೇವೆ ಎಂದರು. ಪರಿಷತ್‌ನಲ್ಲಿ ಖಾಲಿ ಸ್ಥಾನ ಭರ್ತಿ ಮಾಡುವ ಬಗ್ಗೆ ಹಾಗೂ ನಾನು ಸಚಿವನಾಗಬೇಕೋ, ಬೇಡವೋ ಎಂಬುದನ್ನು ಹೈಕಮಾಂಡ್ ತಿರ್ಮಾನ ಮಾಡುತ್ತದೆ ಎಂದು ತಿಳಿಸಿದರು. ಸಿಎಂ ಬದಲಾವಣೆ ಸೇರಿದಂತೆ ಪಕ್ಷದಲ್ಲಿನ ಎಲ್ಲ ವಿಚಾರಗಳ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮವಾಗುತ್ತದೆ. ಪಕ್ಷದ ಅಭಿಪ್ರಾಯ ನಮ್ಮ ಅಭಿಪ್ರಾಯ. ನಮ್ಮ ಮುಂದೆ ಇರೋದು ಸದ್ಯ ಸದನ. ಬಗ್ಗೆ ಅಂತಿಮವಾಗಿ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದು ಪುನರುಚ್ಚರಿಸಿದರು.
ಬಿಜೆಪಿಯವರ ಪ್ರಶ್ನೆ ಕೇಳಲಿ, ಉತ್ತರಿಸಲು ನಾವು ಸಿದ್ಧ
ಬ್ರೆಕ್ ಫಾಸ್ಟ್ ಸಭೆ ಮುಗಿದ ಮೇಲೆ ಸಿಎಂ, ಡಿಸಿಎಂ ಕೊಟ್ಟ ಹೇಳಿಕೆಗಳನ್ನು ವಿರೋಧಿಗಳಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಅವರು ಇಡ್ಲಿ ತಿಂದ್ರೋ, ನಾಟಿಕೋಳಿ ತಿಂದ್ರೋ ಅದು ಬೇಕಾಗಿಲ್ಲ. ಬಿಜೆಪಿ ಸದನದಲ್ಲಿ ಪ್ರಶ್ನೆಗಳನ್ನು ಕೇಳಲಿ ನಾವು ಉತ್ತರ ಕೊಡಲು ಸಿದ್ದರಿದ್ದೇವೆ. ನರೇಂದ್ರ ಮೋದಿ ಅವರು ರಾಜ್ಯಕ್ಕೆ ಏನೂ ಅನ್ಯಾಯ ಮಾಡಿದ್ದಾರೆ ಎಂಬುವುದರ ಬಗ್ಗೆ ಬಗ್ಗೆ ಮಾತನಾಡಲಿ ಎಂದು ವಿಧಾನ ಪರಿಷತ್ ಸರ್ಕಾರದ ಮುಖ್ಯಸಚೇತಕ ಸಲೀಂ ಅಹ್ಮದ್ ತಿಳಿಸಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಮುಂದೆ ಸಭಾಪತಿ ಬಸವರಾಜ ಹೊರಟ್ಟಿ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದರು.
ಈ ಬಗ್ಗೆ ಸಿಎಂ, ಡಿಸಿಎಂ, ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬಸವರಾಜ ಹೊರಟ್ಟಿ ಅವರ ಬದಲಾವಣೆ ಇಲ್ಲ. ಈ ಕುರಿತು ಚರ್ಚೆ ಆಗಿಲ್ಲ. ಪರಿಷತ್ ನಲ್ಲಿ ಕಾಂಗ್ರೆಸ್, ಬಿಜೆಪಿ ಸಮಬಲ ಇದೆ ಎಂದು ಹೇಳಿದರು. ಪರಿಷತ್‌ನಲ್ಲಿ ಖಾಲಿ ಸ್ಥಾನ ಭರ್ತಿ ಮಾಡುವ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನಾನು ಸಚಿವನಾಗಬೇಕೋ, ಬೇಡವೋ ಎಂಬುದನ್ನು ಹೈಕಮಾಂಡ್ ತಿರ್ಮಾನ ನಿರ್ಧರಿಸುತ್ತದೆ. ಎಲ್ಲ ವಿಚಾರಗಳ ಬಗ್ಗೆ ಪಕ್ಷದ ವರಿಷ್ಠರು, ಹೈಕಮಾಂಡ್ ತೀರ್ಮಾನವೇ ಅಂತಿಮವಾಗುತ್ತದೆ. ಪಕ್ಷದ ಅಭಿಪ್ರಾಯವ ನಮ್ಮ ಅಭಿಪ್ರಾಯ. ನಮ್ಮ ಮುಂದೆ ಇರೋದು ಸದ್ಯ ಸದನ. ಸಿಎಂ ಬದಲಾವಣೆ ಬಗ್ಗೆ ಅಂತಿಮವಾಗಿ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದು ಸಲೀಂ ಅಹ್ಮದ್ ಪುನರುಚ್ಚರಿಸಿದರು.


