ಬೆಳಗಾವಿ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ನಟ, ಕಿಚ್ಚ ಸುದೀಪ ಭರ್ಜರಿ ಪ್ರಚಾರ ಮಾಡಿ ಹೋದ ಬೆನ್ನ ಹಿಂದೆಯೇ ಇಂದು ನಟ ಶಿವರಾಜಕುಮಾರ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ ಪರವಾಗಿ ಪ್ರಚಾರ ನಡೆಸಲಿದ್ದಾರೆ. 

ಬೆಳಗಾವಿ(ಮೇ.06): ವಿಧಾನಸಭಾ ಚುನಾವಣೆ ಬಹಿರಂಗ ಪ್ರಚಾರ ಕೊನೆಯ ದಿನ ಬರುತ್ತಿದ್ದಂತೆಯೇ ತಮ್ಮ ಪರ ಪ್ರಚಾರಕ್ಕೆ ಅಭ್ಯರ್ಥಿಗಳು ಸ್ಟಾರ್‌ ನಟರಿಗೆ ಮಣೆಹಾಕಿದ್ದಾರೆ.

ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ನಟ, ಕಿಚ್ಚ ಸುದೀಪ ಭರ್ಜರಿ ಪ್ರಚಾರ ಮಾಡಿ ಹೋದ ಬೆನ್ನ ಹಿಂದೆಯೇ ಈಗ ಇಂದು(ಶನಿವಾರ) ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ ಪರವಾಗಿ ಪ್ರಚಾರ ನಡೆಸಲಿದ್ದಾರೆ. 

ಭ್ರಷ್ಟಾಚಾರ ಬಿಟ್ಟರೆ ಬೇರೇನೂ ಸಾಧನೆ ಮಾಡದ ಬಿಜೆಪಿ: ಲಕ್ಷ್ಮೀ ಹೆಬ್ಬಾಳಕರ

ಸಂಜೆ 4 ಗಂಟೆಗೆ ಬೆಳಗಾವಿ ತಾಲೂಕಿನ ಸುಳೆಬಾವಿಗೆ ಆಗಮಿಸಲಿರುವ ಅವರು ಅಲ್ಲಿನ ಶ್ರೀ ಮಹಾಲಕ್ಷ್ಮೀ ದೇವಿ ದರ್ಶನ ಪಡೆದು, ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಚುನಾವಣೆ ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ. ಸಂಜೆ 5 ಗಂಟೆಗೆ ಶಿಂದೊಳ್ಳಿ ಗ್ರಾಮದಲ್ಲಿ ರೋಡ್‌ ಶೋ ನಡೆಸಿ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ 7 ಗಂಟೆಗೆ ಹೊನ್ನಿಹಾಳ ಗ್ರಾಮದಲ್ಲಿ ರೋಡ್‌ ಶೋ ನಡೆಸಲಿದ್ದಾರೆ.