ಮುಂದೆ ಜೊತೆಯಾಗಿ ಸ್ಪರ್ಧಿಸೋ JDS ಜೋಡಿ: ಜಿಟಿಡಿ ಬಗ್ಗೆ ಮಹತ್ವದ ಸುಳಿವು ಕೊಟ್ಟ ಸಾರಾ..!
ಸಾ.ರಾ.ಮಹೇಶ್ ಮತ್ತೊಂದು ಸ್ಪೋಟಕ ಹೇಳಿಕೆ | ಅಚ್ಚರಿಯ ಸುದ್ದಿ ಹೇಳಿದ ಶಾಸಕ
ಮೈಸೂರು(ಜ.08): ಜಿ.ಟಿ.ದೇವೇಗೌಡರೇ ನಮ್ಮ ನಾಯಕರು. ಮುಂದಿನ ಚುನಾವಣೆಯಲ್ಲಿ ಜಿ.ಟಿ.ದೇವೇಗೌಡರೇ ಮೈಸೂರು ಭಾಗದ ನಾಯಕತ್ವ ವಹಿಸಿಕೊಳ್ಳುತ್ತಾರೆ ಎಂದಿರುವ ಶಾಸಕ ಸಾ.ರಾ.ಮಹೇಶ್ ಮತ್ತೊಂದು ಸ್ಪೋಟಕ ಹೇಳಿಕೆ ಕೊಟ್ಟಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಶಾಸಕ ಸಾರಾ ಅವರಷ್ಟೆ ಅಲ್ಲ ಮುಂದಿನ ಚುನಾವಣೆಯಲ್ಲಿ ಅವರ ಮಗನು ಸ್ಪರ್ಧೆ ಮಾಡುತ್ತಾರೆ ಎನ್ನುವ ಅಚ್ಚರಿಯ ಸುದ್ದಿಯೊಂನ್ನು ಹೇಳಿದ್ದಾರೆ. ಜೆಡಿಎಸ್ ಪಕ್ಷದಿಂದಲೇ ಅಪ್ಪ ಮಗ ಇಬ್ಬರು ಚುನಾವಣೆಗೆ ನಿಲ್ಲುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಯಾರಿಗು ಇರೋದು ಬೇಡ. ನಾನು ಹೇಳ್ತಿದ್ದೇನೆ ಅವರು ಜೆಡಿಎಸ್ ಅಲ್ಲೆ ಇರ್ತಾರೆ.ಎಂದಿದ್ದಾರೆ.
ರಾಗಿಣಿಗೆ ಮತ್ತೊಂದಷ್ಟು ದಿನ ಜೈಲೇ ಗತಿ: ಜಾಮೀನು ಅರ್ಜಿ ವಿಚಾರಣೆ ಮುಂದಕ್ಕೆ
ಚುನಾವಣೆಗು ಮುನ್ನ ಭಿನ್ನಾಭಿಪ್ರಾಯ ಇರೋದು ಜೆಡಿಎಸ್‌ನಲ್ಲಿ ಸಹಜವಾಗಿಬಿಟ್ಟಿದೆ. ಮೊದಲಿನಿಂದಲೂ ಅದು ನಡೆದುಕೊಂಡು ಬಂದಿದೆ. ಆದ್ರೆ ಚುನಾವಣೆ ಬಂದ ತಕ್ಷಣ ನಾವೇಲ್ಲ ಒಂದಾಗುತ್ತೇವೆ. ಬೇರೆಯವರ ರೀತಿ ಭಿನ್ನಾಭಿಪ್ರಾಯಗಳನ್ನ ಒಳಗಡೆ ಇಟ್ಟುಕೊಳ್ಳಲ್ಲ. ಹೊರಗಡೆ ಮಾತನಾಡಿ ಎಲ್ಲ ಸರಿಪಡಿಸಿಕೊಳ್ಳುತ್ತೇವೆ. ನಮ್ಮ ಪಾರ್ಟಿಯ ಇರೋದೆ ಆ ಥರ ಎಂದಿದ್ದಾರೆ.
ಜಿ.ಟಿ.ದೇವೇಗೌಡರನ್ನ ಉಚ್ಚಾಟಿಸುತ್ತೇವೆ ಎಂದು ಕುಮಾರಣ್ಣ ಆಗಲಿ ನಾನಾಗಲಿ ಎಲ್ಲಿಯೂ ಹೇಳಿಲ್ಲ. ಜಿಟಿಡಿ ಸಿಎಂರನ್ನ ಸೋಲಿಸಿದ ದೊಡ್ಡ ರಾಜಕೀಯ ಶಕ್ತಿ. ಅವರನ್ನ ನಾವ್ಯಾಕೆ ಉಚ್ಛಾಟಿಸುತ್ತೇವೆ. ಉಚ್ಛಾಟಿಸುವ ಕೆಲಸ ಜಿಟಿಡಿ ಏನು ಮಾಡಿದ್ದಾರೆ. ಆದ್ರೆ ಜಿಟಿಡಿ ಹೇಳಿದಂತೆ ಜೆಡಿಎಸ್ ಬಳಸಿಕೊಂಡು ಕಾಂಗ್ರೆಸ್ ಹಾಗೂ ಬಿಜೆಪಿಗೆ ಸಹಾಯ ಮಾಡಿದವರನ್ನ ಉಚ್ಛಾಟಿಸಬೇಕಲ್ಲವೇ ಎಂದು ಪ್ರಶ್ನಿಸಿದ್ದಾರೆ. ಅದ್ಯಾರು ಆ ರೀತಿ ಪಕ್ಷ ವಿರೋಧಿ ಕೆಲಸ ಮಾಡಿದ್ದಾರೆ ಅಂತ ಅವರ ಬಳಿಯೇ ಮಾಹಿತಿ ಪಡೆಯುತ್ತೇನೆ ಎಂದಿದ್ದಾರೆ.