Asianet Suvarna News Asianet Suvarna News

ನೋವಾಗಿದ್ದರೆ ವಿಷಾದ, ಹೇಳಿಕೆ ವಾಪಸ್ ಪಡೆದು ತನಿಖೆಗೆ ಆಗ್ರಹಿಸಿ ಸತೀಶ್ ಜಾರಕಿಹೊಳಿ!

ವಿಕಿ ಪಿಡಿಯಾ ಪುಸ್ತಕಗಳ ಆಧಾರದ ಮೇಲೆ ಹಿಂದೂ ಪದದ ಮೂಲ ಹಾಗೂ ಅರ್ಥವನ್ನು ಹೇಳಿದ್ದೇನೆ. ಈ ವಿಚಾರ ಚರ್ಚೆಯಾಗಬೇಕು ಎಂದಿದ್ದೇನೆ. ಆದರೆ ನನ್ನ ವಿರುದ್ದ ಅಪಪ್ರಚಾರ ಮಾಡಲಾಗಿದೆ ಎಂದು ಸತೀಶ್ ಜಾರಕಿಗೊಳಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.  

Satish jarkiholi apologies if any one hurt by Hindu word and Origin remark writes CM Bommai to form inquiry committee ckm
Author
First Published Nov 9, 2022, 6:35 PM IST

ಬೆಳಗಾವಿ(ನ.09): ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಸಂಕಷ್ಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಿಂದೂ ಪದದ ಮೂಲ, ಹಿಂದೂ ಭಾರತೀಯ ಪದ ಅಲ್ಲ, ಪರ್ಶಿಯನ್ ಮೂಲವಾಗಿದೆ. ಹಿಂದೂ ಪದವನ್ನು ನಮ್ಮ ಮೇಲೆ ಹೇರುವುದೇಕೆ? ಹಿಂದೂ ಪದದ ಅರ್ಥ ತೀರಾ ಕೆಟ್ಟದಾಗಿದೆ ಎಂದು ತುಂಬಿದ ಸಭೆಯಲ್ಲಿ ಮಾತನಾಡಿ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು. ಆದರೆ ಹಿಂದೂ ವಿರೋಧ ಹೇಳಿಕೆಯಿಂದ ಸತೀಶ್ ಜಾರಕಿಹೊಳಿ ವಿರುದ್ದ ಭಾರಿ ಪ್ರತಿಭಟನೆ, ಆಕ್ರೋಶ ವ್ಯಕ್ತವಾಗಿದೆ. ಇತ್ತ ಕಾಂಗ್ರೆಸ್ ನಾಯಕರೇ ಸತೀಶ್ ಮಾತನ್ನು ಖಂಡಿಸಿದ್ದಾರ. ಇದರಿಂದ ಇಕ್ಕಟ್ಟಿಗೆ ಸಿಲುಕಿದ ಸತೀಶ್ ಜಾರಕಿಹೊಳಿ ಇದೀಗ ಯು ಟರ್ನ್ ಹೊಡೆದಿದ್ದಾರೆ. ತಮ್ಮ ಹೇಳಿಕೆಯಿಂದ ನೋವಾಗಿದ್ದರೆ ವಿಷಾಧಿಸುತ್ತೇನೆ. ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತಿದ್ದೇನೆ ಎಂದಿದ್ದಾರೆ. ಆದರೆ ಇಷ್ಟಕ್ಕೆ ಸತೀಶ್ ಜಾರಕಿಹೊಳಿ ಸುಮ್ಮನಾಗಿಲ್ಲ. ಇದರ ಜೊತೆಗೆ ಸಿಎಂಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ತನ್ನ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ. ಹಿಂದೂ ವಿರೋಧಿ ಎಂದು ಬಂಬಿಸಲಾಗುತ್ತಿದೆ.  ಈ ಪ್ರಕರಣದ ಕುರಿತು ಸಮಿತಿ ರಚಿಸಿ ತನಿಖೆಗೆ ಆಗ್ರಹಿಸಿದ್ದಾರೆ.

ಹಿಂದೂ ಶಬ್ದ ಪರ್ಷಿಯನ್ ಭಾಷೆಯಿಂದ ಬಂದಿದೆ. ಇದು ಭಾರತ ದೇಶಕ್ಕೆ ಹೇಗೆ ಬಂತು? ಹಲವಾರು ಲೇಖನಗಳಲ್ಲಿ ಹಿಂದೂ ಎಂಬ ಪದದ ಅರ್ಥ ಕಟ್ಟದಾಗಿದೆ ಎಂದು ಬರೆದಿರುತ್ತಾರೆ.  ಈ ಕುರಿತು  ಸಾರ್ವಜನಿಕವಾಗಿ ಚರ್ಚೆ ಆಗಬೇಕಾಗಿರುವುದು ಬಹಳ ಅವಶ್ಯಕತೆ ಇದೆ ಎಂದಿದ್ದೇನೆ. ಆದರೆ ಹಿಂದೂ ವಿರೋಧ ಹೇಳಿಕೆ ನೀಡಿಲ್ಲ ಎಂದು ಸತೀಶ್ ಜಾರಕಿಹೊಳಿ ಸಮರ್ಥನೆ ನೀಡಿದ್ದಾರೆ.

ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ: ಕಾಂಗ್ರೆಸ್‌ಗೀಗ ಸತೀಶ್‌ ಜಾರಕಿಹೊಳಿ ಬಿಸಿತುಪ್ಪದಂತೆ

ಈ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಸತೀಶ್ ಜಾರಕಿಹೊಳಿ ಪತ್ರ ಬರೆದಿದ್ದಾರೆ. 06-11-2022 ರಂದು ನಿಪ್ಪಾಣಿಯಲ್ಲಿ ಜರುಗಿದ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಇದರ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಈ ಕೆಳಕಂಡ ವಿಷಯಗಳನ್ನು ಪ್ರಸ್ತಾಪಿಸಿದ್ದೇನೆ. ಹಿಂದೂ ಶಬ್ದ ಪರ್ಷಿಯನ್ ಭಾಷೆಯಿಂದ ಬಂದಿದೆ.  ಇದು ಭಾರತ ದೇಶಕ್ಕೆ ಹೇಗೆ ಬಂತು? ಹಲವಾರು ಲೇಖನಗಳಲ್ಲಿ ಹಿಂದೂ ಎಂಬ ಪದದ ಅರ್ಥ ಕಟ್ಟದಾಗಿದೆ ಎಂದು ಬರೆದಿರುತ್ತಾರೆ ಅಂತಾ ಹೇಳಿರುತ್ತೇನೆ ಮತ್ತು ಇದು ಸಾರ್ವಜನಿಕವಾಗಿ ಚರ್ಚೆ ಆಗಬೇಕಾಗಿರುವುದು ಬಹಳ ಅವಶ್ಯಕತೆ ಇದೆ ಎಂದು ಹೇಳಿದ್ದೇನೆ. 

ವೀಕಿಪಿಡಿಯಾ, ಪುಸ್ತಕಗಳು, ಶಬ್ದಕೋಶಗಳು ಮತ್ತು ಇತಿಹಾಸಕಾರರ ಬರಹಗಳ ಉಲ್ಲೇಖದ ಮೇಲೆ ಮಾತನಾಡಿದ್ದೇನೆ. ಆದರೆ  ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೊರಟಿರುತ್ತಾರೆ. ಜೊತೆಗೆ ನನಗೆ ತೇಜೋವಧೆ ಹಾಗೂ ಹಾನಿವುಂಟು ಮಾಡುವ ವ್ಯವಸ್ಥಿತ ಪಿತೂರಿ ನಡೆದಿದೆ. ಮೇಲಿನ ಎಲ್ಲ ಅಂಶಗಳನ್ನು ಪರಿಶೀಲಿಸಲು ಮತ್ತು ನೈಜ ಸ್ಥಿತಿಯನ್ನು ವಿವರಿಸದೇ ಈ ಅವಾಂತರ ಸೃಷ್ಟಿಸಿದವರ ಮೇಲೆ ತನಿಖೆ ಮಾಡುವಂತೆ ವಿನಂತಿಸಿಕೊಳ್ಳುತ್ತೇನೆ.  ಈ ಕುರಿತು ತಕ್ಷಣ ತನಿಖಾ ಸಮಿತಿ ರಚಿಸಬೇಕು ಎಂದು ಸತೀಶ್ ಜಾರಕಿಹೊಳಿ ಪತ್ರದಲ್ಲಿ ಹೇಳಿದ್ದಾರೆ. 

ಸತೀಶ್‌ ಜಾರಕಿಹೊಳಿ ಹೇಳಿಕೆಯನ್ನು ನಾನು ಸಮರ್ಥಿಸುವುದಿಲ್ಲ: ಡಿಕೆಶಿ

ನಿಪ್ಪಾಣಿಯಲ್ಲಿ ಜರುಗಿದ ಮಾನವ ಬಂಧುತ್ವ ವೇದಿಕೆಯ ಮನೆ ಮನೆಗೆ ಬುದ್ಧ, ಬಸವ, ಅಂಬೇಡ್ಕರ, ಕಾರ್ಯಕ್ರಮದಲ್ಲಿ ನಾನು ಮಾತನಾಡಿದ ಆ ಒಂದು ಮಾತು ವಿವಾದಕ್ಕಿಡಾಗಿದೆ. ಅಲ್ಲದೇ ಅದನ್ನು ತಿರುಚಿ ಅಪಪ್ರಚಾರ ಗೊಳಿಸುತ್ತಿರುವುದರಿಂದ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಬಾರದು ಎಂಬ ಸದುದ್ದೇಶದಿಂದ  ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ಈ ಹೇಳಿಕೆಯಿಂದ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ ಎಂದು ಸತೀಶ ಜಾರಕಿಹೊಳಿ ಪತ್ರದಲ್ಲಿ ಬರೆದಿದ್ದಾರೆ.
 

Follow Us:
Download App:
  • android
  • ios