ಚುನಾವಣೆ ಸೋಲಿನ ಹೊಣೆ ಹೊತ್ತು ಡಿಕೆಶಿ ರಾಜೀನಾಮೆ ನೀಡಬೇಕೆಂಬ ಈಶ್ವರಪ್ಪ ಒತ್ತಾಯ ವಿಚಾರ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ತಿರುಗೇಟು ಕೊಟ್ಟಿದ್ದಾರೆ.

ಬೆಂಗಳೂರು, (ಡಿ.08) ಚುನಾವಣೆ ಸೋಲಿನ ಹೊಣೆ ಹೊತ್ತು ಡಿಕೆಶಿ ರಾಜೀನಾಮೆ ನೀಡಬೇಕೆಂಬ ಈಶ್ವರಪ್ಪ ಹೇಳಿಕೆಗೆ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ತಿರುಗೇಟು ಕೊಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂದು (ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ಸಾಮೂಹಿಕ ನಾಯಕತ್ವ. ಸೋಲಿನ ಹೊಣೆಗೆ ಡಿ.ಕೆ ಶಿವಕುಮಾರ್ ಒಬ್ಬರೇ ಕಾರಣವಲ್ಲ. ಅವರು ರಾಜೀನಾಮೆ ಕೊಡಬೇಕಾದ ಅಗತ್ಯವಿಲ್ಲ. ಉಪಚುನಾವಣೆಯಲ್ಲಿ ಆಡಳಿತಾರೂಢ ಪಕ್ಷವೇ ಗೆಲ್ಲುತ್ತೆ. ಹಾಗಾಗಿ ರಾಜೀನಾಮೆ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್‌ಗೆ ಬಿಗ್ ಶಾಕ್: ರಾಜಕೀಯ ನಿವೃತ್ತಿ ಘೋಷಿಸಿದ ಕರ್ನಾಟಕದ ಕೈ ಹಿರಿಯ ನಾಯಕ

ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈಗ ಕಾಂಗ್ರೆಸ್ ಅಧಿಕಾರದಿಂದ ದೂರ ಇರಬಹುದು. ಆದರೆ, ರಾಷ್ಟ್ರಮಟ್ಟದಲ್ಲಿ ಮತದಾನ ಪ್ರಮಾಣ ನಮಗೆ ಜಾಸ್ತಿ ಇದೆ. ಆದರೂ ಹೆಚ್ಚಿನ ಸ್ಥಾನ ಗೆಲ್ಲಲು ಸಾಧ್ಯವಾಗಿಲ್ಲ ಎಂದರು.

ಸೋಲು, ಗೆಲುವು ಸಾಮಾನ್ಯ. ಎಪ್ಪತ್ತು ವರ್ಷದಲ್ಲಿ ಎರಡ್ಮೂರು ಬಾರಿ ಹೀಗೆ ಆಗಿದೆ. ಮತ್ತೆ ಕಾಂಗ್ರೆಸ್ ಗೆ ಕಾಲ ಬಂದೇ ಬರಲಿದೆ. ನಮ್ಮ ಪಕ್ಷಕ್ಕೆ ಮೇಲೆ ಬರುವ ಶಕ್ತಿ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.