ಶೀಘ್ರ ನಡೆಯುವ ಬೆಳಗಾವಿ ಲೋಕಸಭಾ ಚುನಾವಣೆ ಟಿಕೆಟ್ ವಿಚಾರಸಾಕಷ್ಟು ಸದ್ದಾಗುತ್ತಿದೆ. ಚುನಾವಣೆಯಲ್ಲಿ ಸ್ಪರ್ಧಿಸಲು ಈ ನಾಯಕಗೆ ಸೂಚಿಸಲಾಗಿದೆ ಎನ್ನುವ ಮಾತುಗಳು ಕೇಳಿ ಬಂದಿದೆ. 

ಬೆಳಗಾವಿ (ಫೆ.01): ಬೆಳಗಾವಿ ಲೋಕಸಭಾ ಉಪಚುನಾವಣೆಗೆ ತಮಗೆ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಕರೆ ಮಾಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಹುಲ್ ಗಾಂಧಿ ಕರೆ ಮಾಡಿ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಡ ಹೇರಿದ್ದಾರೆ ಎಂದು ಮಾಧ್ಯಮಗಳ ವರದಿಯನ್ನು ಅಲ್ಲಗೆಳೆದ ಅವರು, ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವೆ ಎಂದಷ್ಟೇ ತಿಳಿಸಿದರು. 

ಉಪಚುನಾವಣೆ ದಿನಾಂಕ ಘೋಷಣೆ ಆಗುತ್ತಿದ್ದಂತೆ ಅಭ್ಯರ್ಥಿ ಹೆಸರು ಹೇಳಲಾಗುವುದು. ನಾಲ್ವರ ಹೆಸರು ಕೇಳಿಬಂದಿದೆ. ಅದರಲ್ಲಿ ಒಬ್ಬರಿಗೆ ಟಿಕೆಚ್‌ ನೀಡಲಾಗುತ್ತದೆ. ಈ ಕುರಿತು ಚರ್ಚೆ ನಡೆಯುತ್ತಿದೆ ಎಂದು ಹೇಳಿದರು. 

ಬಿಜೆಪಿಯದು ದೊಂಬರಾಟದ ಸರ್ಕಾರ: ಜಾರಕಿಹೊಳಿ ...

ಇದೇವೇಳೆ ಪ್ರಕಾಶ ಹುಕ್ಕೇರಿ ಅವರಿಗೆ ಟಿಕೆಟ್‌ ನೀಡುವುದು ಹೈಕಮಾಂಡ್‌ಗೆ ಬಿಟ್ಟವಿಚಾರ. ಇಲ್ಲಿಯೂ ಅಭ್ಯರ್ಥಿಗಳಿದ್ದಾರೆ. ತಮ್ಮ ಕ್ಷೇತ್ರವನ್ನೇ ಮರಳಿ ಪಡೆಯಲು ಅವರಿಗೆ ಇನ್ನೂ ಮೂರು ವರ್ಷ ಅವಕಾಶವಿದೆ ಎಂದು ಹೇಳಿದರು.