ಸ್ಮಶಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ: ರಾಹುಕಾಲದಲ್ಲಿ ನಾಮಪತ್ರ ಸಲ್ಲಿಕೆ- ಸತೀಶ

ಪ್ರಸಕ್ತ ವಿಧಾನಸಭೆ ಚುನಾವಣಾ ಪ್ರಚಾರಕ್ಕಾಗಿ ವಿಶೇಷ ವಾಹನವನ್ನು ತಯಾರಿಸಲಾಗಿದ್ದು, ನಾಲ್ಕೈದು ದಿನಗಳಲ್ಲಿ ಸ್ಮಶಾನದಲ್ಲಿ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರ ಆರಂಭಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಹೊಳಿ ತಿಳಿಸಿದರು.

satish jarkiholi worship at the cemetery and launch the campaign at belgum rav

ಬೆಳಗಾವಿ (ಏ.3): ಪ್ರಸಕ್ತ ವಿಧಾನಸಭೆ ಚುನಾವಣಾ ಪ್ರಚಾರಕ್ಕಾಗಿ ವಿಶೇಷ ವಾಹನವನ್ನು ತಯಾರಿಸಲಾಗಿದ್ದು, ನಾಲ್ಕೈದು ದಿನಗಳಲ್ಲಿ ಸ್ಮಶಾನದಲ್ಲಿ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರ ಆರಂಭಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಹೊಳಿ(Satish Jrkiholi) ತಿಳಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಚಾರಕ್ಕೆ ವಿಶೇಷ ವಾಹನವನ್ನು ತಯಾರಿಸಲಾಗಿದ್ದು, ನಾಲ್ಕು ಐದು ದಿನದಲ್ಲಿ ಸ್ಮಶಾನದಲ್ಲಿ ವಾಹನ ಪೂಜೆ ಸಲ್ಲಿಸಿ ಚುನಾವಣಾ ಕಣಕ್ಕೆ ಇಳಿಯಲಾಗುವುದು ಮತ್ತು ರಾಹು ಕಾಲದಲ್ಲಿ ನಾಮಪತ್ರ ಸಲ್ಲಿಸಲಾಗುವುದು ಎಂದರು.

ಅಭಿವೃದ್ಧಿ ಕಾರ್ಯಗಳಲ್ಲಿ ತಾರತಮ್ಯ ಮಾಡಿಲ್ಲ: ಬಾಲಚಂದ್ರ ಜಾರಕಿಹೊಳಿ

ನಾವು ಹೆಚ್ಚು ಮೌಢ್ಯಕ್ಕೆ ಒತ್ತು ನೀಡುವುದಿಲ್ಲ. ಬಸವ ತತ್ವ, ಅಂಬೇಡ್ಕರ್‌, ಬುದ್ಧನ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮೌಢ್ಯಕ್ಕೆ ಸೆಡ್ಡುಹೊಡೆದು ಹಲವು ಕಾರ್ಯಕ್ರಮಗಳನ್ನು ಮಾಡಿದ್ದೇವೆ. ಅದರಂತೆ ಚುನಾವಣಾ ಪ್ರಚಾರದ ವಾಹನಕ್ಕೆ ಸ್ಮಶಾನದಲ್ಲಿ ಪೂಜೆ ಸಲ್ಲಿಸಿ ರಾಹು ಕಾಲದಲ್ಲಿ ನಾಮಪತ್ರ ಸಲ್ಲಿಸಲಾಗುವುದು ಎಂದರು.

ಅಲ್ಲದೇ, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಲಕ್ಷ್ಮೇ ಹೆಬ್ಬಾಳಕರ ಪರ(Lakshmi hebbalkar) ಪ್ರಚಾರ ನಡೆಸುತ್ತೇನೆ. ಈಗಾಗಲೇ ಎರಡ್ಮೂರು ಬಾರಿ ಗ್ರಾಮೀಣ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದು, ಮತ್ತೆ ಪ್ರಚಾರಕ್ಕೆ ಹೋಗುವುದಾಗಿ ತಿಳಿಸಿದರು.

ಕಾಂಗ್ರೆಸ್‌ ಪಕ್ಷ ತೊರೆದವರು ಮತ್ತೆ ಪಕ್ಷಕ್ಕೆ ಮರಳಿ ಬರುತ್ತಾರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷ ಬಿಟ್ಟು ಹೋದವರು ಮತ್ತೆ ಕೆಲವರು ಕೊನೆ ಗಳಿಗೆಯಲ್ಲಿ ಬಂದರೂ ಅಚ್ಚರಿ ಪಡಬೇಕಿಲ್ಲ, ಕಾದು ನೋಡೋಣ ಎಂದರು.

ಹೆಚ್ಚಿನ ಲೀಡ್‌ ನೀಡಿ ಗೆಲ್ಲಿಸುವ ಹೊಣೆ ನಿಮ್ಮದು: ಬಾಲಚಂದ್ರ ಜಾರಕಿಹೊಳಿ

ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಆಪ್ತನಿಂದ ಲಂಚ ಸ್ವೀಕಾರ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಶಾಸಕರ ಹೆಸರಿನಲ್ಲಿ ಈ ರೀತಿ ಬಹಳ ಕಡೆ ಆಗುತ್ತವೆ. ನಾನು ನೋಡಿದ್ದೇನೆ ಅವರ ಹೆಸರು ಹೇಳಿ ಹಣ ತೆಗೆದುಕೊಂಡಿದ್ದಾರೆ. ಅದು ಎಷ್ಟರ ಮಟ್ಟಿಗೆ ಸಂಬಂಧ ಇದೆಯೋ? ಇಲ್ಲೋ? ಅನ್ನೋದು ಹೇಳಲಿ. ಈ ಬಗ್ಗೆ ತನಿಖೆ ಮಾಡಿದಾಗ ಯಾರು? ಏನು ಮತ್ತು ಅದರ ಹಿಂದೆ ಯಾರಿದ್ದಾರೆ ಎನ್ನುವುದು ತಿಳಿಯುತ್ತದೆ ಎಂದರು.

Latest Videos
Follow Us:
Download App:
  • android
  • ios