ಬಿಜೆಪಿ ದಲಿತರನ್ನು ಹೇಗೆ ತುಳಿಯುತ್ತಿದೆ ಎಂದು ತಿಳಿಸಲು ಎಸ್ಸಿ ಎಸ್ಟಿ ಸಮಾವೇಶ: ಡಾ.ಜಿ.ಪರಮೇಶ್ವರ
ಬಿಜೆಪಿ ಸರ್ಕಾರದಲ್ಲಿ ಪರಿಶಿಷ್ಟರ ಮೇಲೆ ದೌರ್ಜನ್ಯ ಹೆಚ್ಚಾಗಿರುವುದರ ಜೊತೆಗೆ, ಸರ್ಕಾರದ ಯೋಜನೆಗಳು ವಿಫಲವಾಗಿವೆ. ಸರ್ಕಾರದಲ್ಲಿ ಸಾಕಷ್ಟುಭ್ರಷ್ಟಾಚಾರ ನಡೆದಿದ್ದು, ಇದನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಜ. 8 ರಂದು ಪರಿಶಿಷ್ಟಜಾತಿ ಮತ್ತು ಪಂಗಡಗಳ ಬೃಹತ್ ಸಮಾವೇಶವನ್ನು ಚಿತ್ರದುರ್ಗದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದರು.
ಶಿವಮೊಗ್ಗ (ಜ.6) : ಬಿಜೆಪಿ ಸರ್ಕಾರದಲ್ಲಿ ಪರಿಶಿಷ್ಟರ ಮೇಲೆ ದೌರ್ಜನ್ಯ ಹೆಚ್ಚಾಗಿರುವುದರ ಜೊತೆಗೆ, ಸರ್ಕಾರದ ಯೋಜನೆಗಳು ವಿಫಲವಾಗಿವೆ. ಸರ್ಕಾರದಲ್ಲಿ ಸಾಕಷ್ಟುಭ್ರಷ್ಟಾಚಾರ ನಡೆದಿದ್ದು, ಇದನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಜ. 8 ರಂದು ಪರಿಶಿಷ್ಟಜಾತಿ ಮತ್ತು ಪಂಗಡಗಳ ಬೃಹತ್ ಸಮಾವೇಶವನ್ನು ಚಿತ್ರದುರ್ಗದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದರು.
ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ಸಮುದಾಯಗಳಿಗೆ ಬಿಜೆಪಿ(BJP govt) ಸರ್ಕಾರದಿಂದ ನ್ಯಾಯ ದೊರಕಿಲ್ಲ. ಪರಿಶಿಷ್ಟರ ಕಲ್ಯಾಣ ಯೋಜನೆಗಳಲ್ಲಿ ಕೋಟ್ಯಂತರ ರು. ಅವ್ಯವಹಾರ ನಡೆದಿದೆ. ಇದೆಲ್ಲವನ್ನು ಜನರಿಗೆ ತಿಳಿಸಬೇಕಾಗಿದೆ. ಜನವರಿ 8 ರಂದು ಚಿತ್ರದುರ್ಗದಲ್ಲಿ ನಡೆಯುವ ಈ ಬೃಹತ್ ಸಮಾವೇಶ ಸುಮಾರು 5 ಲಕ್ಷಕ್ಕೂ ಹೆಚ್ಚು ಜನ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದರು.
ನಾವು ಸಿದ್ದರಾಮಯ್ಯರನ್ನ ಹಂದಿ, ಕತ್ತೆ, ಕೋಣ ಎಂದು ಕರೆಯುತ್ತೇವೆ; ಹಳ್ಳಿ ಭಾಷೆ ನಮಗೂ ಬರುತ್ತೆ : ಈಶ್ವರಪ್ಪ...
ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun kharge), ಕೆಪಿಸಿಸಿ ಅಧ್ಯಕ್ಷ(KPCC President) ಡಿ.ಕೆ. ಶಿವಕುಮಾರ್(DK Shivakumar), ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah), ಪಕ್ಷದ ಪ್ರಮುಖರಾದ ಸುರ್ಜೇವಾಲಾ(Randeep Surjewala), ವೇಣುಗೋಪಾಲ್(Venugopal) ಸೇರಿದಂತೆ ಪಕ್ಷದ ಎಲ್ಲಾ ಮುಖಂಡರು ಆಗಮಿಸಲಿದ್ದಾರೆ. ಹಾಗೆಯೇ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಕರೆ ತರುವ ಪ್ರಯತ್ನ ನಡೆದಿದೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ(Congress Govt)ದ ಅವಧಿಯಲ್ಲಿ ಪರಿಶಿಷ್ಟರಿಗೆಂದು ಮೀಸಲಿಟ್ಟಿರುವ ಅನುದಾನವನ್ನು ಅನ್ಯ ಉದ್ದೇಶಕ್ಕೆ ಬಳಸಬಾರದೆಂದು ನಿಯಮ ರೂಪಿಸಲಾಗಿತ್ತು. ಆದರೆ ಮೀಸಲಿಟ್ಟಅನುದಾನವನ್ನು ಬಿಜೆಪಿ ಸರ್ಕಾರ ಅನ್ಯ ಉದ್ದೇಶಕ್ಕೆ ಬಳಕೆ ಮಾಡಿದೆ. ಗಂಗಾ ಕಲ್ಯಾಣ ಯೋಜನೆಯಡಿ 430 ಕೋಟಿ ರು. ಅವ್ಯವಹಾರ ನಡೆದಿದ್ದರೆ, ಭೋವಿ ನಿಗಮದಲ್ಲಿ 130 ಕೋಟಿ ರು. ಅವ್ಯವಹಾರವಾಗಿದೆ. ಹಾಗೆಯೇ ಬಂಜಾರ ನಿಗಮದಲ್ಲಿ ಮೀಸಲಿಟ್ಟಿದ್ದ 126 ಕೋಟಿ ರು. ಬಳಕೆಯೇ ಆಗಿಲ್ಲ ಎಂದು ದೂರಿದರು.
ಬಜೆಟ್ ನಲ್ಲಿ ಶೇ. 24.1ರಷ್ಟುಅನುದಾನ ಮೀಸಲಾಗಿಡಬೇಕಿತ್ತು. ಅದರ ಪ್ರಕಾರ 42 ಸಾವಿರ ಕೋಟಿ ರು. ಆಗುತ್ತದೆ. ಆದರೆ, ಬಿಜೆಪಿ ಸರ್ಕಾರದಲ್ಲಿ ಮೀಸಲಿಟ್ಟಿರುವುದು ಕೇವಲ 28 ಸಾವಿರ ಕೋಟಿ ರು. ಮಾತ್ರ. ಆ ಹಣದಲ್ಲೂ ಕೂಡ 8 ಸಾವಿರ ಕೋಟಿ ರು. ನಷ್ಟುಹಣವನ್ನು ಇತರೆ ಕೆಲಸಗಳಿಗೆ ಉಪಯೋಗಿಸಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟರಿಗೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದರು.
ಸುಮಾರು 90 ಸಾವಿರ ಬ್ಯಾಕ್ ಲಾಗ್ ಹುದ್ದೆ ಖಾಲಿ ಇದ್ದರೂ ಅದನ್ನು ಇನ್ನೂ ಭರ್ತಿ ಮಾಡಿಲ್ಲ. ಎಸ್‌ಸಿ ಒಳ ಮೀಸಲಾತಿ ಸಂಬಂಧ ಸದಾಶಿವ ಆಯೋಗ ವರದಿ ಜಾರಿ ಮಾಡುವ ಭರವಸೆ ನೀಡಲಾಗಿತ್ತು. ಆದರೆ ಅದನ್ನು ಪ್ರಶ್ನೆ ಮಾಡಿದ ಹಲವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ವಿದೇಶದಲ್ಲಿ ವ್ಯಾಸಂಗ ಮಾಡುವ ಪರಿಶಿಷ್ಟಜನಾಂಗದ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನವನ್ನು ಹಿಂಪಡೆಯಲಾಗಿದೆ. ಉದ್ಯೋಗದಲ್ಲೂ ಹೊರಗುತ್ತಿಗೆ ನೀಡುವ ಮೂಕ ಮೀಸಲಾತಿ ಹತ್ತಿಕ್ಕುವ ಪ್ರಯತ್ನ ನಡೆಸಲಾಗಿದೆ. ಇದು ಬಿಜೆಪಿ ಸರ್ಕಾರದ ಸಾಧನೆ ಎಂದು ಟೀಕಿಸಿದರು.
ಸಿದ್ದು ಕುರಿತು ಹಗುರ ಟೀಕೆ ನಿಲ್ಲಿಸಿ:
ಮಾಜಿ ಸಿಎಂ ಸಿದ್ದರಾಮಯ್ಯ ಕುರಿತಾಗಿ ಬಿಜೆಪಿಯವರು ಹಗುರವಾದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದನ್ನು ಈ ಕೂಡಲೇ ನಿಲ್ಲಿಸಬೇಕು. ಸಿದ್ದರಾಮಯ್ಯ ಅವರು ರಾಜ್ಯದ 224 ಕ್ಷೇತ್ರಗಳಲ್ಲಿ ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ಅವರ ಸ್ಪರ್ಧೆಯ ವಿಷಯ ಬಿಜೆಪಿಯವರಿಗೇಕೆ ಬೇಕು? ಸಿದ್ಧರಾಮಯ್ಯ ಅವರನ್ನು ಕಂಡರೆ ಬಿಜೆಪಿಗೆ ಭಯ. ಹೀಗಾಗಿ ಬಿಜೆಪಿಯವರು ಸಿದ್ಧರಾಮಯ್ಯ ಕುರಿತು ಆರೋಪದಲ್ಲಿ ತಲ್ಲೀನರಾಗಿದ್ದಾರೆ ಎಂದು ಆರೋಪಿಸಿದರು.
Assembly eleciton: ಬಿಜೆಪಿ ಭ್ರಷ್ಟ ಸರ್ಕಾರ: ರಾಜ್ಯವನ್ನುಳಿಸಲು ಕಾಂಗ್ರೆಸ್ ಗೆಲ್ಲಿಸಿ; ಸಿದ್ದರಾಮಯ್ಯ ಕರೆ
ಗೋಷ್ಠಿಯಲ್ಲಿ ಪ್ರಮುಖರಾದ ಹೆಚ್.ಸಿ. ಮಹದೇವಪ್ಪ, ಪಿ.ಟಿ. ಪರಮೇಶ್ವರ ನಾಯ್‌್ಕ, ಬೇಳೂರು ಗೋಪಾಲಕೃಷ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಅನಿತಾ ಕುಮಾರಿ, ವೈ. ಹೆಚ್. ನಾಗರಾಜ್, ಶ್ರೀನಿವಾಸ ಕರಿಯಣ್ಣ ಮತ್ತಿತರರು ಉಪಸ್ಥಿತರಿದ್ದರು.