ಎಸ್ಸಿ,ಎಸ್ಟಿ, ಅಲ್ಪಸಂಖ್ಯಾತ, ವೀರಶೈವರಿಗೂ ಡಿಸಿಎಂ ಹುದ್ದೆ ಸಿಗಲಿ: ಸಚಿವ ರಾಜಣ್ಣ
ಮೂವರು ಡಿಸಿಎಂಗಳನ್ನು ನೇಮಕ ಮಾಡಬೇಕು ಎಂಬ ತಮ್ಮ ಹೇಳಿಕೆಯನ್ನು ಸಹಕಾರ ಸಚಿವ ಕೆ.ಎನ್.ರಾಜಣ್ಣ ಪುನರುಚ್ಚರಿಸಿದ್ದಾರೆ. ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು ಮತ್ತು ವೀರಶೈವ ಸಮುದಾಯಗಳಿಗೆ ಉಪಮುಖ್ಯಮಂತ್ರಿ ಸ್ಥಾನ ಸೃಷ್ಟಿ ಮಾಡಬೇಕು.

ತುಮಕೂರು (ಸೆ.17): ಮೂವರು ಡಿಸಿಎಂಗಳನ್ನು ನೇಮಕ ಮಾಡಬೇಕು ಎಂಬ ತಮ್ಮ ಹೇಳಿಕೆಯನ್ನು ಸಹಕಾರ ಸಚಿವ ಕೆ.ಎನ್. ರಾಜಣ್ಣ ಪುನರುಚ್ಚರಿಸಿದ್ದಾರೆ. ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು ಮತ್ತು ವೀರಶೈವ ಸಮುದಾಯಗಳಿಗೆ ಉಪಮುಖ್ಯಮಂತ್ರಿ ಸ್ಥಾನ ಸೃಷ್ಟಿ ಮಾಡಬೇಕು. ಇದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಅನುಕೂಲವಾಗಲಿದೆ. ಈ ಸಂಬಂಧ ಇಂದೇ ಪಕ್ಷದ ಹೈಕಮಾಂಡ್‌ಗೆ ಪತ್ರ ಬರೆಯುತ್ತೇನೆ ಎಂದು ಅವರು ತಿಳಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು ಮತ್ತು ವೀರಶೈವ ಸಮುದಾಯಗಳಿಗೆ ಉಪಮುಖ್ಯಮಂತ್ರಿ ಸ್ಥಾನ ಸೃಷ್ಟಿ ಮಾಡಬೇಕು. ಮೂರು ಡಿಸಿಎಂ ಸ್ಥಾನಗಳನ್ನು ಸೃಷ್ಟಿ ಮಾಡಿದರೆ ಎಲ್ಲಾ ಸಮುದಾಯಗಳು ನಮಗೆ ಬೆಂಬಲ ನೀಡಲು ಅನುಕೂಲ ಆಗುತ್ತದೆ. ಲೋಕಸಭಾ ಚುನಾವಣೆಯಲ್ಲಿ ಇದರಿಂದ ಕಾಂಗ್ರೆಸ್‌ಗೆ ಅನುಕೂಲವಾಗಲಿದೆ ಎಂಬುದು ನನ್ನ ವೈಯಕ್ತಿಕ ಅನಿಸಿಕೆ ಎಂದರು.
ಹಿಂದೂ ಮುಸ್ಲಿಂ ಭಾವೈಕ್ಯತೆ ಸಾರುತ್ತಿರುವ ಶಿಕ್ಷಕ: ಅಲ್ಹಾಭಕ್ಷ ಕೈಯಲ್ಲಿ ಅರಳಿವೆ ನೂರಾರು ಗಣಪ ವಿಗ್ರಹ!
ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚು ಲೋಕಸಭಾ ಸ್ಥಾನಗಳನ್ನು ಪಡೆಯಬೇಕು ಎಂಬುದು ನನ್ನ ಅಪೇಕ್ಷೆ. ಈ ಸಂಬಂಧ ಇಂದೇ ಕಾಂಗ್ರೆಸ್ ಹೈಕಮಾಂಡ್‌ಗೆ ಪತ್ರ ಬರೆಯುತ್ತೇನೆ. ಮುಂದಿನ ತಿಂಗಳ ಮೊದಲ ವಾರದಲ್ಲಿ ಹೈಕಮಾಂಡ್ ಮುಖಂಡರನ್ನು ಭೇಟಿ ಮಾಡುತ್ತೇನೆ. ನನ್ನ ಹೇಳಿಕೆಗೆ ಯಾರು ಸಹಮತ ನೀಡುತ್ತಾರೋ ಅವರೆಲ್ಲರನ್ನೂ ಕರೆದುಕೊಂಡು ಹೋಗುತ್ತೇನೆ. ಅಂತಿಮವಾಗಿ ಈ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತೆ ಎಂದು ತಿಳಿಸಿದರು. ಆ ಮೂಲಕ ಮೂವರು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ನೀಡಿದ್ದ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.
‘ನನ್ನ ಹೇಳಿಕೆಯಿಂದ ಡಿ.ಕೆ. ಶಿವಕುಮಾರ್‌ಗೆ ಅಸಮಾಧಾನವಿಲ್ಲ. ನಾನು ಡಿಕೆ ಬ್ರದರ್ಸ್ ವಿರುದ್ಧ ಹೇಳಿಕೆ ನೀಡಿಲ್ಲ. ಡಿ.ಕೆ.ಶಿವಕುಮಾರ್ ಈಗಾಗಲೇ ಡಿಸಿಎಂ ಆಗಿದ್ದಾರೆ. ಜೊತೆಗೆ, ಅವರು ಪಕ್ಷದ ಅಧ್ಯಕ್ಷರು. ಪಕ್ಷ ಸಂಘಟನೆಯಲ್ಲಿ ಚಾಣಾಕ್ಷರಿರುವ ಡಿ.ಕೆ.ಶಿವಕುಮಾರ್ ಅವರು ಅಸಮಾಧಾನಗೊಳ್ಳುವ ಪರಿಸ್ಥಿತಿ ಮತ್ತು ಸಂದರ್ಭ ಸೃಷ್ಟಿಯಾಗಿಲ್ಲ’ ಎಂದರು.
ಮುಂದಿನ ತಿಂಗಳ ಮೊದಲ ವಾರದಲ್ಲಿ ಹೈಕಮಾಂಡ್ ಮುಖಂಡರನ್ನು ಭೇಟಿ ಮಾಡುತ್ತೇನೆ. ನನ್ನ ಹೇಳಿಕೆಗೆ ಯಾರು ಸಹಮತ ನೀಡುತ್ತಾರೋ ಅವರೆಲ್ಲರನ್ನೂ ಕರೆದುಕೊಂಡು ಹೋಗುತ್ತೇನೆ.
- ಕೆ.ಎನ್.ರಾಜಣ್ಣ ಸಹಕಾರ ಸಚಿವ
ಗಣೇಶ ಮಂಡಳಗಳಿಂದ ಹೊಸ ಬೇಡಿಕೆ: ಗಣೇಶನಿಗೂ ಫ್ರೀ ಕರೆಂಟ್ ಕೊಡಿ ಎಂದ ಹಿಂದೂ ಸಂಘಟನೆಗಳು!
ಲೋಕಸಭೆ ಚುನಾವಣೆ ದೃಷ್ಟಿಯಿಂದ 3 ಡಿಸಿಎಂ ಹುದ್ದೆ ಸೃಷ್ಟಿಸಬೇಕೆಂದು ಸಚಿವ ರಾಜಣ್ಣ ಹೇಳಿರುವುದರಲ್ಲಿ ತಪ್ಪಿಲ್ಲ. ಅವರ ಉದ್ದೇಶ ಒಳ್ಳೆಯದು. ಆದರೆ 3 ಡಿಸಿಎಂ ಹುದ್ದೆ ಸೃಷ್ಟಿಸುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ.
- ಡಾ। ಜಿ. ಪರಮೇಶ್ವರ್ ಗೃಹ ಸಚಿವ