Asianet Suvarna News Asianet Suvarna News

ವಿಜಯೇಂದ್ರ ಆಯ್ಕೆಯಿಂದ ಹಿರಿಯ ಬಿಜೆಪಿಗರಿಗೆ ಬೇಸರ: ಸಚಿವ ಶಿವರಾಜ ತಂಗಡಗಿ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವುದಕ್ಕೆ ಹಿರಿಯ ಬಿಜೆಪಿ ನಾಯಕರಿಗೆ ಅಸಮಾಧಾನ ಉಂಟಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ ತಂಗಡಗಿ ಆರೋಪಿಸಿದರು.

Senior BJP leaders upset with BY Vijayendras choice Says Minister Shivaraj Tangadagi gvd
Author
First Published Nov 14, 2023, 4:00 AM IST

ಗಂಗಾವತಿ (ನ.14): ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವುದಕ್ಕೆ ಹಿರಿಯ ಬಿಜೆಪಿ ನಾಯಕರಿಗೆ ಅಸಮಾಧಾನ ಉಂಟಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ ತಂಗಡಗಿ ಆರೋಪಿಸಿದರು. ತಮ್ಮ ನಿವಾಸದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಮೊದಲಿನಿಂದಲೂ ಭಿನ್ನಮತ ಇದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಹಳಷ್ಟು ಹಿರಿಯ ನಾಯಕರು ಆಕಾಂಕ್ಷಿಯಾಗಿದ್ದರು. ಈಗ ಸಂಘಟನೆ ಮತ್ತು ಬರುವ ಲೋಕಸಭಾ ಚುನಾವಣೆ ಮುಂದಿಟ್ಟುಕೊಂಡು ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವುದಕ್ಕೆ ಹಿರಿಯ ನಾಯಕರಲ್ಲಿ ಅಸಮಾಧಾನ ಉಂಟಾಗಿದೆ. 

ಇಂದಿಲ್ಲ ನಾಳೆ ಇದು ಸ್ಫೋಟಗೊಳ್ಳುತ್ತದೆ ಎಂದರು. ವಿಧಾನಸಭೆಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದ ಬಿಜೆಪಿ ಬರುವ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಹೇಗೆ ಗೆಲ್ಲಿಸುತ್ತಾರೆ? ಎಂದು ಪ್ರಶ್ನಿಸಿದರು. ಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 25ಕ್ಕೂ ಹೆಚ್ಚು ಸ್ಥಾನ ಪಡೆಯಲಿದೆ. ತೆಲಂಗಾಣ ಸೇರಿದಂತೆ ಮೂರು ರಾಜ್ಯಗಳಲ್ಲಿ ವಿಧಾನಸಭೆಗೆ ಚುನಾವಣೆಯ ನಡೆಯಲಿದೆ. 7ಕ್ಕೂ ಹೆಚ್ಚು ಕ್ಷೇತ್ರಗಳ ಜವಾಬ್ದಾರಿಯನ್ನು ಕಾಂಗ್ರೆಸ್ ಪಕ್ಷ ನೀಡಿದೆ. ಪ್ರಚಾರ ಕೈಗೊಂಡು ಅಲ್ಲಿಯೂ ಕಾಂಗ್ರೆಸ್ ಸರ್ಕಾರ ಬರಲು ಒಗ್ಗಟ್ಟಾಗಿದ್ದೇವೆ ಎಂದರು.

ಕಾರ್ಯಕರ್ತರನ್ನು ಗೌರವದಿಂದ ಕಾಣುವ ಏಕೈಕ ಪಕ್ಷ ಬಿಜೆಪಿ: ಬಿ.ವೈ.ವಿಜಯೇಂದ್ರ

ವಿಜಯೇಂದ್ರ ನೇಮಕ ಕಾಂಗ್ರೆಸ್‌ಗೆ ನಷ್ಟವಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕವಾಗಿರುವುದು ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ. ಪ್ರತಿಪಕ್ಷ ನಾಯಕನಿಲ್ಲದೇ ಈಗಾಗಲೇ ಎರಡು ಅಧಿವೇಶನಗಳು ಕಳೆದಿವೆ. ಬೆಳಗಾವಿ ಅಧಿವೇಶನದಲ್ಲೂ ಬಿಜೆಪಿಗೆ ಪ್ರತಿಪಕ್ಷ ನಾಯಕರಿರುತ್ತಾರೆ ಎಂಬುದು ಗ್ಯಾರಂಟಿ ಇಲ್ಲ ಎಂದು ಸಚಿವ ಶಿವರಾಜ ತಂಗಡಗಿ ಟೀಕಿಸಿದರು. ಕಾರಟಗಿ ತಾಲೂಕಿನ ಉಳೇನೂರು ಗ್ರಾಮದಲ್ಲಿ ಅಕಾಲಿಕ ಮಳೆಗೆ ಹಾನಿಯಾದ ಭತ್ತದ ಬೆಳೆ ವೀಕ್ಷಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ವೈಯಕ್ತಿಕವಾಗಿ ನಾನೊಬ್ಬ ಸಚಿವನಾಗಿ ಬಿ.ವೈ. ವಿಜಯೇಂದ್ರಗೆ ಅಭಿನಂದನೆ ಸಲ್ಲಿಸುವೆ ಎಂದರು.

ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿರುವುದರಿಂದ ಲೋಕಸಭಾ ಚುನಾವಣೆಯಲ್ಲಿ ಲಿಂಗಾಯತ ಸಮುದಾಯ ಬಿಜೆಪಿ ಜೊತೆಗೆ ನಿಲ್ಲುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಲಿಂಗಾಯತ ಸಮುದಾಯದವರು ಬಹಳ ಬುದ್ಧಿವಂತರು. ಆಡಳಿತ ನೋಡಿ ಮತ ಚಲಾವಣೆ ಮಾಡುತ್ತಾರೆ. ನಮ್ಮ ಪಕ್ಷದ ಆಡಳಿತ ನೋಡಿ ಲೋಕಸಭಾ ಚುನಾವಣೆಯಲ್ಲೂ ನಮ್ಮ ಜತೆ ಇರಲಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷ ೨೦ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲ್ಲ: ಮಾಜಿ ಸಚಿವ ಗೋವಿಂದ ಕಾರಜೋಳ

ಕೇಂದ್ರದ ಅಧಿಕಾರಿಗಳ ತಂಡ ರಾಜ್ಯದಲ್ಲಿ ಬರ ಅಧ್ಯಯನ ಮಾಡಿ ವಾಸ್ತವ ಸ್ಥಿತಿ ವರದಿ ನೀಡಿದೆ. ಆದರೆ, ಬಿಜೆಪಿಯವರು ರಾಜ್ಯದಲ್ಲಿ ಬರ ವೀಕ್ಷಣೆ ನೆಪದಲ್ಲಿ ಒಣಗಿದ ಗಿಡ ಹಿಡಿದು ನಾಟಕ ಕಂಪನಿಯ ರೀತಿಯಲ್ಲಿ ತಿರುಗಾಡುವುದನ್ನು ನಿಲ್ಲಿಸಲಿ. ಕೇಂದ್ರದಲ್ಲಿ ತಮ್ಮದೇ ಸರ್ಕಾರ ಇದ್ದು, ಕೂಡಲೇ ರೈತರಿಗೆ ಪರಿಹಾರ ಕೊಡಿಸುವಂಥ ಕೆಲಸ ಮಾಡಲಿ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

Follow Us:
Download App:
  • android
  • ios