* ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯ ಕಾಂಗ್ರೆಸ್ ಸೇರ್ಪಡೆ *  ಸಿದ್ದರಾಮಯ್ಯ, ಡಿಕೆಶಿ ಸಮ್ಮುಖದಲ್ಲಿ ಕೈ ಹಿಡಿದ ವಕೀಲ ಡಾ.ಸಿ.ಎಸ್. ದ್ವಾರಕಾನಾಥ್ *ಈ ಹಿಂದೆ ಬಿಎಸ್‌ಆರ್ ಪಕ್ಷದ  ಮಾರ್ಗದರ್ಶಕರಾಗಿದ್ದ ದ್ವಾರಕಾನಾಥ್ 

ಬೆಂಗಳೂರು, (ಆ.20): ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ, ವಕೀಲ ಡಾ.ಸಿ.ಎಸ್. ದ್ವಾರಕಾನಾಥ್ ಕಾಂಗ್ರೆಸ್‌ಗೆ ಸೇರ್ಪಡೆಯಾದರು.

ಇಂದು (ಆ.20) ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನಾಚರಣೆ ಸಮಾರಂಭದಲ್ಲಿ ದ್ವಾರಕಾನಾಥ್ ಕಾಂಗ್ರೆಸ್ ಸದಸ್ಯತ್ವ ಸ್ವೀಕರಿಸಿದರು.

ಬಿಜೆಪಿ ರಾಜಕೀಯ ಡೊಂಬರಾಟಕ್ಕಾಗಿ ಹಿಂದೂಗಳು ಬಲಿಯಾಗಬೇಡಿ: ಹಿಂದೂ ಮಹಾಸಭಾ ಕರೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಬಾವುಟ ನೀಡುವ ಮೂಲಕ ದ್ವಾರಕಾನಾಥ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಸಿಎಸ್ ದ್ವಾರಕನಾಥ್ ಅವರು ಈ ಹಿಂದೆ ಶ್ರೀರಾಮುಲು ನೇತೃತ್ವದ ಬಿಎಸ್‌ ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಪಕ್ಷದ ಮಾರ್ಗದರ್ಶಕರಾಗಿ ಹಿಂದುಳಿದ, ಅಲ್ಪಸಂಖ್ಯಾತ ವರ್ಗವನ್ನು ಪಕ್ಷಕ್ಕೆ ಕರೆತರುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಕಾರ್ಯಕ್ರಮಗಳನ್ನು, ಪ್ರವಾಸಗಳನ್ನು ಹಮ್ಮಿಕೊಂಡಿದ್ದರು. ಬಳಿಕ ಬದಲಾದ ರಾಜಕೀಯ ಬೆಳವಣಿಗೆಯಿಂದ ಅವರು ಬಿಎಸ್‌ಆರ್‌ ತೊರೆದಿದ್ದರು. 

ನಂತರ ಬಿಎಸ್‌ಪಿ ಪಕ್ಷಕ್ಕೆ ಸೇರ್ಪಡೆಗೊಂಡು 2019 ರಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧೆ ಮಾಡಿ ಸೋಲಿಂಕಡಿದ್ದರು.
ಇದೀಗ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.