Congress ಗೆ ಮುಖ್ಯಮಂತ್ರಿ ಚಂದ್ರು ರಾಜೀನಾಮೆ
ರಾಜ್ಯ ಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದ ಕೈ ಪಕ್ಷದ ಹಿರಿಯ ಮುಖಂಡ, ನಟ ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ಪ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ
ಬೆಂಗಳೂರು (ಮೇ.29): ರಾಜ್ಯಸಭೆ (MLC) ಟಿಕೆಟ್ ಆಕಾಂಕ್ಷಿಯಾಗಿದ್ದ ಕೈ ಪಕ್ಷದ ಹಿರಿಯ ಮುಖಂಡ, ನಟ ಮುಖ್ಯಮಂತ್ರಿ ಚಂದ್ರು (Mukhyamantri Chandru) ಕಾಂಗ್ರೆಸ್ (Congress) ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಈ ಪತ್ರದ ಮೂಲಕ ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ವೈಯಕ್ತಿಕ ಕಾರಣಗಳಿಂದ ರಾಜೀನಾಮೆಯನ್ನು ನೀಡುತ್ತಿದ್ದೇನೆ. ದೇಶದಲ್ಲೇ ಸುಧೀರ್ಘ ಇತಿಹಾಸವಿರುವ ಕಾಂಗ್ರೆಸ್ ಪಕ್ಷಕ್ಕೆ ನಾನು ವ್ಯಾಪಕ ನೆಲೆಯಲ್ಲಿ ಜನಸೇವೆ ಮಾಡುವ ಆಶಯದಿಂದ ಸೇರ್ಪಡೆಗೊಂಡೆ. ಪಕ್ಷಕ್ಕೆ ಸೇರಿದಂದಿನಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂಬ ತೃಪ್ತಿ ಇದೆ.
"
NEET 2022; ಡಿಎಂಕೆ ವಿರೋಧದ ನಡುವೆಯೂ TAMIL NADU ಟಾಪ್ 3!
ಸದ್ಯ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದು, ನನ್ನ ಮೇಲೆ ವಿಶ್ವಾಸವಿಟ್ಟು ಪಕ್ಷದ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಪ್ರಕಟಿಸಿರುವ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಪ್ರಮೇಯವೇ ಉದ್ಭವಿಸುವುದಿಲ್ಲ.
ಇಂದಿನವರೆಗೂ ನನಗೆ ಪಕ್ಷದಲ್ಲಿ ಬೆಂಬಲಿಸಿದ ಪ್ರೀತಿಯನ್ನು ತೋರಿಸಿದ ಎಲ್ಲರಿಗೂ ಮನದಾಳದ ಕೃತಜ್ಞತೆಗಳು ಎಂದು ರಾಜೀನಾಮೆ ಪತ್ರದಲ್ಲಿ ಮುಖ್ಯಮಂತ್ರಿ ಚಂದ್ರು ಬರೆದುಕೊಂಡಿದ್ದಾರೆ.
Hijab ban; ಹೈಕೋರ್ಟ್ ಆದೇಶದ ವಿರುದ್ಧದ ಮೇಲ್ಮನವಿ ಪರಿಶೀಲನೆಗೆ ಸುಪ್ರೀಂ ಒಪ್ಪಿಗೆ
2023ರ ವಿಧಾನಸಭೆ ಚುನಾವಣೆ ಹಿನ್ನೆಲೆ, ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಕೆಪಿಸಿಸಿ ಸಮಿತಿವತಿಯಿಂದ ಕೆಲ ವಿಭಾಗಗಳಿಗೆ ಚೇರ್ಮನ್, ಕೋ-ಚೇರ್ಮನ್ ಮತ್ತು ಸಂಚಾಲಕರು ನೇಮಕ ಮಾಡಲಾಗಿದೆ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೂಚನೆ ಅನ್ವಯ ಕಾರ್ಯಧ್ಯಕ್ಷ ಸಲೀಮ್ ಅಹಮದ್ ಖಾನ್ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಸಹಕಾರ ವಿಭಾಗದ ಚೇರ್ಮನ್ ಆಗಿ ಮಾಜಿ ಸಚಿವ ಶಿವಾನಂದ ಪಾಟೀಲ್ ನೇಮಕ. ಕೋ ಚೇರ್ಮೆನ್ ಆಗಿ ಧಾರವಾಡದ ಮಾಜಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವಕುಮಾರ ಗೌಡ ಎಸ್ ಪಾಟೀಲ್ ನೇಮಕ. ಸಹಕಾರ ವಿಭಾಗದ ಸಂಚಾಲಕರನ್ನಾಗಿ ಮಂಜುನಾಥ್ ಗೌಡ ನೇಮಕ ಪ್ರೊ ಕೆ.ಇ ರಾಧಾಕೃಷ್ಣ ಅವರನ್ನು ವಿಚಾರ ವಿಭಾಗ ಸೆಲ್ ನ ಚೇರ್ಮನ್ ಆಗಿ ನೇಮಕ ಮಾಡಲಾಗಿದೆ. ರಾಧಾಕೃಷ್ಣ ರವರು ಈ ಹಿಂದೆ ಕೆಪಿಸಿಸಿಯ ಉಪಾಧ್ಯಕ್ಷರಾಗಿದ್ದರು.
ಮುಖ್ಯಮಂತ್ರಿ ಚಂದ್ರು ಅವರನ್ನು ಸಾಂಸ್ಕೃತಿಕ ಘಟಕದ ಚೇರ್ಮನ್ ಆಗಿ ನೇಮಕ ಮಾಡಲಾಗಿತ್ತು. ಈ ಹಿಂದೆ ಇವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಸಾಮಾಜಿಕ ನ್ಯಾಯ ಸೆವಿಭಾಗದ ಚೇರ್ಮನ್ ಆಗಿ ಡಾ. ಸಿ.ಎಸ್ ದ್ವಾರಕಾನಾಥ್ ನೇಮಕ ಮಾಡಲಾಗಿದೆ. ಹಿಂದೆ ಇವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದರು.
Vijayanagara: ಹೊಸಪೇಟೆ ಸರ್ಕಾರಿ ಕಾಲೇಜಿನಲ್ಲಿ 3 ಕೋಟಿ ರೂಪಾಯಿ ಗುಳುಂ!
ಕಾಂಗ್ರೆಸ್ ನಾಯಕಿಗೆ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆಗಿರುವ ಕವಿತಾ ರೆಡ್ಡಿ ವಿರುದ್ಧ ಕಾಂಗ್ರೆಸ್ ಪಕ್ಷದ ಶಿಸ್ತು ಉಲ್ಲಂಘಿಸಿದ್ದಕ್ಕಾಗಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.
ಕೆಪಿಸಿಸಿ ಶಿಸ್ತು ಸಮಿತಿಯ ಅಧ್ಯಕ್ಷರಾಗಿರುವ ಕೆ.ರೆಹಮಾನ್ ಖಾನ್ ಅವರು ಈ ನೋಟಿಸ್ ಜಾರಿ ಮಾಡಿದ್ದಾರೆ. ವಿಧಾನಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಕವಿತಾ ರೆಡ್ಡಿ ಮಾಧ್ಯಮಗಳ ಮುಂದೆ ಅಸಮಾಧಾನವನ್ನು ಹೊರ ಹಾಕಿದ್ದರು. ಈ ವಿಚಾರವು ಪತ್ರಿಕೆಗಳಲ್ಲಿ ಪ್ರಕಟವಾಗಿತ್ತು. ಇದರಿಂದ ಪಕ್ಷದ ಘನತೆ ಗೌರವಗಳಿಗೆ ಕುಂದುಂಟಾಗಿದೆ. ನಿಮ್ಮ ಈ ನಡುವಳಿಕೆಯಿಂದ ಪಕ್ಷದ ಶಿಸ್ತು ಉಲ್ಲಂಘನೆಯಾಗಿದ್ದು, ಪಕ್ಷಕ್ಕೆ ಮುಜುಗುರ ಉಂಟಾಗಿದೆ ಎಂದು ಕೆಪಿಸಿಸಿ ಡಿಎಸಿ ಸ್ಪಷ್ಟ ಮಾಹಿತಿ ನೀಡುವಂತೆ ಕವಿತಾ ರೆಡ್ಡಿ ಅವರಿಗೆ ನೋಟಿಸ್ ನೀಡಿದೆ.
ಈ ಬಗ್ಗೆ ಸಮಂಜಸ ಉತ್ತರವನ್ನು ಸಲ್ಲಿಸುವಂತೆ ಹಾಗೂ 7 ದಿನದೊಳಗೆ ಉತ್ತರ ನೀಡದಿದ್ದರೆ ಮುಂದಿನ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ನೋಟಿಸ್ ನಲ್ಲಿ ಕವಿತಾ ರೆಡ್ಡಿ ಅವರಿಗೆ ಸೂಚಿಸಲಾಗಿದೆ.