ಕಾಂಗ್ರೆಸ್ ಶಾಸಕರೊಬ್ಬರು ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಇಂದು (ಭಾನುವಾರ) ಆಸ್ಪತ್ರೆಯಲ್ಲಿ ಕೊನೆಯುಸೆರೆಳೆದಿದ್ದಾರೆ.

ತಿರುವನಂತಪುರಂ, (ಸೆ. 27): ಕೇರಳದ ಹಿರಿಯ ಕಾಂಗ್ರೆಸ್ ಮುಖಂಡ, ಹಾಲಿ ಶಾಸಕ ಸಿ.ಎಫ್ ಥಾಮಸ್ (81) ವಿಧಿವಶರಾಗಿದ್ದಾರೆ.

Add Asianetnews Kannada as a Preferred SourcegooglePreferred

ಕಳೆದ ಕೆಲ ದಿನಗಳಿಂದ ತಿರುವಲ್ಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತಕ್ಕೊಳಗಾಗಿ ಭಾನುವಾರ ಬೆಳಗ್ಗೆ ಮೃತರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. 

ಚಂಗನಚ್ಚೇರಿ ಕ್ಷೇತ್ರದ ಹಾಲಿ ಶಾಸಕರಾಗಿದ್ದ ಥಾಮಸ್ ಅವರು ಕೆಲ ಕಾಲದಿಂದ ವಯೋಸಹಜ ಅನಾರೋಗ್ಯ ಪೀಡಿತರಾಗಿದ್ದರು. ಮೃತರು ಪತ್ನಿ ಹಾಗೂ ಮೂವರು ಮಕ್ಕಳು ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಕರ್ನಾಟಕದ ಶಾಸಕ ನಿಧನ..!

1980ರಿಂದ ಕೊಟ್ಟಾಯಂ ಜಿಲ್ಲೆಯ ಚಂಗನಚ್ಚೇರಿ ವಿಧಾನಸಭಾ ಕ್ಷೇತ್ರವನ್ನು ಸತತವಾಗಿ ಪ್ರತಿನಿಧಿಸುತ್ತಿದ್ದರು. 2001 ರಿಂದ 2006 ಅವಧಿಯಲ್ಲಿ ಕಾಂಗ್ರೆಸ್ ನೇತೃತ್ವದ ಯು ಡಿಎಫ್ ಸರ್ಕಾರದಲ್ಲಿ ಥಾಮಸ್ ಅವರು ಗ್ರಾಮೀಣಾಭಿವೃದ್ಧಿ, ಖಾದಿ, ಗುಡಿ ಕೈಗಾರಿಕೆ ಖಾತೆ ಸಚಿವರಾಗಿದ್ದರು. ಕೇರಳ ಕಾಂಗ್ರೆಸ್(ಎಂ) ಕೆಎಂ ಮಣಿ ಅವರ ಆಪ್ತರಾಗಿ ಗುರುತಿಸಿಕೊಂಡಿದ್ದರು.

ಮೊನ್ನೆ ಅಷ್ಟೇ ಕರ್ನಾಟಕದ ಬಸವಕಲ್ಯಾಣದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್ ಅವರು ಸಹ ನಿಧನರಾಗಿದ್ದನ್ನು ಇಲ್ಲಿ ಸ್ಮರಿಸಬಹುದು.