ಕಗ್ಗಂಟಾಗಿ ಉಳಿದಿದ್ದ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಸಮ್ಮತಿ ಸೂಚಿಸಿದೆ. ಆದ್ರೆ ಕೆಲ ಹಿರಿಯ ಶಾಸಕರಿಗೆ ಮಂತ್ರಿಗಿರಿ ಸಿಗದಿದ್ದಕ್ಕೆ ಅಸಮಾಧಾನಗೊಂಡಡಿದ್ದು, ಅವರನ್ನ ಸಮಾಧಾನ ಪಡಿಸಲು ಕಾಂಗ್ರೆಸ್ ಎಚ್ ಕೆ ಪಾಟೀಲ್ ಗೆ ಹೊಸ ಹುದ್ದೆ ನೀಡಿದೆ.

ಬೆಂಗಳೂರು, (ಡಿ.22): ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಲ್ಲಿ ಒಬ್ಬರಾಗಿದ್ದ ಕಾಂಗ್ರೆಸ್ ಹಿರಿಯ ಶಾಸಕ ಎಚ್‌ಕೆ ಪಾಟೀಲ್ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗದೆ ಮತ್ತೆ ನಿರಾಶೆ ಉಂಟಾಗಿದೆ.

ಅವರ ಅಸಮಾಧಾನವನ್ನು ತಣಿಸುವ ಸಲುವಾಗಿ ಹೈಕಮಾಂಡ್ ಅವರಿಗೆ ಬೇರೆ ಹೊಣೆಗಾರಿಕೆ ನೀಡಿದೆ. ಗದಗದ ಶಾಸಕರಾದ ಎಚ್‌ಕೆ ಪಾಟೀಲ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

8 ಜನರಿಗೆ ಮಂತ್ರಿ, ನಿಗಮ ಮಂಡಳಿಗೆ 20 ಶಾಸಕರು: ಇಲ್ಲಿದೆ ಪಟ್ಟಿ

Scroll to load tweet…

ಎಚ್ ಕೆ ಪಾಟೀಲ್ ಅವರನ್ನು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನ ನೀಡಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಸೂಚಿಸಿದ್ದರು.

ರಾಹುಲ್ ಆದೇಶದಂತೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ಸೂಚನೆ ಹೊರಡಿಸಿದ್ದಾರೆ.

ಜಲಸಂಪನ್ಮೂಲ ಸಚಿವರಾದ ಡಿಕೆ ಶಿವಕುಮಾರ್ ಅವರು ಇದುವರೆಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನದ ಹೊಣೆಗಾರಿಕೆ ನಿಭಾಯಿಸುತ್ತಿದ್ದರು.

ತಮಗೆ ಸಂಪುಟದಲ್ಲಿ ಸ್ಥಾನ ನೀಡದೆ ಇರುವುದರ ಬಗ್ಗೆ ಎಚ್‌ಕೆ ಪಾಟೀಲ್ ಅವರು ಪಕ್ಷದ ವಿರುದ್ಧ ಅತೃಪ್ತಿ ವ್ಯಕ್ತಪಡಿಸುವ ಸಾಧ್ಯತೆ ಇದ್ದಿದ್ದರಿಂದ ಅವರಿಗೆ ಈ ಹೊಣೆಗಾರಿಕೆ ನೀಡಲಾಗಿದೆ.