ತೆಲಂಗಾಣ ಚುನಾವಣೆ ಸಮೀಪಿಸುತ್ತಿದೆ. ಇದರ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ಆದರೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಕರ್ ರಾವ್‌ಗೆ ತೀವ್ರ ಹಿನ್ನಡೆಯಾಗಿದೆ. ಬಿಆರ್‌ಎಸ್ ಪಕ್ಷದ 12 ಮಾಜಿ ಸಚಿವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ತೆಲಂಗಾಣ(ಜೂ.26) ತೆಲಂಗಾಣ ವಿಧಾನಸಭಾ ಚುನಾವಣೆಗೆ ಎಲ್ಲಾ ಪಕ್ಷಗಳು ತಯಾರಿ ಮಾಡಿಕೊಳ್ಳುತ್ತಿದೆ. ತಂತ್ರ ರಣತಂತ್ರಗಳು ಜೋರಾಗುತ್ತಿದೆ. ಇದರ ಬೆನ್ನಲ್ಲೇ ಆಡಳಿತರೂಢ ಬಿಆರ್‌ಎಸ್ ಪಕ್ಷಕ್ಕೆ ಹಾಗೂ ಸಿಎಂ ಕೆ ಚಂದ್ರಶೇಕರ್ ರಾವ್‌ಗೆ ತೀವ್ರ ಹಿನ್ನಡೆಯಾಗಿದೆ. ಪಕ್ಷದ 35 ಪ್ರಮುಖ ನಾಯಕರು, ಮಾಜಿ ಸಚಿವರು ಬಿಆರ್‌ಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಆರ್‌ಎಸ್ ಪಕ್ಷ ತೊರೆದ ನಾಯಕರು ಪೈಕಿ 12 ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಇನ್ನುಳಿದ ನಾಯಕರ ಶೀಘ್ರದಲ್ಲೇ ಕಾಂಗ್ರೆಸ್ ಸೇರಿಕೊಳ್ಳಲಿದ್ದಾರೆ. ಇದರಿಂದ ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತಷ್ಟು ಬಲಿಷ್ಠಗೊಂಡಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸಮ್ಮುಖದಲ್ಲಿ ಬಿಆರ್‌ಎಸ್ ನಾಯಕರು ಕಾಂಗ್ರೆಸ್ ಸೇರಿಕೊಂಡಿದ್ದಾರೆ. ತೆಲಂಗಾಣದಲ್ಲಿ ಕಾಂಗ್ರೆಸ್ ಈ ಬಾರಿ ಅಧಿಕಾರಕ್ಕೇರಲು ಎಲ್ಲಾ ಪ್ರಯತ್ನ ಮಾಡುತ್ತಿದೆ. ಇದರ ಬೆನ್ನಲ್ಲೇ 12 ನಾಯಕರು ಪಕ್ಷ ಸೇರ್ಪಡೆಗೊಂಡಿರುವುದು ಕಾಂಗ್ರೆಸ್ ಉತ್ಸಾಹ ಹೆಚ್ಚಿಸಿದೆ. ಮಾಜಿ ಸಂಸದ ಪಿ ಶ್ರೀನಿವಾಸ್ ರೆಡ್ಡಿ, ಮಾಜಿ ಸಚಿವ ಜುಪಾಲಿ ಕೃಷ್ಣರಾವ್, ಮಾಜಿ ಶಾಸಕ ಪನ್ಯಂ ವೆಂಕಟೇಶ್ವರಲು, ಮಾಜಿ ಶಾಸಕ ಕೋರಂ ಕನಕಯ್ಯ, ಕೋಟಾ ರಾಮ್ ಬಾಬು, ರಾಕೇಶ್ ರೆಡ್ಡಿ ಸೇರಿದಂತೆ ಹಲವು ಪ್ರಮುಖ ನಾಯಕರು ಕಾಂಗ್ರೆಸ್ ಸೇರಿಕೊಂಡಿದ್ದಾರೆ. 35 ನಾಯಕರ ಪೈಕಿ 12 ನಾಯಕರು ಕಾಂಗ್ರೆಸ್ ಸೇರಿದ್ದಾರೆ.
ಮೋದಿಯನ್ನು ಕ್ಷಮೆಯ ವ್ಯಾಪಾರಿ ಎಂದ ತೆಲಂಗಾಣ ಸಿಎಂ ಕೆಸಿಆರ್: ಕೇಜ್ರಿವಾಲ್‌ಗೆ ಬೆಂಬಲ ಘೋಷಿಸಿ ಪ್ರಧಾನಿಗೆ ಕಟುಟೀಕೆ
ಪಾಟ್ನಾದಲ್ಲಿ ನಡೆದ ವಿಪಕ್ಷಗಳ ಮೈತ್ರಿ ಸಭೆಯಿಂದ ಬಿಆರ್‌ಎಸ್ ಪಕ್ಷ ಹೊರಗುಳಿದಿತ್ತು. ತಮ್ಮ ನೇತೃತ್ವದಲ್ಲಿ ವಿಪಕ್ಷಗಳ ಒಗ್ಗೂಟಿಸಿ 2024ರ ಲೋಕಸಭಾ ಚುನಾವಣೆಗೆ ಹೋರಾಡಲು ಕೆಸಿಆರ್ ಪ್ಲಾನ್ ಮಾಡಿದ್ದರು.ಈ ಮೂಲಕ ತಮ್ಮನ್ನೇ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸುವ ಪ್ರಯತ್ನ ಮಾಡಿದ್ದರು. ಆದರೆ ಕೆಸಿಆರ್ ಪ್ರಯತ್ನಕ್ಕೆ ಹಿನ್ನೆಡೆಯಾಗಿದೆ. ಬಿಹಾರ ಸಿಎಂ ನಿತೀಶ್ ಕುಮಾರ್ ನೇತೃತ್ವದಲ್ಲಿ ಮೊದಲ ವಿಪಕ್ಷಗಳ ಸಭೆ ನಡೆದಿದೆ. ಹೀಗಾಗಿ ಕೆಸಿಆರ್ ಈ ಸಭೆಗೆ ಗೈರಾಗಿದ್ದರು. ಈ ಸಭೆ ನಡೆದ ಬೆನ್ನಲ್ಲೇ ಇದೀಗ ಬಿಆರ್‌ಎಸ್ ಪಕ್ಷದ ನಾಯಕರು ಕಾಂಗ್ರೆಸ್ ಸೇರಿಕೊಂಡಿದ್ದಾರೆ.
ನಾಯಕರ ರಾಜೀನಾಮೆ ಕುರಿತು ಪ್ರತಿಕ್ರಿಯಿಸಲು ಕೆಸಿಆರ್ ನಿರಾಕರಿಸಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ಬಿಆರ್‌ಎಸ್ ಪಕ್ಷ ಏಕಾಂಗಿ ಸ್ಪರ್ಧಿಸಲಿದೆ. ಇಷ್ಟೇ ಅಲ್ಲ ಲೋಕಸಭಾ ಚುನಾವಣೆಯಲ್ಲಿ ಸೀಟು ಗೆಲ್ಲುವ ಮೂಲಕ ಹೊಸ ಇತಿಹಾಸ ರಚಿಸುವ ವಿಶ್ವಾಸವಿದೆ ಎಂದು ಕೆ ಚಂದ್ರಶೇಖರ್ ರಾವ್ ಹೇಳಿದ್ದಾರೆ.
ವಿಪಕ್ಷಗಳ ಮೈತ್ರಿ ಸಭೆಯಲ್ಲಿ ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (ಜೆಡಿಯು), ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ (ಆರ್ಜೆಡಿ), ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ (ಕಾಂಗ್ರೆಸ್), ಪಶ್ವಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (ಟಿಎಂಸಿ), ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (ಆಪ್), ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ (ಆಪ್), ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ (ಡಿಎಂಕೆ), ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ (ಜೆಎಂಎಂ), ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ (ಎಸ್ಪಿ), ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (ಶಿವಸೇನೆ ಉದ್ಧವ್ ಬಣ), ಶರದ್ ಪವಾರ್ (ಎನ್ಸಿಪಿ) ಹಾಗೂ ಪಿಡಿಪಿ, ಸಿಪಿಐ (ಎಂ), ಸಿಪಿಐ, ನ್ಯಾಷನಲ್ ಕಾನ್ಫರೆನ್ಸ್‌ನ ನಾಯಕರು ಭಾಗಿಯಾಗಿದ್ದರು.
