ಅಳಿವಿನಂಚಿನಲ್ಲಿರುವ ಗೆದ್ದಲು ಹಿಡಿದ ಕಾಂಗ್ರೆಸ್ ಮೈತ್ರಿಕೂಟಕ್ಕೆ ಮೈಯೆಲ್ಲಾ ರಂಧ್ರಗಳೇ: ಜೆಡಿಎಸ್‌ ತಿರುಗೇಟು

ಗೆದ್ದಲು ಹಿಡಿದ ಕಾಂಗ್ರೆಸ್ ಪಕ್ಷದ ಮೈತ್ರಿಕೂಟಕ್ಕೆ ಮೈಯ್ಯೆಲ್ಲಾ ರಂಧ್ರಗಳೇ ಇವೆ. ಶಿಲಾಯುಗದ ಪಳಿಯುಳಿಕೆಯಂತೆ ಅಳಿವಿನ ಅಂಚಿನಲ್ಲಿರುವ ಕಾಂಗ್ರೆಸ್ ಪಕ್ಷ ಕಾಣದ ಕಡಲಿಗೆ ಹಂಬಲಿಸುತ್ತಿದೆ.

several holes in the Congress alliance holding the endangered termite JDS has hit back sat

ಬೆಂಗಳೂರು (ಸೆ.11): ಜೆಡಿಎಸ್-ಬಿಜೆಪಿ ಮೈತ್ರಿ ಮಾತು ಕೇಳಿ ಮತಿಗೆಟ್ಟು ಕೂತ ಕಾಂಗ್ರೆಸ್‌ ಲೋಕಸಭೆ ಚುನಾವಣೆಯಲ್ಲಿ ಸಿಂಗಲ್ ಸೀಟಿಗೂ ದಿಕ್ಕಿಲ್ಲದ ಸ್ಥಿತಿ ನೆನೆದು ಕೈಕೈ ಪರಚಿಕೊಳ್ಳುತ್ತಿದೆ. ಗೆದ್ದಲು ಹಿಡಿದ ಕಾಂಗ್ರೆಸ್ ಪಕ್ಷದ ಮೈತ್ರಿಕೂಟಕ್ಕೆ ಮೈಯ್ಯೆಲ್ಲಾ ರಂಧ್ರಗಳೇ ಇವೆ. ಶಿಲಾಯುಗದ ಪಳಿಯುಳಿಕೆಯಂತೆ ಅಳಿವಿನ ಅಂಚಿನಲ್ಲಿರುವ ಕಾಂಗ್ರೆಸ್ ಪಕ್ಷ ಕಾಣದ ಕಡಲಿಗೆ ಹಂಬಲಿಸುತ್ತಿದೆ! ಎಂದು ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಟ್ವೀಟ್‌ ಮೂಲಕವೇ ತಿರುಗೇಟು ನೀಡಿದೆ.

ರಾಜ್ಯ ವಿಧಾನಸಭೆಯಲ್ಲಿ ಸೋತರೆ ಪಕ್ಷ ವಿಸರ್ಜನೆ ಮಾಡುವುದಾಗಿ ಹೇಳಿದ್ದ ಜೆಡಿಸ್‌ ಜಾತ್ಯಾತೀತತೆ ವಿಸರ್ಜಿಸುತ್ತಿದೆ. ಜನತಾದಳ ಬದಲಾಗಿ ಕಮಲದಳ ಹೆಸರು ಇಟ್ಟುಕೊಳ್ಳುವಂತೆ ಟೀಕೆ ಮಾಟಿದ್ದ ಕಾಂಗ್ರೆಸ್‌ಗೆ ಜೆಡಿಸ್‌ ಭರ್ಜರಿ ತಿರುಗೇಟು ನೀಡಿದೆ. ಜೆಡಿಎಸ್-ಬಿಜೆಪಿ ಮೈತ್ರಿ ಮಾತು ಕೇಳಿ ಮತಿಗೆಟ್ಟು ಕೂತ ಕರ್ನಾಟಕ ಕಾಂಗ್ರೆಸ್‌ ಲೋಕಸಭೆ ಚುನಾವಣೆಯಲ್ಲಿ ಸಿಂಗಲ್ ಸೀಟಿಗೂ ದಿಕ್ಕಿಲ್ಲದ ಸ್ಥಿತಿ ನೆನೆದು ಕೈಕೈ ಪರಚಿಕೊಳ್ಳುತ್ತಿದೆ. ಪಕ್ಷ ವಿಸರ್ಜನೆ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿ ಅವರು ನೀಡಿದ್ದ ಹೇಳಿಕೆಯನ್ನೇ ತಿರುಚುತ್ತಿರುವ ಕೂಗುಮಾರಿ, ಈಗ ಮಾರಿ ಉಳಿಸಿಕೊಳ್ಳಲು ಸತ್ಯ ತಿರುಚುತ್ತಿದೆ.

'ಜನತಾದಳ' ಹೆಸರನ್ನು 'ಕಮಲದಳ' ಎಂಬುದಾಗಿ ಬದಲಿಸಿಕೊಳ್ಳಿ: ಕಾಂಗ್ರೆಸ್‌ ಟೀಕೆ

ಬಿಎಸ್‌ಪಿ ಬಾಲ ಹಿಡಿದು ನೇತಾಡಿದ್ದು ಕಾಂಗ್ರೆಸ್‌: 75 ವರ್ಷಗಳ ಸ್ವಾತಂತ್ರ್ಯ ಭಾರತದಲ್ಲಿ ಜಾತ್ಯತೀತತೆ ಜಪ ಮಾಡಿಕೊಂಡೇ ಅಧಿಕಾರದ ಅಮಲಿನಲ್ಲಿ ತೇಲಿ 'ಜಲ್ಸಾ' ಹೊಡೆದ ಆ ಪಕ್ಷಕ್ಕೆ ತನ್ನ ಕೊಳಕು ಬೆನ್ನೇ ಕಾಣುತ್ತಿಲ್ಲ. ಶಿವಸೇನೆ, ಜೆಡಿಯು, ಡಿಎಂಕೆಯಂಥ ಪ್ರಾದೇಶಿಕ ಪಕ್ಷಗಳ 'ಬಾಲ'ದಲ್ಲಿಯೇ ಬದುಕು ಕಂಡುಕೊಂಡು ಏದುಸಿರು ಬಿಡುತ್ತಾ ದೇಶದ ಉದ್ದಗಲಕ್ಕೂ 'ಹಸ್ತವ್ಯಸ್ತ'ವಾಗಿದೆ. ಕಾಶ್ಮೀರದಿಂದ ಕೇರಳವರೆಗೆ, ಗುಜರಾತಿನಿಂದ ಓಡಿಶಾವರೆಗೆ ಕೈ ಪಕ್ಷ ಪಾತಾಳ ಕಚ್ಚಿರುವುದು ಅಸತ್ಯವೇ? ನಡುನೀರಿನಲ್ಲಿ ಮುಳುಗಿಹೋಗಿ, 403 ಕ್ಷೇತ್ರಗಳ ಉತ್ತರ ಪ್ರದೇಶದಲ್ಲಿ ಎರಡೇ ಕ್ಷೇತ್ರಗಳಿಗೆ ರನ್ ಔಟ್ ಆಗಿ ಮಕಾಡೆ ಮಲಗಿದ್ದೂ, ಅಲ್ಲೂ ಬಿಎಸ್ಪಿ ಬಾಲ ಹಿಡಿದು ನೇತಾಡಿದ್ದು ಇಷ್ಟು ಬೇಗ ಮರೆತೇ ಹೋಯಿತೇ? ಎಂದು ಪ್ರಶ್ನಿಸಿದೆ. 

ಹಾಸನ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದ ಪ್ರಜ್ವಲ್‌ ರೇವಣ್ಣಗೆ ಮತ್ತೆ ಶಾಕ್‌ ಕೊಟ್ಟ ಹೈಕೋರ್ಟ್

ಶಿಲಾಯುಗದ ಪಳೆಯುಳಿಕೆಯಂತೆ ಅಳಿವಿನಂಚಿನಲ್ಲಿರುವ ಕಾಂಗ್ರೆಸ್‌: ಮುಂದುವರೆದು, 2014, 2019ರ ಲೋಕಸಭೆಯ ಚುನಾವಣೆಗಳಲ್ಲಿ ತಳಮುಟ್ಟಿದ ಪಕ್ಷಕ್ಕೆ 2024ರಲ್ಲಾದರೂ ಅವಕಾಶ ಸಿಕ್ಕೀತೇ ಎನ್ನುವ ಚಿಂತೆ. ಕಾಡಿ, ಬೇಡಿ ಕಟ್ಟಿಕೊಂಡ I.N.D.I.A ಮೈತ್ರಿಕೂಟಕ್ಕೆ ಸೇರಿಕೊಂಡ ವೀರಾಧಿವೀರರೆಲ್ಲ ಬೆಂಗಳೂರಿಗೆ ಬರುವುದಕ್ಕೆ ಮೊದಲು ಎಲ್ಲೆಲ್ಲಿದ್ದರು? ಚುನಾವಣೆ ಮುಗಿದ ಮೇಲೆ ಎಲ್ಲೆಲ್ಲಿ ಹೋಗುತ್ತಾರೆ? ಬಲ್ಲಿರಾ.. ಬಲ್ಲಿರಾ? ಗೆದ್ದಲು ಹಿಡಿದ ಕಾಂಗ್ರೆಸ್ ಪಕ್ಷದ ಮೈತ್ರಿಕೂಟಕ್ಕೆ ಮೈಯ್ಯೆಲ್ಲಾ ರಂಧ್ರಗಳೇ ಎನ್ನುವ ಅರಿವಿಲ್ಲವೇ?  ಶಿಲಾಯುಗದ ಪಳಿಯುಳಿಕೆಯಂತೆ ಅಳಿವಿನ ಅಂಚಿನಲ್ಲಿರುವ ಕಾಂಗ್ರೆಸ್ ಪಕ್ಷ ಕಾಣದ ಕಡಲಿಗೆ ಹಂಬಲಿಸುತ್ತಿದೆ! ಕಂಡವರ ಆಸರೆಯಲ್ಲಿ ಚಳಿ ಕಾಯಿಸಿಕೊಳ್ಳಲು ಅವರಿವರಿಗೆಲ್ಲ ಕರ ಮುಗಿಯುತ್ತಿದೆ! ಎಂದು ಸರಣಿಯಾಗಿ ಟ್ವೀಟ್‌ ಮೂಲಕ ಕಾಂಗ್ರೆಸ್‌ ಟೀಕೆಯನ್ನು ಕಟುವಾಗಿ ವಿರೋಧಿಸಿದೆ.

Latest Videos
Follow Us:
Download App:
  • android
  • ios