'ವಿಚಾರಣೆಯಿಂದ ತಪ್ಪಿಸಿಕೊಳ್ಳಲು ರಮೇಶ್ 'ಜಾರಿಕೊಳ್ಳಲು' ಕೊರೋನಾ ನೆಪವೇ'?
ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಪ್ರಕರಣ ದಿನದಿಂದ ದಿನಕ್ಕೆ ಭಾರೀ ಸಂಚಲನ ಮೂಡಿಸುತ್ತಿದೆ. ಇದರ ಮಧ್ಯೆ ಆರೋಪಿ ಸ್ಥಾನದಲ್ಲಿರುವ ರಮೇಶ್ ಜಾರಕಿಹೊಳಿ ನಡೆ ಕೂಡ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಬೆಂಗಳೂರು, (ಏ.05): ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಕೊರೋನಾ ಸೋಂಕು ತಗುಲಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅವರನ್ನ ಚಿಕಿತ್ಸೆಗಾಗಿ ಗೋಕಾಕ್ ತಾಲೂಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಎನ್ನಲಾಗಿದೆ.
ಆದ್ರೆ, ರಮೇಶ್ ಜಾರಕಿಹೊಳಿ ಅವರು ಸಿ.ಡಿ. ಪ್ರಕರಣದಲ್ಲಿ ಎಸ್‌ಐಟಿ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಈ ನಾಟಕ ಮಾಡುತ್ತಿದ್ದಾರೆ. ಗೋಕಾಕ್ ಆಸ್ಪತ್ರೆಯಲ್ಲಿ ದಾಖಲಾಗಿಲ್ಲ ಎನ್ನುವ ಆರೋಪಗಳು ಕೇಳಿಬರುತ್ತಿವೆ.
ಇನ್ನು ಕೆಲವರು ರಮೇಶ್ ಜಾರಕಿಹೊಳಿ ಬಂಧನದ ಭೀತಿಯಿಂದ ಕೊರೋನಾ ನಾಟಕ ಮಾಡುತ್ತಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಮತ್ತೊಂದೆಡೆ ಇದಕ್ಕೆ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು, ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಕೊರೋನಾ ಹೆಸರಿನ ನೆಪವೇ? ಎಂದು ಪ್ರಶ್ನಿಸಿದೆ.
ಲೌಡ್ ಸ್ಪೀಕರ್ ಇಟ್ಟು ಮಾತಾಡಿದ ಜಗದೀಶ್.. ರಮೇಶ್ ಆಸ್ಪತ್ರೆಯಲ್ಲಿ ಇಲ್ಲ!
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಭೀಮಾ ಕೊರೆಗಾಂವ್ ಪ್ರಕರಣದಲ್ಲಿ ದಲಿತಪರ ಧ್ವನಿಗಳಾಗಿದ್ದ ಚಿಂತಕರ ವೃದ್ಧಾಪ್ಯವನ್ನು ಲೆಕ್ಕಿಸದೆ, ಅನಾರೋಗ್ಯವನ್ನೂ ಪರಿಗಣಿಸದೆ ಕ್ರೂರವಾಗಿ ನಡೆಸಿಕೊಂಡ ಬಿಜೆಪಿ ಈಗ ಅತ್ಯಾಚಾರ ಆರೋಪಿಗೆ ಅನಾರೋಗ್ಯದ ನೆಪ ಹೇಳುವುದು ಹಾಸ್ಯಾಸ್ಪದ. "ಕಳ್ಳನಿಗೊಂದು ಪಿಳ್ಳೆ ನೆಪ"!! ಎಂದು ಟ್ವೀಟ್ ಮಾಡಿದೆ.
ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರು ಎಸ್‌ಐಟಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ನಿನ್ನೆ ರಾತ್ರಿ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು ಅವರ ಬಿಪಿ, ಶುಗರ್ ನಲ್ಲಿ ಏರುಪೇರಾಗಿದ್ದರಿಂದ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಅವರಿಗೆ ಕೊರೋನಾ ಸೋಂಕು ದೃಢಪಟ್ಟಿರುವುದರಿಂದ ಕೋವಿಡ್ ನಿಯಮದಂತೆ 5 ದಿನಗಳ ಕಾಲ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ ಎಂದು ಗೋಕಾಕ್ ತಾಲೂಕು ಆಸ್ಪತ್ರೆಯ ವೈದ್ಯ ಡಾ. ರವೀಂದ್ರ ಹೇಳಿದ್ದರು.