ಬೆಳಗಾವಿ, (ಏ.6): ರಾಸಲೀಲೆ CD ಪ್ರಕರಣದ ಆರೋಪಿ ರಮೇಶ್ ಜಾರಕಿಹೊಳಿ ಮಾಹಿತಿ ಪಡೆಯಲು  ಎಸ್​ಐಟಿ ಅಧಿಕಾರಿಗಳು ಗೋಕಾಕ್ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ರಮೇಶ್ ಜಾರಕಿಹೊಳಿ‌ಗೆ ಕೊರೋನಾ ಪಾಸಿಟಿವ್ ಹಿನ್ನೆಲೆಯಲ್ಲಿ ತಾಲೂಕು ಆಸ್ಪತ್ರೆಯ ICUನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಆಗಮಿಸಿರುವ ಎಸ್​ಐಟಿ ಅಧಿಕಾರಿಗಳು ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅವರಿಂದ ಜಾರಕಿಹೊಳಿ ಆರೋಗ್ಯದ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.

ಜಾರಕಿಹೊಳಿ ಸಿ.ಡಿ.ಕೇಸ್: ಎಸ್‌ಐಟಿ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್!

ಆರೋಗ್ಯ ವಿಚಾರಿಸಿದ ಅಧಿಕಾರಿಗಳು ಒಂದಿಷ್ಟು ಮಾಹಿತಿಯನ್ನ ತೆಗೆದುಕೊಂಡು ಹೋಗಿದ್ದಾರೆ. ಈಗ ಆರೋಗ್ಯ ಸ್ಥಿತಿ ಹೇಗಿದೆ? ಇನ್ನೂ ಎಷ್ಟು ದಿನಗಳ ಕಾಲ ಆಸ್ಪತ್ರೆಯಲ್ಲಿರಬೇಕು? ಯಾವಾಗ ಆಸ್ಪತ್ರೆಗೆ ದಾಖಲಾಗಿದ್ದಾರೆ? ಕೊರೋನಾ ಪಾಸಿಟಿವ್ ಯಾವಾಗ ಬಂತು? ಹೀಗೆ ಹಲವು ಪ್ರಶ್ನೆಗಳನ್ನ ಮಾಡಿ ಜಾರಕಿಹೊಳಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ.