ಲಿಂಗಾಯತರಿಗೆ ಸಿಎಂ ಪಟ್ಟ: ಖರ್ಗೆಗೆ ಶಾಮನೂರು ಪತ್ರ
ಸಣ್ಣ ಸಮುದಾಯಗಳ ಅಭ್ಯರ್ಥಿಗಳು 50 ಕ್ಷೇತ್ರಗಳಲ್ಲಿ ಜಯಗಳಿಸಲು ಲಿಂಗಾಯತರು ಪ್ರಮುಖ ಪಾತ್ರ ವಹಿಸಿದ್ದಾರೆ. ಆದ್ದರಿಂದ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಹಾಗೂ ಸಚಿವ ಸಂಪುಟದಲ್ಲಿ ಹೆಚ್ಚು ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದ ಶಾಮನೂರು ಶಿವಶಂಕರಪ್ಪ
ಬೆಂಗಳೂರು(ಮೇ.17): ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಲು ಪ್ರಮುಖ ಪಾತ್ರ ವಹಿಸಿರುವ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ಹಾಗೂ ಸಚಿವ ಸಂಪುಟದಲ್ಲಿ ಹೆಚ್ಚು ಪ್ರಾತಿನಿಧ್ಯ ನೀಡಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ನಾಯಕ ಶಾಮನೂರು ಶಿವಶಂಕರಪ್ಪ ಪತ್ರ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಗ್ರಹಿಸಿದ್ದಾರೆ.
‘ಬಿಜೆಪಿಯ ಸಾಂಪ್ರದಾಯಿಕ ಮತದಾರರಾಗಿದ್ದ ಲಿಂಗಾಯತರು ಈ ಬಾರಿ ಕಾಂಗ್ರೆಸ್‌ಗೆ ನಿಷ್ಠೆ ಪ್ರದರ್ಶಿಸಿದ್ದಾರೆ. ಕಾಂಗ್ರೆಸ್‌ನಿಂದ ಸಮುದಾಯಕ್ಕೆ 46 ಕ್ಷೇತ್ರದಲ್ಲಿ ಟಿಕೆಟ್ ನೀಡಿದ್ದು ಈ ಪೈಕಿ 34 ಶಾಸಕರು ಆಯ್ಕೆಯಾಗಿ ಶೇ.74 ರಷ್ಟು ಸಾಧನೆಯಾಗಿದೆ. ಸಣ್ಣ ಸಮುದಾಯಗಳ ಅಭ್ಯರ್ಥಿಗಳು 50 ಕ್ಷೇತ್ರಗಳಲ್ಲಿ ಜಯಗಳಿಸಲು ಲಿಂಗಾಯತರು ಪ್ರಮುಖ ಪಾತ್ರ ವಹಿಸಿದ್ದಾರೆ. ಆದ್ದರಿಂದ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಹಾಗೂ ಸಚಿವ ಸಂಪುಟದಲ್ಲಿ ಹೆಚ್ಚು ಪ್ರಾತಿನಿಧ್ಯ ಕಲ್ಪಿಸಬೇಕು’ ಎಂದು ಒತ್ತಾಯಿಸಿದ್ದಾರೆ.
ಸಿಎಂ ಸ್ಥಾನ ಕೊಡಿ ಇಲ್ಲದಿದ್ದರೆ ಶಾಸಕನಾಗಿರುತ್ತೇನೆ, ಖರ್ಗೆ ಮುಂದೆ ಪಟ್ಟು ಹಿಡಿದ ಡಿಕೆ ಶಿವಕುಮಾರ್!
‘ಲಿಂಗಾಯತ ಸಮುದಾಯ ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್ ಬೆಂಬಲಿಸಿದ್ದರಿಂದ ರಾಜ್ಯದಲ್ಲಿ ಪಕ್ಷ 135 ಕ್ಷೇತ್ರದಲ್ಲಿ ಜಯಗಳಿಸಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಪಡೆಯಲು ಸಮುದಾಯದ ಬೆಂಬಲವನ್ನು ಕಾಪಾಡಿಕೊಳ್ಳಬೇಕು. ಆದ್ದರಿಂದ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ ಹುದ್ದೆ ನೀಡಬೇಕು. ಸಂಪುಟದಲ್ಲಿ ಹೆಚ್ಚು ಪ್ರಾತಿನಿಧ್ಯ ನೀಡಬೇಕು’ ಎಂದು ಅವರು ಆಗ್ರಹಿಸಿದ್ದಾರೆ.