ಮುಂದಿನ ಚುನಾವಣೆಗೆ ಭದ್ರಾವತಿ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಿದ ಕುಮಾರಸ್ವಾಮಿ
ಭದ್ರಾವತಿಯ ಗೋಣಿಬೀಡಿನಲ್ಲಿ ಅಪ್ಪಾಜಿ ಗೌಡರ ಪುತ್ಥಳಿ ಅನಾವರಣ ಮಾಡಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಮುಂದಿನ ಚುನಾವಣೆಗೆ ಭದ್ರಾವತಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಸರನ್ನೂ ಸಹ ಘೋಷಣೆ ಮಾಡಿದರು.
ಶಿವಮೊಗ್ಗ, (ಸೆ.21): ಭದ್ರಾವತಿಯ ಗೋಣಿಬೀಡಿನಲ್ಲಿ ಅಪ್ಪಾಜಿ ಗೌಡರ ಪುತ್ಥಳಿ ಅನಾವರಣ ಮಾಡಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಮುಂದಿನ ಚುನಾವಣೆಗೆ ಭದ್ರಾವತಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಸರನ್ನೂ ಸಹ ಘೋಷಣೆ ಮಾಡಿದರು.
ಚುನಾವಣೆಗೂ ಮುನ್ನ ಆಪರೇಷನ್ ಪಾಲಿಟಿಕ್ಸ್, ಜೆಡಿಎಸ್ ತೊರೆಯಲು ಹೊರಟವರಿಗೆ ಎಚ್‌ಡಿಕೆ ಶಾಕ್..!
ಭದ್ರಾವತಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಶಾರದಾ ಅಪ್ಪಾಜಿಗೌಡ ಸ್ಪರ್ಧಿಸಲಿದ್ದಾರೆ ಎಂದು ಕುಮಾರಸ್ವಾಮಿ ಬಹಿರಂಗವಾಗಿಯೇ ಪ್ರಕಟಿಸಿದರು. ಭದ್ರಾವತಿ ಕ್ಷೇತ್ರದ ಜನರ ಹಾಗೂ ಅಪ್ಪಾಜಿಗೌಡರ ಬೆಂಬಲಿಗರ ಧ್ವನಿಗೆ ನಾನು ಬೆಲೆ ಕೊಡುತ್ತೇನೆ. ಈಗಾಗಲೇ ಕ್ಷೇತ್ರದ ಜನರೇ ತಮ್ಮ ಅಭ್ಯರ್ಥಿ ಯಾರೆಂದು ನಿರ್ಧರಿಸಿದ್ದಾರೆ. ಹಾಗೆಯೇ ಸಹೋದರಿ ಶಾರದಾ ಅಪ್ಪಾಜಿಗೌಡರನ್ನು ಮುಂದಿನ ಅಭ್ಯರ್ಥಿ ಮಾಡುತ್ತೇವೆ ಎಂದರು.