ಖರ್ಗೆ ಅವರನ್ನೇ ಅಧಿಕೃತ ಅಭ್ಯರ್ಥಿ ಎಂದು ಬಿಂಬಿಸೋದೇಕೆ? ಹೈಕಮಾಂಡ್‌ಗೆ ಶಶಿ ತರೂರ್ ಪ್ರಶ್ನೆ
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಶಶಿ ತರೂರ್, ಅಧಿಕೃತ ಅಭ್ಯರ್ಥಿ ಇಲ್ಲ ಎಂದು ಪಕ್ಷದ ನಾಯಕತ್ವ ನನಗೆ ಹೇಳಿತ್ತು. ಕಾಂಗ್ರೆಸ್‌ನ ಹಿರಿಯ ನಾಯಕರ ತಂಡದೊಂದಿಗೆ ಖರ್ಗೆಯವರು ನಾಮಪತ್ರ ಸಲ್ಲಿಸಲು ಹೋಗಿರುವುದು ನೋಡಿದರೆ ತಿಳಿಯುತ್ತದೆ ಅವರೇ ಅಧಿಕೃತ ಅಭ್ಯರ್ಥಿ ಎನ್ನುವುದು ತಿಳಿಯುತ್ತದೆ. ಇನ್ನೊಂದೆಡೆ ತಾವು, ಸಾಮಾನ್ಯ ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಸಿದ್ದಾಗಿ ಹೇಳಿದ್ದಾರೆ.
ನವದೆಹಲಿ (ಸೆ.30): ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಸಂಸದ ಶಶಿ ತರೂರ್ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ಪಕ್ಷದ ಹಿರಿಯ ನಾಯಕರು ಹಾಗೂ ಕಾಂಗ್ರೆಸ್ ನಾಯಕತ್ವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡುತ್ತಿರುವ ಬೆಂಬಲದ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೈಕಮಾಂಡ್‌ನ ಅಧಿಕೃತ ಅಭ್ಯರ್ಥಿಯಾಗಿ ಬಿಂಬಿಸುತ್ತಿರೋದೇಕೆ ಎಂದು ಪ್ರಶ್ನೆ ಮಾಡಿದ್ದಾರೆ. ಅಧಿಕೃತ ಅಭ್ಯರ್ಥಿ ಇರುವುದಿಲ್ಲ ಎಂದು ಪಕ್ಷದ ನಾಯಕತ್ವ ನನಗೆ ಹೇಳಿತ್ತು ಎಂದು ಶಶಿ ತರೂರ್ ಹೇಳಿದ್ದಾರೆ. ಕಾಂಗ್ರೆಸ್‌ನ ಹಿರಿಯ ನಾಯಕರ ತಂಡದೊಂದಿಗೆ ಖರ್ಗೆಯವರು ನಾಮಪತ್ರ ಸಲ್ಲಿಸಲು ಹೋಗಿರುವುದು ಅವರು ಅಧಿಕೃತ ಅಭ್ಯರ್ಥಿ ಎನ್ನುವಂತೆ ಕಾಣುತ್ತದೆ ಎಂದರು. ಇನ್ನೊಂದೆಡೆ ನಾನು ಸಾಮಾನ್ಯ ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಸಿದ್ದೇನೆ. ಯಥಾಸ್ಥಿತಿ ಕಾಯ್ದುಕೊಳ್ಳಲು ಬಯಸುವವರು ಖರ್ಗೆ ಅವರಿಗೆ ಮತ ಹಾಕುತ್ತಾರೆ, ಬದಲಾವಣೆ ಬಯಸುವವರು ನನಗೆ ಮತ ಹಾಕುತ್ತಾರೆ ಎಂದು ತರೂರ್ ಈ ವೇಳೆ ಹೇಳಿದ್ದಾರೆ. ಪಕ್ಷದ ಅಧಿಕೃತ ಅಭ್ಯರ್ಥಿ ಇರುವುದಿಲ್ಲ ಎಂದು ಸೋನಿಯಾ ಗಾಂಧಿ ನನಗೆ ಭರವಸೆ ನೀಡಿದ್ದಾರೆ ಎಂದು ಶಶಿ ತರೂರ್ ಹೇಳಿದ್ದಾರೆ.
ಈ ಚುನಾವಣೆಯಲ್ಲಿ ಗಾಂಧಿ ಕುಟುಂಬ ತಟಸ್ಥವಾಗಿರಲಿದೆ. ಸಾಧ್ಯವಾದಷ್ಟು ಅಭ್ಯರ್ಥಿಗಳನ್ನು ಚುನಾವಣೆಗೆ ಅವರು ಸ್ವಾಗತ ಮಾಡಿದ್ದರು. ಇದರಿಂದಾಗಿ ನಾನು ಈ ರೇಸ್‌ನಲ್ಲಿ ಮುಂದೆ ಬಂದಿದ್ದೇನೆ. ನನ್ನ ಚುನಾವಣೆಯಲ್ಲಿ ಸ್ಪರ್ಧಿಸುವುದೆಂದರೆ ಯಾರನ್ನೂ ಅಗೌರವ ಮಾಡುವುದಲ್ಲ. ಸೌಹಾರ್ದ ಮುಖಾಮುಖಿ ಇದಾಗಿರಲಿದೆ ಎಂದು ಹೇಳಿದ್ದಾರೆ.
ನಾವು ಶತ್ರುಗಳು ಅಥವಾ ಪ್ರತಿಸ್ಪರ್ಧಿಗಳಲ್ಲ ಎಂದು ತರೂರ್ ಹೇಳಿದ್ದಾರೆ. ನಾವು ಕೊನೆಗೆ ಮಿತ್ರರು. ಪಕ್ಷವನ್ನು ಮುನ್ನಡೆಸಲು ನಾವು ಆಸಕ್ತಿ ಹೊಂದಿದ್ದೇವೆ. ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನಮ್ಮ ಪಕ್ಷದ ‘ಭೀಷ್ಮ ಪಿತಾಮಹ’. ಯಾವ ರೀತಿ ಮುಂದುವರಿಯಬೇಕು ಎಂಬುದನ್ನು ಪಕ್ಷದ ಕಾರ್ಯಕರ್ತರು ನಿರ್ಧರಿಸಲಿ. ಖರ್ಗೆ ಅಥವಾ ಇತರ ಅಭ್ಯರ್ಥಿಗಳ ಬಗ್ಗೆ ನಾನು ನಕಾರಾತ್ಮಕವಾಗಿ ಏನನ್ನೂ ಹೇಳುವುದಿಲ್ಲ ಎಂದು ಹೇಳಿದರು. ಕಾಂಗ್ರೆಸ್ ಇದೀಗ ಕೇಂದ್ರೀಕೃತ ನಿರ್ಧಾರ ತೆಗೆದುಕೊಳ್ಳುವ ಮಾದರಿಯನ್ನು ಹೊಂದಿದೆ, ಅದನ್ನು ಬದಲಾಯಿಸಬೇಕಾಗಿದೆ ಎಂದು ತರೂರ್ ಹೇಳಿದರು. ಜಿಲ್ಲಾಧ್ಯಕ್ಷರನ್ನು ಕೂಡ ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡುತ್ತದೆ ಎಂದರು. ಅದರ ನಿರ್ಧಾರವನ್ನು ರಾಜ್ಯ ಸಮಿತಿ ತೆಗೆದುಕೊಳ್ಳಬೇಕೇ ಹೊರತು ಕಾಂಗ್ರೆಸ್ ಹೈಕಮಾಂಡ್ ಅಲ್ಲ ಎಂದು ಶಶಿ ತರೂರ್ (Shashi Tharoor) ಹೇಳಿದ್ದಾರೆ.
Congress ಅಧ್ಯಕ್ಷ ಸ್ಥಾನಕ್ಕೆ ಮೂವರ ಸ್ಪರ್ಧೆ..? ಶಶಿ ತರೂರ್ ಸ್ಪರ್ಧೆಗೆ ಸೋನಿಯಾ ಸಮ್ಮತಿ..!
ಮೂವರು ಅಭ್ಯರ್ಥಿಗಳಿಂದ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಫೈಟ್: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ (Congress President Election) ಚುನಾವಣೆ ಅಕ್ಟೋಬರ್ 17 ರಂದು ನಡೆಯಲಿದೆ. ಇಂದು ನಾಮಪತ್ರ ಸಲ್ಲಿಕೆ ಮಾಡಲು ಕೊನೆಯ ದಿನವಾಗಿತ್ತು. ಶಶಿ ತರೂರ್ ಮತ್ತು ಮಲ್ಲಿಕಾರ್ಜುನ್ ಖರ್ಗೆ ಈಗಾಗಲೇ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅವರಿಬ್ಬರಲ್ಲದೆ, ಜಾರ್ಖಂಡ್‌ನ (Jharkhand) ಕಾಂಗ್ರೆಸ್ ನಾಯಕ ಕೆಎನ್ ತ್ರಿಪಾಠಿ (KN Tripathi) ಕೂಡ ಶುಕ್ರವಾರ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಮೇಲುಗೈ ಎಂದು ಹೇಳಲಾಗುತ್ತಿದ್ದರೂ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮೂವರು ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ಈಗ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಶಶಿ ತರೂರ್ ಪ್ಲಾನ್..!
ನಮ್ಮ ವಿರೋಧ ಸಿಎಂ ಆಗೋದಕ್ಕಿಂತ ಮಧ್ಯಂತರ ಚುನಾವಣೆಯೇ ಬೆಸ್ಟ್: ಈ ನಡುವೆ ಕಾಂಗ್ರೆಸ್ ಅಧ್ಯಕ್ಷ ಸ್ಪರ್ಧೆಯ ರೇಸ್‌ನಿಂದ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹೊರಬಿದ್ದಿದ್ದಾರೆ. ಈ ವೇಳೆ ಸಚಿನ್ ಪೈಲಟ್ ರಾಜಸ್ಥಾನದ ಸಿಎಂ ಆಗುವ ಬಗ್ಗೆ ಮಾತನಾಡಿರುವ ಅಶೋಕ್ ಗೆಹ್ಲೋಟ್ ಬಣದ ಶಾಸಕರು. ವಿರೋಧಿ ಬಣದ ವ್ಯಕ್ತಿಯೊಬ್ಬ ಸಿಎಂ ಆಗೋದಕ್ಕಿಂತ, ಮಧ್ಯಂತರ ಚುನಾವಣೆಯೇ ಬೆಸ್ಟ್ ಎಂದು ಹೇಳಿದ್ದಾರೆ. ಅದರೊಂದಿಗೆ ರಾಜಸ್ಥಾನದ ಬಿಕ್ಕಟ್ಟು ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯೊಂದಿಗೆ ನಿಲ್ಲೋದಿಲ್ಲ ಅನ್ನೋದು ಸ್ಪಷ್ಟವಾಗಿದೆ.