Asianet Suvarna News Asianet Suvarna News

Shivaji Statue: ಶಿವಾಜಿ ಪ್ರತಿಮೆಗೆ ಮಸಿ ಬಳಿದವರು ಕಾಂಗ್ರೆಸ್‌ನವರು, ಬಿಜೆಪಿ ಗಂಭೀರ ಆರೋಪ

* ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ
* ಕಾಂಗ್ರೆಸ್‌ ವಿರುದ್ಧ ಗಂಭೀರ ಆರೋಪ ಮಾಡಿದ ಬಿಜೆಪಿ
* ಸರಣಿ ಟ್ವೀಟ್ ಮೂಲಕ ನೇರ ಆರೋಪ

shivaji statue desecrated in Bengaluru BJP Allegation on Congress rbj
Author
Bengaluru, First Published Dec 18, 2021, 10:55 PM IST | Last Updated Dec 18, 2021, 10:55 PM IST

ಬೆಂಗಳೂರು, (ಡಿ.18): ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ (Shivaji Statue) ಮಸಿ ಬಳಿದವರು ಮತ್ತು ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟವರು ಕಾಂಗ್ರೆಸ್ ಕಾರ್ಯಕರ್ತರು ಎಂದು ಬಿಜೆಪಿ(BJP) ಕಾಂಗ್ರೆಸ್ (Congress) ವಿರುದ್ಧ ನೇರ ಆರೋಪ ಮಾಡಿದೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಮಹಾರಾಷ್ಟ್ರದಲ್ಲಿ (Maharashtra) ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟವರು ಕಾಂಗ್ರೆಸ್ ಕಾರ್ಯಕರ್ತರು. ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಂಚು ನಡೆಸಿದ್ದೂ ಕಾಂಗ್ರೆಸ್ ಕಾರ್ಯಕರ್ತರು. ಇವರ ಕೃತ್ಯ, ಉದ್ದೇಶ ಹಾಗೂ ಹಿಂದಿರುವ ಶಕ್ತಿಗಳು ಕಾಂಗ್ರೆಸ್ಸಿಗರೇ ಎನ್ನುವ ಸಂಶಯ ರಾಜ್ಯದ ಜನತೆಯನ್ನು ಕಾಡುತ್ತಿದೆ ಎಂದಿದೆ.

Belagavi: ಎಂಇಎಸ್, ಶಿವಸೇನೆ ಪುಂಡರ ಬೆಂಬಲಕ್ಕೆ ನಿಂತ ಬಿಜೆಪಿ ನಾಯಕ

ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣ ಹಾಗೂ ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜ ಸುಟ್ಟಿದ್ದಕ್ಕೆ ಡಿಕೆಶಿ ಅವರು ಏಕೆ ಪ್ರತಿಕ್ರಿಯೆ ನೀಡಿಲ್ಲ ಎನ್ನುವುದಕ್ಕೆ ಕಾರಣ ಸ್ಪಷ್ಟವಾಗಿದೆ. ಎಲ್ಲದಕ್ಕೂ ಉತ್ತರ ಒಂದೇ. ಅದರ ಹಿಂದಿರುವ ವ್ಯಕ್ತಿಗಳೆಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೆಪಿಸಿಸಿ ಅಧ್ಯಕ್ಷರ ಹಿಂದೆ ನಿಂತವರು. ಸಿದ್ದರಾಮಯ್ಯನವರೇ, ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದವರು ಯಾರಿಗೆ ಆಪ್ತರು ಎನ್ನುವುದನ್ನು ಗಮನಿಸಿ! ಈಗ ನಿಮ್ಮ “ಕ್ರಿಯೆಗೆ ತಕ್ಕ ಪ್ರತಿಕ್ರಿಯೆ” ಏನು? ಎಂದು ಪ್ರಶ್ನಿಸಿದೆ. 

ಎಂಇಎಸ್‌ ಪುಂಡರು ಮಹಾರಾಷ್ಟ್ರದಲ್ಲಿ ಕನ್ನಡದ ಧ್ವಜವನ್ನು ಸುಟ್ಟ ಪ್ರಕರಣ ಇನ್ನೂ ಮಾಸುವ ಮುನ್ನವೇ ಇತ್ತ ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಕೆಲವು ಪುಂಡರು ಧ್ವಂಸಗೊಳಿಸಿದ್ದಾರೆ. ಮತ್ತೊಂದೆಡೆ ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದಾರೆ.

ಆರು ಮಂದಿ ಪೊಲೀಸರ ವಶಕ್ಕೆ
ಬೆಂಗಳೂರಿನ ಸದಾಶಿವನಗರದ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿ ನವೀನ್ ಸೇರಿದಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದು ಸದಾಶಿವನಗರ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಅಜ್ಞಾತ ಸ್ಥಳದಲ್ಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ನವೀನ್ ಎಂಬಾತ ಮೊದಲು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದ. ಸದ್ಯ ಈತನಿಗೂ ಕೃತ್ಯ ಎಸಗಿದ ಆರೋಪಿಗಳಿಗೂ ನಂಟು ಶಂಕೆ ವ್ಯಕ್ತವಾಗಿದೆ. ಈ ಹಿನ್ನಲೆ ಸದಾಶಿವನಗರ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ
ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದವರ ವಿರುದ್ಧ ಕಠಿಣಕ್ರಮ ಕೈಗೊಳ್ಳುತ್ತೇವೆ. ಬೆಳಗಾವಿಯಲ್ಲಿ ಈಗಾಗಲೇ ಕೆಲ ಆರೋಪಿಗಳ ಬಂಧನ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರತಿಮೆಗಳನ್ನು ಮಾಡಿರುವುದು ಗೌರವ ಸೂಚಿಸುವುದಕ್ಕಾಗಿ. ಅಂಥಾ ಮಹಾನ್ ನಾಯಕರನ್ನು ಅಪಮಾನಿಸುವುದು ಸರಿಯಲ್ಲ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಸಮಾಜದಲ್ಲಿ ಗಲಭೆ ಉಂಟುಮಾಡುವುದು ಸರಿಯಲ್ಲ. ಗಲಭೆಯ ಹಿಂದೆ ಹಲವಾರು ಕಾರಣಗಳಿವೆ. ಬೆಳಗಾವಿಯಲ್ಲಿ ಅಧಿವೇಶನ ಸೇರಿ ಬೇರೆ ಬೇರೆ ಕಾರಣಗಳಿವೆ. ಯಾರೇ ಆದರೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಈ ರೀತಿ ಪದೇ ಪದೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು. ಪ್ರತಿಮೆಗಳನ್ನು ಭಗ್ನಗೊಳಿಸುವುದು ದೇಶಭಕ್ತರ ಕೆಲಸವಲ್ಲ. ಕೆಲ ಪುಂಡರಿಂದ ಇಂತಹ ಕೃತ್ಯ, ಅವರನ್ನು ಸದೆಬಡಿಯುತ್ತೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios