ತುಮಕೂರು, ಶಿವಮೊಗ್ಗದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧವೇ ದೂರು ದಾಖಲು

* ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧವೇ ದೂರು ದಾಖಲು
* ತುಮಕೂರು ಹಾಗೂ ಶಿವಮೊಗ್ಗದಲ್ಲಿ ದೂರು ದಾಖಲು
* ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪ

Shivamogga And Tumakuru Congress Files Case against Home Minister araga jnanendra rbj

ಶಿವಮೊಗ್ಗ/ತುಮಕೂರು, (ಏ.8): ಉರ್ದು ಮಾತನಾಡದಿದ್ದಕ್ಕೆ ಬೆಂಗಳೂರಿನಲ್ಲಿ ಚಂದ್ರು ಕೊಲೆಯಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೇ  ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ  ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ರಾಜ್ಯದಲ್ಲಿ ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು (Congress Activist) ದೂರು ನೀಡಿದ್ದಾರೆ.

ಜೆಜೆನಗರ ಚಂದ್ರು ಕೊಲೆ ಪ್ರಕರಣ ಗೃಹ ಸಚಿವ ಅರಗ ಜ್ಞಾನೇಂದ್ರ ಎಡವಟ್ಟು!

ತುಮಕೂರು ಯುವ ಕಾಂಗ್ರೆಸ್ (Congress) ಘಟಕದಿಂದ ದೂರು ದಾಖಲಾಗಿದೆ. ಹಾಗೂ  ಶಿವಮೊಗ್ಗದಲ್ಲೂ ಸಹ ದೂರು ದಾಖಲು ಮಾಡಲಾಗಿದೆ. ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ತುಮಕೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿಹುಲಿಕುಂಟೆಮಠ್ ನೇತೃತ್ವದಲ್ಲಿ ತುಮಕೂರು ಎಎಸ್ಪಿ ಉದೇಶ್ಗೆ ದೂರು ಸಲ್ಲಿಸಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಜಾತಿಗಳ ಮಧ್ಯೆ ಕೋಮುಗಲಭೆ ಸೃಷ್ಟಿ ಮಾಡುವ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದ್ದಾರೆ.

ದೂರಿನಲ್ಲಿ ಏನಿದೆ? 
ಧಾರ್ಮಿಕ ಭಾವನೆ ಕೆರಳಿಸುವುದು ಮತ್ತು ಸಾಮಾಜಿಕ ಶಾಂತಿ ಹದಗೆಡಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಉದ್ದೇಶಪೂರ್ವಕವಾಗಿ ಹೇಳಿಕೆ ನೀಡಿದ್ದಾರೆ. ಸಮಾಜದಲ್ಲಿ ಶತ್ರುತ್ವ ಬೆಳೆಯಲು ಕಾರಣವಾಗಿ, ಅದರ ಲಾಭ ಪಡೆಯುವ ಉದ್ದೇಶವನ್ನು ಅವರು ಹೊಂದಿದ್ದಾರೆ. ರಾಜ್ಯದಲ್ಲಿ ಶಾಂತಿ ಕದಡಲು ಮುಂದಾಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ಐಪಿಸಿ ಸೆಕ್ಷನ್ 153, 153ಎ, 295ಎ, 298, 505ಗಳ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ವಿವಾದಕ್ಕೆ ಕಾರಣವಾದ ಸಚಿವರ ಹೇಳಿಕೆ ಏನು?:
ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡುವಾಗ ಉರ್ದು ಮಾತನಾಡದಿದ್ದಕ್ಕೆ ಹತ್ಯೆ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಬಹಳಷ್ಟು ವಿವಾದಕ್ಕೆ ಕಾರಣವಾಗಿದೆ. ಜೊತೆಗೆ ಸಚಿವರ ವಿರುದ್ಧ ಹಲವರು ಗರಂ ಆಗಿದ್ದಾರೆ.

ಹೇಳಿಕೆ ತಪ್ಪಾಗಿದೆ ಎಂದ ಆರಗ:
ತಕ್ಷಣದ ಮಾಹಿತಿ ಆಧರಿಸಿ ನಾನು ಹೇಳಿಕೆ ನೀಡಿದ್ದೆ. ನಾನು ನೀಡಿರುವ ಹೇಳಿಕೆ ತಪ್ಪಾಗಿದೆ. ಪೊಲೀಸರು ವಿಸ್ತೃತವಾದ ಮಾಹಿತಿ ನೀಡಿದ್ದಾರೆ. ಬೈಕ್ ಡಿಕ್ಕಿಯಾಗಿ ಗಲಾಟೆಯಾಗಿ ಚಂದ್ರುಗೆ ಚೂರಿ ಇರಿತ ಆಗಿದೆ. ಆಸ್ಪತ್ರೆಗೆ ಹೋಗುವಷ್ಟರಲ್ಲಿ ರಕ್ತಸ್ರಾವವಾಗಿ ಚಂದ್ರು ಸಾವನ್ನಪ್ಪಿದ್ದಾರೆ. ಈ ಹಿಂದೆ ನಾನು ನೀಡಿದ್ದ ಹೇಳಿಕೆ ತಪ್ಪಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದರು. ಮೂಲಗಳ ಮಾಹಿತಿ ಆಧಾರವಾಗಿ ನಾನು ಹೇಳಿಕೆ ನೀಡಿದ್ದೆ. ನಾನು ಈ ಹಿಂದೆ ಹೇಳಿದಂತೆ ಯಾವುದೇ ಘಟನೆ ನಡೆದಿಲ್ಲ. ಉರ್ದು ಮಾತನಾಡದಿದ್ದಕ್ಕೆ ಹತ್ಯೆ ಮಾಡಿದ್ದಾರೆ ಎಂದು ಹೇಳಿದ್ದೆ. ನನ್ನ ಹೇಳಿಕೆ ತಪ್ಪಾಗಿದೆ ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದರು.

ಅಸಲಿ ಘಟನೆ ಏನು..?: ಎರಡು ದಿನದ ಹಿಂದೆ ಯಷ್ಟೆ ಛಲವಾದಿ ಪಾಳ್ಯದ ನಿವಾಸಿಯಾಗಿರೋ ಚಂದ್ರು ತನ್ನ ಸ್ನೇಹಿತ ಸೈಮನ್ ಬರ್ತಡೆಗೆ ಜೆಜೆನಗರ ತೆರಳಿದ್ರು.. ಹೊಟೆಲ್ ಒಂದರಲ್ಲಿ ಚಿಕನ್ ರೋಲ್ ತಿಂದ ವಾಪಸ್ ಆಗುವಾಗ ಶಾಹಿದ್ ಎಂಬಾತನ ಬೈಕ್ ಗೆ ಡಿಕ್ಕಿಹೊಡೆದಿದ್ದ ಈ ವೇಳೆ ಶಾಹಿದ್, ಸೈಮನ್ ಚಂದ್ರು ನಡುವೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿತ್ತು.. ಕೂಡಲೆ ತನ್ನ ಬಳಿಯಿದ್ದ ಡ್ರಾಗರ್ ತೆಗೆದು ಚಂದ್ರು ತೊಡೆಗೆ  ಬಲವಾಗಿ ಇರಿದಿದ್ದ ಶಾಹಿದ್.. ಜೊತೆಗೆ ಏರಿಯಾದ ಮತ್ತೊಬ್ಬ ಶಾಹಿದ್ ಹಾಗೂ ಮತ್ತೊಬ್ಬ ತಲವಾರ್ ನಿಂದ ಹಲ್ಲೆ ಮಾಡಿದ್ದಾರೆ.. ತೀವ್ರ ರಕ್ತಸ್ರಾವವಾಗಿ ಚಂದ್ರು ಮೃತಪಟ್ಟಿದ್ದಾನೆ ಘಟನೆ ಸಂಬಂಧ ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

Latest Videos
Follow Us:
Download App:
  • android
  • ios