Asianet Suvarna News Asianet Suvarna News

ರಾಜ್ಯ ರಾಜಕಾರಣದತ್ತ ರಾಘವೇಂದ್ರ ಚಿತ್ತ, ತಂದೆ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರಾ?

* ರಾಜ್ಯ ರಾಜಕಾರಣ ಪ್ರವೇಶದ ಇಂಗಿತ ವ್ಯಕ್ತಪಡಿಸಿದ ಸಂಸದ ಬಿ.ವೈ. ರಾಘವೇಂದ್ರ
* ಈ ಬಗ್ಗೆ ತಮ್ಮ ಮನದಾಳದ ಮಾತುಗಳನ್ನ ಬಹಿರಂಗಪಡಿಸಿದ ಬಿಎಸ್‌ವೈ ಪುತ್ರ
 * ತಂದೆ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರಾ ರಾಘವೇಂದ್ರ?

Shivamogga BJP MP By  raghavendra eye On Karnataka Politics rbj
Author
Bengaluru, First Published Oct 11, 2021, 4:07 PM IST

ಶಿವಮೊಗ್ಗ, (ಅ.11): ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ (BS Yediyurappa) ಪುತ್ರ ಬಿವೈ ರಾಘವೇಂದ್ರ (BT Raghavendra) ಅವರು ರಾಜ್ಯ ರಾಜಕಾರಣಕ್ಕೆ ಆಗಮಿಸಲುವ ಇಂಗಿತ ವ್ಯಕ್ತಪಡಿಸಿದ್ದಾರೆ. 

 ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿಯಲ್ಲಿ ಗೋಪಾಲಕೃಷ್ಣ ದೇವಾಲಯದ ಸಮುದಾಯ ಭವನ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳುವ ಮೊದಲ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ವರಿಷ್ಠರು ಹಾಗೂ ಸಂಘಟನೆ ಒಪ್ಪಿಗೆ ನೀಡಿದರೆ ರಾಜ್ಯ ರಾಜಕಾರಣಕ್ಕೆ ಪ್ರವೇಶಿಸುತ್ತೇನೆ ಎಂದು ಪರೋಕ್ಷವಾಗಿ ತಮ್ಮ ಮನದ ಆಸೆಯನ್ನು ಬಹಿರಂಗಪಡಿಸಿದರು.

ಮುನಿಸಿಕೊಂಡಿದ್ದ ಶಾಸಕ ಕುಮಾರ ಬಂಗಾರಪ್ಪ ಸಂಧಾನ ಸಕ್ಸಸ್

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ (Assembly Election) ಶಿಕಾರಿಪುರದಿಂದ  (Shikaripura) ಸ್ಪರ್ಧೆ ಮಾಡುತ್ತೀರೇ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಬಿ.ವೈ. ರಾಘವೇಂದ್ರ, ಯಡಿಯೂರಪ್ಪ ಹಾಗೂ ನಮ್ಮನ್ನು ಬಿಜೆಪಿ (BJP) ಬೆಳೆಸಿದೆ. ಹೀಗಾಗಿ ಬಿಜೆಪಿ ನಮ್ಮ ಪಾಲಿಗೆ ತಾಯಿ ಇದ್ದಂತೆ. ಪಕ್ಷ ಹಾಗೂ ವರಿಷ್ಠರು ಒಪ್ಪಿಗೆ ನೀಡಿದರೆ ಖಂಡಿತವಾಗಿಯೂ ರಾಜ್ಯ ರಾಜಕಾರಣಕ್ಕೆ ಬರುತ್ತೇನೆ ಎಂದು ಸ್ಪಷ್ಟಪಡಿಸಿದರು.

ಇನ್ನು ಇದೇ ವೇಳೆ ಯಡಿಯೂರಪ್ಪ ಆಪ್ತರ ಮೇಲಿನ ಐಟಿ ದಾಳಿ (IT Raid) ರಾಜಕೀಯ ಪ್ರೇರಿತ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಆರೋಪಕ್ಕೂ ಪ್ರತಿಕ್ರಿಯೆ ನೀಡಿದ ರಾಘವೇಂದ್ರ, ಡಿಕೆಶಿ ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ. ತಂದೆಯ ಆಪ್ತರ ಮೇಲೆ ನಡೆದಿರುವ ಐಟಿ ದಾಳಿ ರಾಜಕೀಯ (Politics) ಪ್ರೇರಿತವಾಗಿಲ್ಲ. ತನಿಖಾ ದಳ ಪಾರದರ್ಶಕ ತನಿಖೆಯನ್ನೇ ನಡೆಸುತ್ತಿದೆ ಎಂದರು.

ಇದೇ ವೇಳೆ ಪಕ್ಷದಲ್ಲಿ ಯಡಿಯೂರಪ್ಪರನ್ನು ಕಡೆಗಣನೆ ಮಾಡಲಾಗುತ್ತಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೂ ಉತ್ತರಿಸಿದ ಬಿ.ವೈ. ರಾಘವೇಂದ್ರ, ಬಿಜೆಪಿ ಯಡಿಯೂರಪ್ಪರನ್ನು ಕಡೆಗಣಿಸಲು ಸಾಧ್ಯವೇ ಇಲ್ಲ ಎಂದು ತಿಳಿಸಿದರು.

ರಾಘವೇಂದ್ರ ಅವರು ರಾಜ್ಯ ರಾಜಕಾರಣಕ್ಕೆ ಆಗಮಿಸುವ ಇಂಗಿತ್ತ ವ್ಯಕ್ತಪಡಿಸಿದ್ದು, ಎಲ್ಲಾ ಅಂದುಕೊಂಡಂತೆ ಆದ್ರೆ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ತಂದೆಯ ಕ್ಷೇತ್ರವಾದ ಶಿಕಾರಿಪುರದಿಂದ ಕಣಕ್ಕಿಳಿಯುವ ಎಲ್ಲಾ ಸಾಧ್ಯತೆಗಳಿವೆ. ಇನ್ನು ಬಿವೈ ವಿಜಯೇಂದ್ರ ವರುಣ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದು, ಈಗಾಗಲೇ ಅಲ್ಲಿ ತಮ್ಮ ತಂಡವನ್ನು ಕಟ್ಟುತ್ತಿದ್ದಾರೆ.

Follow Us:
Download App:
  • android
  • ios