Asianet Suvarna News Asianet Suvarna News

ಜನರ ಮೂಗಿಗೆ ತುಪ್ಪ ಸವರಿದ ಕಾಂಗ್ರೆಸ್‌: ಸಂಸದ ರಾಘವೇಂದ್ರ

ನಮ್ಮ ಚುನಾವಣಾ ಪ್ರಚಾರ ಚೆನ್ನಾಗಿ ಆಗುತ್ತಿದೆ. ಹೋದಲೆಲ್ಲಾ ಜನರು ಮೋದಿಜಿಯವರ ಪರವಾಗಿ ಮಾತನಾಡುತ್ತಿದ್ದಾರೆ. ರಾಷ್ಟ್ರೀಯ ಭದ್ರತೆ ಬಗ್ಗೆ ಮಾತನಾಡುತ್ತಾರೆ. ನಾವು ಅತಿ ಹೆಚ್ಚು ಲೀಡ್‌ನಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಂಸದ ಬಿ.ವೈ.ರಾಘವೇಂದ್ರ 

Shivamogga BJP MP BY Raghavendra Slams Congress grg
Author
First Published Apr 28, 2024, 6:37 AM IST

ಶಿವಮೊಗ್ಗ(ಏ.28): ಜನರ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಕಾಂಗ್ರೆಸ್ ಗ್ಯಾರಂಟಿ ಈ ಚುನಾವಣೆಯಲ್ಲಿ ನಡೆಯಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಗ್ಯಾರಂಟಿ ಯೋಜನೆಗಳ ಮುಖಾಂತರ ಮತದಾರರನ್ನು ತಲುಪಲು ಯತ್ನಿಸುತ್ತಿದೆ. ಆದರೆ, ಅದು ಸಫಲವಾಗಲ್ಲ. ಮಹಿಳೆಯರಿಗೆ ₹1 ಲಕ್ಷ ನೀಡುವ ಭರವಸೆ ನೀಡಿದ್ದಾರೆ. ಆದರೆ ನಮ್ಮ ದೇಶದಲ್ಲಿ 68 ಕೋಟಿ ಮಹಿಳೆಯರಿದ್ದು, ₹68 ಲಕ್ಷ ಕೋಟಿ ಹಣ ಬೇಕಾಗುತ್ತದೆ. ದೇಶದ ಬಜೆಟ್ ಇರುವುದೇ ₹48 ಲಕ್ಷ ಕೋಟಿ, ಉಳಿದ ಹಣ ಎಲ್ಲಿಂದ ತರುತ್ತಾರೆ? ಇದು ಬೋಗಸ್ ಗ್ಯಾರಂಟಿ. ಮೋದಿ ಗ್ಯಾರಂಟಿಯೇ ಶಾಶ್ವತ ಗ್ಯಾರಂಟಿಯಾಗಿದ್ದು, ರಾಷ್ಟ್ರದ ಭದ್ರತೆಯ ದೃಷ್ಟಿಯಿಂದ ಮೋದಿ ಗ್ಯಾರಂಟಿಯೇ ಬೇಕು ಎಂದರು.

ಕಾಂಗ್ರೆಸ್ ಗ್ಯಾರಂಟಿ ತಾತ್ಕಾಲಿಕ, ಚುನಾವಣಾ ಗಿಮಿಕ್ಸ್‌: ಬಿ.ವೈ.ವಿಜಯೇಂದ್ರ

ಶಿವಮೊಗ್ಗ ನಾಳೆ ಜೆ.ಪಿ.ನಡ್ಡಾ:

ಏ. 30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು, ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬಲಿದ್ದಾರೆ. ವಾತಾವರಣ ದಿನದಿಂದ ದಿನಕ್ಕೆ ಬಿಜೆಪಿ ಪರ ವೃದ್ಧಿಯಾಗುತ್ತಿದ್ದು, ಅತಿ ಹೆಚ್ಚಿನ ಅಂತರದಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು

ನಮ್ಮ ಚುನಾವಣಾ ಪ್ರಚಾರ ಚೆನ್ನಾಗಿ ಆಗುತ್ತಿದೆ. ಹೋದಲೆಲ್ಲಾ ಜನರು ಮೋದಿಜಿಯವರ ಪರವಾಗಿ ಮಾತನಾಡುತ್ತಿದ್ದಾರೆ. ರಾಷ್ಟ್ರೀಯ ಭದ್ರತೆ ಬಗ್ಗೆ ಮಾತನಾಡುತ್ತಾರೆ. ನಾವು ಅತಿ ಹೆಚ್ಚು ಲೀಡ್‌ನಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Latest Videos
Follow Us:
Download App:
  • android
  • ios