ಕೊಳ ತಂದ ಕೊಳೆ: ಸುಧಾಕರ್ ರಾಜೀನಾಮೆಗೆ ಹೆಚ್ಚಿದ ಒತ್ತಡ...!

ಕೊರೋನಾ ವಿರುದ್ಧ ಹೋರಾಟದಲ್ಲಿ ಟೊಂಕ ಕಟ್ಟಿ ನಿಂತು ಮೆಚ್ಚುಗೆಗೆ ಪಾತ್ರರಾಗಿದ್ದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರಿಗೆ ಈಜುಕೊಳ ಕೊಳೆ ತಂದಿಟ್ಟಿದೆ.
Shivamogga Youth Congress urges Minister Dr Sudhakar resignation
ಶಿವಮೊಗ್ಗ, (ಏ.14): ಕೊರೋನಾ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಸ್ವಿಮ್ಮಿಂಗ್ ಮಾಡಿ ಎಂಜಾಯ್ ಮಾಡಿರುವುದು ಸಾಕಷ್ಟು ವಿರೋಧಕ್ಕೆ ಕಾರಣವಾಗಿದೆ. 

ಅಲ್ಲದೇ ಸಚಿವ ಡಾ. ಕೆ ಸುಧಾಕರ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಆಗ್ರಹಗಳು ಕೇಳಿಬರುತ್ತಿವೆ. ಸುಧಾಕರ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದರು. ಇದೀಗ ಜಿಲ್ಲೆಗಳಿಂದಲೂ ಒತ್ತಾಯಿಸಲಾಗುತ್ತಿದೆ. 

ಕೊರೋನಾ ಹೋರಾಟದಲ್ಲಿ ಇಷ್ಟು ದಿನ ಸುಧಾಕರ್‌ಗೆ ಸಿಕ್ಕ ಮೆಚ್ಚುಗೆ ಸ್ಮಿಮ್ಮಿಂಗ್‌ ಪೂಲ್‌ನಲ್ಲಿ ಹೋಮ

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಇಂದು (ಮಂಗಳವಾರ) ಶಿವಮೊಗ್ಗ ಜಿಲ್ಲಾಧಿಕಾರಿಗಳ ಮುಖಾಂತರ ಸುಧಾಕರ್‌ ಅವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸಲಾಯಿತು.

ಕೋವಿಡ್-19 ಬಿಕ್ಕಟ್ಟಿನ ಸಮಯದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಈಜುಕೊಳದಲ್ಲಿ ಮೋಜು ಮಸ್ತಿ ಮಾಡಿದ್ದಲ್ಲದೆ, ಸಾಮಾಜಿಕ ಅಂತರದ ಬಗ್ಗೆ ಅಪಹಾಸ್ಯ ಮಾಡಿದ್ದಾರೆ ಎಂದು ಆರೋಪಿಸಿದರು.
  ಆಗಿದ್ದೇನು..?
ತಮ್ಮ ಮಕ್ಕಳ ಜತೆ ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುತ್ತಿರುವುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಸುಧಾಕರ್ ಅವರು ಹಂಚಿಕೊಂಡಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ಜವಾಬ್ದಾರಿಯುತ ಮಿನಿಸ್ಟರ್ ಆಗಿ ಹೀಗೆ ಮಾಡುವುದು ಸರಿ ನಾ ಅಂತೆಲ್ಲಾ ಟೀಕೆಗಳು ವ್ಯಕ್ತವಾಗುತ್ತಿವೆ.
Latest Videos
Follow Us:
Download App:
  • android
  • ios