Asianet Suvarna News Asianet Suvarna News

ಜಾತಿಗಣತಿ ವರದಿ ತಿರಸ್ಕರಿಸುವ ಮನವಿಗೆ ಸಹಿ ಹಾಕಬಾರದಾ?: ಡಿ.ಕೆ.ಶಿವಕುಮಾರ್‌

‘ಜಾತಿಗಣತಿ ವರದಿ ಜಾರಿ ಮಾಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಪಕ್ಷದ ನಿಲುವು. ಆ ನಿಲುವಿಗೆ ನಾವು ಈಗಲೂ ಬದ್ಧರಾಗಿದ್ದೇವೆ. ಆದರೆ ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ಆಗಬೇಕು ಎಂದು ವಿವಿಧ ಸಮುದಾಯಗಳು ಆಗ್ರಹಿಸಿವೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.
 

Shouldnt we sign the petition rejecting the caste census report Says DK Shivakumar gvd
Author
First Published Nov 23, 2023, 4:00 AM IST

ಬೆಂಗಳೂರು (ನ.23): ‘ಜಾತಿಗಣತಿ ವರದಿ ಜಾರಿ ಮಾಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಪಕ್ಷದ ನಿಲುವು. ಆ ನಿಲುವಿಗೆ ನಾವು ಈಗಲೂ ಬದ್ಧರಾಗಿದ್ದೇವೆ. ಆದರೆ ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ಆಗಬೇಕು ಎಂದು ವಿವಿಧ ಸಮುದಾಯಗಳು ಆಗ್ರಹಿಸಿವೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಜಾತಿಗಣತಿ ವರದಿ ತಿರಸ್ಕರಿಸಬೇಕು ಎಂಬ ಒಕ್ಕಲಿಗರ ಸಂಘದ ಮನವಿ ಪತ್ರಕ್ಕೆ ಸಹಿ ಹಾಕಿರುವ ಕುರಿತು ಈ ರೀತಿ ಪ್ರತಿಕ್ರಿಯಿಸಿದರು. ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಸಿಗಬೇಕು ಎಂದು ಅನೇಕ ಸಮುದಾಯಗಳು ಆಗ್ರಹ ಮಾಡಿವೆ. 

ಪರಿಶಿಷ್ಟರು, ಪಂಚಮಸಾಲಿ, ವೀರಶೈವರು, ಒಕ್ಕಲಿಗರು ಸೇರಿದಂತೆ ಹಲವರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟ ಪಕ್ಷಬೇಧ ಮರೆತು ನಡೆಯುತ್ತಿದೆ. ಕೆಲ ಸಮುದಾಯ ಹಾಗೂ ಅದರ ನಾಯಕರಿಗೆ ಗೊಂದಲಗಳಿವೆ. ಹೀಗಾಗಿ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಮಾಡಬೇಕು ಎಂದು ಕೇಳುತ್ತಿದ್ದಾರೆ ಎಂದು ಹೇಳಿದರು. ಜಾತಿ ಗಣತಿ ವರದಿ ತಿರಸ್ಕರಿಸುವಂತೆ ಮಾಡಿರುವ ಮನವಿ ಪತ್ರಕ್ಕೆ ನೀವೂ ಸಹಿ ಹಾಕಿದ್ದೀರಲ್ಲ? ಎಂಬ ಪ್ರಶ್ನೆಗೆ, ‘ನಾನು ಸಹಿ ಮಾಡಬಾರದೇ? ಎಷ್ಟು ಜನ ಮಂತ್ರಿಗಳು ಈ ವಿಚಾರವಾಗಿ ಸಭೆ ಮಾಡಿಲ್ಲ? ಅದೇ ರೀತಿ ನಾನು ರಾಜಕೀಯ ಪಕ್ಕಕ್ಕಿಟ್ಟು ನಮ್ಮ ಸಮಾಜದ ಮೇಲಿನ ಗೌರವ ಹಾಗೂ ಅಭಿಮಾನ ಉಳಿಸಿಕೊಳ್ಳಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದೇನೆ. ಇದು ಎಲ್ಲಾ ನಾಯಕರಲ್ಲೂ ಇರುತ್ತದೆ’ ಎಂದು ಸಮರ್ಥಿಸಿಕೊಂಡರು.

ಎಚ್‌ಡಿಕೆ ಹೇಳಿದಂತೆ ಕೀಳುಮಟ್ಟಕ್ಕೆ ಇಳಿದಿದ್ರೆ ರಾಜಕೀಯ ನಿವೃತ್ತಿ: ಡಿ.ಕೆ.ಶಿವಕುಮಾರ್‌

ಕಾಂಗ್ರೆಸ್‌ ನೋಡಿ ಮೋದಿಯಿಂದಲೂ ಗ್ಯಾರಂಟಿ: ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ನೋಡಿಕೊಂಡು ಪ್ರಧಾನಿ ಮೋದಿ ಅವರು ಪಂಚ ರಾಜ್ಯಗಳ ಚುನಾವಣೆಗಳಿಗೆ ‘ಪ್ರೈಮ್‌ ಮಿನಿಸ್ಟರ್‌ ಗ್ಯಾರಂಟಿ’ಗಳನ್ನು ಘೋಷಿಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಲೇವಡಿ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ ಸಭಾಂಗಣದಲ್ಲಿ ನಡೆದ ಮಾಜಿ ಪ್ರಧಾನಿ ದಿ. ಇಂದಿರಾಗಾಂಧಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಹಾಗೂ ದೇಶ ದಿವಾಳಿಯಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳುತ್ತಿದ್ದರು. ಇದೀಗ ಅವರೇ ಕಾಂಗ್ರೆಸ್‌ನ ಗ್ಯಾರಂಟಿಗಳನ್ನು ನೋಡಿ ‘ಪ್ರೈಮ್‌ ಮಿನಿಸ್ಟರ್‌’ ಗ್ಯಾರಂಟಿ ನೀಡುತ್ತಿದ್ದಾರೆ. 

ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡಿ ತೋರಿಸೋದಲ್ಲ: ಸಂಸದೆ ಸುಮಲತಾ ಅಂಬರೀಶ್

ಮಧ್ಯಪ್ರದೇಶ ಸೇರಿದಂತೆ ಚುನಾವಣೆ ನಡೆಯುತ್ತಿರುವ ರಾಜ್ಯಗಳಲ್ಲಿ ದುಡ್ಡು ನೀಡುವ ಗ್ಯಾರಂಟಿ ಯೋಜನೆ ಘೋಷಿಸಿಕೊಂಡು ಹೋಗುತ್ತಿದ್ದಾರೆ ಎಂದು ಟೀಕಿಸಿದರು. ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೊದಲು ಯಡಿಯೂರಪ್ಪ ಅವರನ್ನು ಭೇಟಿ ಮಾಡಲು ಹೋಗಿದ್ದೆ. ಆ ವೇಳೆ ಅವರು ಈ ವರ್ಷ ಎರಡು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತನ್ನಿ ಸಾಕು ಎಂದು ನನಗೆ ಹೇಳಿದರು. ನಾನು ಆಯಿತು ಸಾರ್‌ ಎಂದು ನಕ್ಕು ಹೊರಬಂದಿದ್ದೆ. ಆದರೆ, ಮೊದಲನೇ ಕ್ಯಾಬಿನೆಟ್‌ ಸಭೆಯಲ್ಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದೆವು. ಡಿಸೆಂಬರ್‌ ತಿಂಗಳಿನಲ್ಲಿ ಐದನೇ ಗ್ಯಾರಂಟಿ ಯುವನಿಧಿ ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದರು.

Follow Us:
Download App:
  • android
  • ios