ವರ್ಗಾವಣೆಗಾಗಿ ಹಣ ಪಡೆದಿದ್ದರೆ ದಾಖಲೆ ತೋರಿಸಲಿ: ಯತೀಂದ್ರ ಸಿದ್ದರಾಮಯ್ಯ

ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಬಿ.ವೈ.ವಿಜಯೇಂದ್ರ ಸಿಎಂ ಎಂಬಂತೆ ವರ್ತಿಸುತ್ತಿದ್ದಾರೆಂದು ಬಿಜೆಪಿ ಶಾಸಕರೆ ಆರೋಪಿಸಿದ್ದರು. ಈಗ ನಾನು ಸೂಪರ್ ಸಿಎಂ ಆಗಿದ್ದೇನೆಂದು ಆರೋಪಿಸುತ್ತಿರುವುದು ಹತಾಶೆಯ ಹೇಳಿಕೆಯಾಗಿದೆ. ವಿರೋಧ ಪಕ್ಷಗಳು ಹತಾಶರಾಗಿ ಗೂಬೆ ಕೂರಿಸುವ ಕೆಲಸ ಮಾಡುತ್ತಿವೆ ಎಂದು ವ್ಯಂಗ್ಯವಾಡಿದ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ
 

Show the Document if Money Taken for Transfer Says Dr Yathindra Siddaramaiah grg

ಸಿಂಧನೂರು(ಡಿ.09):  ಅಧಿಕಾರಿಗಳ ವರ್ಗಾವಣೆಗಾಗಿ ಹಣ ಪಡೆದಿದ್ದೇನೆಂದು ವಿಪಕ್ಷಗಳು ಆರೋಪಿಸಿರುವುದರಲ್ಲಿ ಯಾವುದೇ ಹುರುಳಿಲ್ಲ. ಶಾಸಕರು ತಮಗೆ ಬೇಕಾದ ಅಧಿಕಾರಿಗಳನ್ನು ತಮ್ಮ ಕ್ಷೇತ್ರಗಳಿಗೆ ಹಾಕಿಕೊಳ್ಳುವುದು ವಾಡಿಕೆ. ಇದನ್ನೆ ತಿರುಚುವ ಕೆಲಸ ಮಾಡಬಾರದು. ಹಣ ಪಡೆದಿದ್ದರೆ ದಾಖಲೆ ತೋರಿಸಲಿ ಎಂದು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ನಗರದ ಕಾಕತೀಯ ಕ್ಲಬ್‌ನಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಬಿ.ವೈ.ವಿಜಯೇಂದ್ರ ಸಿಎಂ ಎಂಬಂತೆ ವರ್ತಿಸುತ್ತಿದ್ದಾರೆಂದು ಬಿಜೆಪಿ ಶಾಸಕರೆ ಆರೋಪಿಸಿದ್ದರು. ಈಗ ನಾನು ಸೂಪರ್ ಸಿಎಂ ಆಗಿದ್ದೇನೆಂದು ಆರೋಪಿಸುತ್ತಿರುವುದು ಹತಾಶೆಯ ಹೇಳಿಕೆಯಾಗಿದೆ. ವಿರೋಧ ಪಕ್ಷಗಳು ಹತಾಶರಾಗಿ ಗೂಬೆ ಕೂರಿಸುವ ಕೆಲಸ ಮಾಡುತ್ತಿವೆ ಎಂದು ವ್ಯಂಗ್ಯವಾಡಿದರು.

ಪುರಾತತ್ವ ಜಾಗದಲ್ಲಿ ಮಸೀದಿ ಕಮಾನು ನಿರ್ಮಾಣ; ಬಿಜೆಪಿ ನಿಯೋಗ ವಿರೋಧ, ಜೈ ಶ್ರೀರಾಮ ಘೋಷಣೆ!

ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ 5 ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯದಡಿ 10 ಕೆಜಿ ಅಕ್ಕಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾಗಿದೆ. 5ನೇ ಗ್ಯಾರಂಟಿ ಯುವನಿಧಿ ಯೋಜನೆ ಈ ತಿಂಗಳು ಅಥವಾ ಜನವರಿಯಲ್ಲಿ ಅನುಷ್ಠಾನಗೊಳ್ಳಲಿದೆ. ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆಗೆ ಅಧಿಕ ಲಾಭ ಬಂದಿದೆ ಎಂದು ಹೇಳಿದರು.

ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಕಾಂಗ್ರೆಸ್ ಹಾಗೂ ರಾಜಸ್ತಾನ, ಛತ್ತೀಸ್‌ಘಡ, ಜಾರ್ಖಂಡ್‌ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದಕ್ಕೆ ಅಲ್ಲಿನ ಅಭಿವೃದ್ಧಿ ಕಾರ್ಯಗಳು ಹಾಗೂ ಪಕ್ಷದ ನಾಯಕರ ಭಿನ್ನಾಭಿಪ್ರಾಯಗಳು ಕಾರಣವಾಗಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆ ದೇಶದ ಜನತೆ ಆಶೀರ್ವದಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ಅನಿಲ್ ಚಿಕ್ಕಮಾದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರವಿ ಬೋಸರಾಜ, ಕಾಂಗ್ರೆಸ್ ಮುಖಂಡರಾದ ರಾಜಶೇಖರ ಹಿಟ್ನಾಳ, ಮಲ್ಲಿಕಾರ್ಜುನ ಯದ್ದಲದಿನ್ನಿ, ನಿರುಪಾದೆಪ್ಪ ಗುಡಿಹಾಳ ವಕೀಲ, ಸೋಮನಗೌಡ ಬಾದರ್ಲಿ, ಖಾಜಿಮಲಿಕ್ ವಕೀಲ, ಹನುಮಂತಪ್ಪ ಮುದ್ದಾಪುರ ಮತ್ತಿತರರು ಇದ್ದರು.

Latest Videos
Follow Us:
Download App:
  • android
  • ios