ಹಾಸನ, (ನ.10):  ಜಿಲ್ಲೆಯ ಶ್ರವಣಬೆಳಗೊಳ ಕ್ಷೇತ್ರದ ಜೆಡಿಎಸ್ ಶಾಸಕ ಬಾಲಕೃಷ್ಣ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲ ದಿನಗಳಿಂದ ಕೆಮ್ಮಿನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೆಮ್ಮು ಇದ್ದ ಕಾರಣ ಶಾಸಕ ಬಾಲಕೃಷ್ಣ ಕೊರೋನಾ ಪರೀಕ್ಷೆ ಮಾಡಿಸಿದ್ದು, ವರದಿಯಲ್ಲಿ ಕೊರೋನಾ ನೆಗೆಟಿವ್ ಎಂದು ಬಂದಿದೆ. ಆದ್ರೆ,  ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಪುತ್ರನ ಕಾರು ಅಪಘಾತ...!

ಈ ವೇಳೆ ವೈದ್ಯರು ಹೆಚ್ಚಿನ ಚಿಕಿತ್ಸೆ ಬೇಕಾಗಿದೆ ಎಂದು ಸಲಹೆ ಮಾಡಿದ ಹಿನ್ನೆಲೆಯಲ್ಲಿ ಶಾಸಕ ಬಾಲಕೃಷ್ಣ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕ್ಷೇತ್ರದ ಜನರಿಗೆ ತೊಂದರೆಯಾಗಬಾರದೆಂದು ಬೆಂಗಳೂರಿಗೆ ಬಂದಿದ್ದೇನೆ. ಆದಷ್ಟು ಬೇಗನೆ ಗುಣಮುಖನಾಗಿ ಕ್ಷೇತ್ರದ ಜನರ ಕಷ್ಟ ಸುಖಕ್ಕೆ ಭಾಗಿಯಾಗುತ್ತೇನೆ. ನನ್ನ ಆಪ್ತ ಸಹಾಯಕರ ದೂರವಾಣಿಗೆ ಕರೆ ಮಾಡಿ ನಿಮ್ಮ ಸಮಸ್ಯೆ ಇದ್ದರೆ ತಿಳಿಸಿ ಪರಿಹರಿಸಲು ನಿರ್ದೇಶನ ನೀಡಿರುತ್ತೇನೆ ಎಂದಿದ್ದಾರೆ.