Asianet Suvarna News Asianet Suvarna News

ಮುಸ್ಲಿಂ ಸ್ತ್ರೀಯರ ಮತಬೇಟೆಗೆ ಶುಕ್ರಿಯಾ ಮೋದಿ ಆಂದೋಲನ

ಮೋದಿ ಅವರು ಮುಸ್ಲಿಂ ಮಹಿಳೆಯರಿಗೆ ವಿವಿಧ ಯೋಜನೆಗಳಲ್ಲಿ ಆದ್ಯತೆ ನೀಡುವ ಮೂಲಕ ಸಹೋದರ-ಸಹೋದರಿ ಸಂಬಂಧವನ್ನು ಸ್ಥಾಪಿಸಿದ್ದಾರೆ. ಹೀಗಾಗಿ ಅಭಿಯಾನಕ್ಕೆ ‘ಶುಕ್ರಿಯಾ ಮೋದಿ ಭಾಯಿಜಾನ್’ ಎಂದು ಹೆಸರಿಡಲಾಗಿದೆ. 

Shukriya Modi Movement for Muslim Women grg
Author
First Published Dec 31, 2023, 6:08 AM IST

ಲಖನೌ(ಡಿ.31):  2024ರ ಸಾರ್ವತ್ರಿಕ ಚುನಾವಣೆಗೆ ದಿನಗಣನೆ ಆರಂಭವಾಗಿರುವಾಗಲೇ ಮುಸ್ಲಿಂ ಮಹಿಳೆಯರನ್ನು ಪಕ್ಷದತ್ತ ಸೆಳೆಯಲು ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾ ಜ.2ರಿಂದ ಉತ್ತರ ಪ್ರದೇಶದ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ‘ಶುಕ್ರಿಯಾ ಮೋದಿ ಭಾಯಿಜಾನ್’ ಅಭಿಯಾನವನ್ನು ಪ್ರಾರಂಭಿಸಲಿದೆ.

‘ನಾ ದೂರಿ ಹೈ, ನಾ ಖೈ ಹೈ, ಮೋದಿ ಹಮಾರಾ ಭಾಯಿ ಹೈ’ (ಯಾವುದೇ ಬೇರ್ಪಡುವಿಕೆ ಇಲ್ಲ, ಯಾವುದೇ ಕಂದಕವಿಲ್ಲ, ಮೋದಿ ನಮ್ಮ ಸಹೋದರ) ಎಂಬ ಅಡಿಬರಹದೊಂದಿಗೆ, ಅಭಿಯಾನವು ಪ್ರತಿ ಕ್ಷೇತ್ರದಲ್ಲಿ ಕನಿಷ್ಠ 1,000 ಮುಸ್ಲಿಂ ಮಹಿಳೆಯರನ್ನು ಪಕ್ಷದತ್ತ ಸೆಳೆಯುವ ಗುರಿಯನ್ನು ಹೊಂದಿದೆ.

ಇಂಡಿಯಾ ಮೈತ್ರಿಕೂಟಕ್ಕೆ ಸೀಟಿನ ಬಿಕ್ಕಟ್ಟು: ಸೀಟು ಹಂಚಿಕೆಗೂ ಮುನ್ನವೇ ಶಿವಸೇನೆ, ಟಿಎಂಸಿ ಅಪಸ್ವರ; ಜೆಡಿಯುನಲ್ಲಿ ಒಡಕು

ಉತ್ತರ ಪ್ರದೇಶ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಕುನ್ವರ್ ಬಸಿತ್ ಅಲಿ ಶನಿವಾರ ಈ ಅಭಿಯಾನದ ಬಗ್ಗೆ ಮಾಹಿತಿ ನೀಡಿ, ಜ.2ರಿಂದ ಅಭಿಯಾನ ಆರಂಭವಾಗಲಿದ್ದು, ಜ.20ರವರೆಗೆ ನಡೆಯಲಿದೆ. ಅಭಿಯಾನದ ಅಡಿ ನರೇಂದ್ರ ಮೋದಿ ಸರ್ಕಾರವು ಮುಸ್ಲಿಂ ಮಹಿಳೆಯರ ಉದ್ಧಾರಕ್ಕೆ ಮಾಡಿದ ಕೆಲಸಗಳ ಬಗ್ಗೆ ಜಾಗೃತಿ ಮೂಡಿಸಲಾಗುವುದು ಮತ್ತು ಬಿಜೆಪಿಗೆ ಮತ ಹಾಕಲು ಪ್ರೋತ್ಸಾಹಿಸಲಾಗುವುದು ಎಂದರು.

ಲೋಕಸಭೆ ಚುನಾವಣೆ ಸಿದ್ಧತೆ: ಜ. 4ಕ್ಕೆ ಸಿದ್ದು, ಡಿಕೆಶಿ ದಿಲ್ಲಿಗೆ

ಮೋದಿ ಅವರು ಮುಸ್ಲಿಂ ಮಹಿಳೆಯರಿಗೆ ವಿವಿಧ ಯೋಜನೆಗಳಲ್ಲಿ ಆದ್ಯತೆ ನೀಡುವ ಮೂಲಕ ಸಹೋದರ-ಸಹೋದರಿ ಸಂಬಂಧವನ್ನು ಸ್ಥಾಪಿಸಿದ್ದಾರೆ. ಹೀಗಾಗಿ ಅಭಿಯಾನಕ್ಕೆ ‘ಶುಕ್ರಿಯಾ ಮೋದಿ ಭಾಯಿಜಾನ್’ ಎಂದು ಹೆಸರಿಡಲಾಗಿದೆ ಎಂದು ಹೇಳಿದರು.

ಅಭಿಯಾನದ ಅಡಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ ಹಮ್ಮಿಕೊಳ್ಳಲಾಗವುದು. ಕಾರ್ಯಕ್ರಮಗಳಲ್ಲಿ ಮುಸ್ಲಿಂ ಮಹಿಳೆಯರು ಉಜ್ವಲ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಆಯುಷ್ಮಾನ್ ಭಾರತ್ ಯೋಜನೆ ಮತ್ತು ಇತರ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಪ್ರಯತ್ನಿಸಲಾಗುವುದು ಎಂದು ಅಲಿ ಹೇಳಿದರು.

ಹೊಸ ತಂತ್ರ

- ಉತ್ತರ ಪ್ರದೇಶದಲ್ಲಿ ಜ.2ರಿಂದ ಅಭಿಯಾನ
- ‘ನಾ ದೂರಿ ಹೈ, ಮೋದಿ ಹಮಾರಾ ಭಾಯಿ ಹೈ’ ಘೋಷ

ಪ್ರಚಾರ ತಂತ್ರ

- ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಬಿಜೆಪಿ ಅಲ್ಪಸಂಖ್ಯಾತ ಘಟಕದ ಸಿದ್ಧತೆ
- ಪ್ರಧಾನಿ ನರೇಂದ್ರ ಮೋದಿ ಮುಸ್ಲಿಂ ಮಹಿಳೆಯರ ಸಹೋದರ ಎಂದು ಬಿಂಬಿಸಲು ಆಂದೋಲನ
- ಮುಸ್ಲಿಂ ಮಹಿಳೆಯರಿಗಾಗಿ ಮೋದಿ ಜಾರಿಗೆ ತಂದ ಯೋಜನೆಗಳ ಬಗ್ಗೆ ಎಲ್ಲ ಕ್ಷೇತ್ರದಲ್ಲಿ ಪ್ರಚಾರ
- ಉಜ್ವಲಾ, ಪಿಎಂ ಆವಾಸ್‌, ಆಯುಷ್ಮಾನ್‌ ಭಾರತ್‌ ಬಗ್ಗೆ ಹೇಳಿ ಬಿಜೆಪಿಗೆ ಬೆಂಬಲ ಕೋರಿಕೆ

Latest Videos
Follow Us:
Download App:
  • android
  • ios