* ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಅನಾರೋಗ್ಯ* ಆಪ್ತ ವೈದ್ಯ ಡಾ.ರವಿ ಕುಮಾರ್ ಅವರಿಂದ ತಪಾಸಣೆ*  ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ಬೆಂಗಳೂರು, (ಜೂನ್.01): ಅನಾರೋಗ್ಯ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆಪ್ತ ವೈದ್ಯ ಡಾ.ರವಿ ಕುಮಾರ್ ಸಲಹೆ ಮೇರೆಗೆ ಸಿದ್ದರಾಮಯ್ಯ ಅವರು ಇಂದು (ಮಂಗಳವಾರ) ಬೆಂಗಳೂರಿನ ಮಣಿಪಾಲ್ ಅಸ್ಪತ್ರೆಗೆ ದಾಖಲಾಗಿದ್ದಾರೆ. ವೈರಲ್ ಫೀವರ್ ಆದ ಕಾರಣ 2 ದಿನ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುವಂತೆ ವೈದ್ಯರ ಸಲಹೆ ನೀಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಸಿದ್ದರಾಮಯ್ಯಗೆ ಅನಾರೋಗ್ಯ, ವೈದ್ಯರಿಂದ ತಪಾಸಣೆ

ನಿನ್ನೆ (ಸೋಮವಾರ) ರಾತ್ರಿ ಸಿದ್ದರಾಮಯ್ಯಗೆ ಜ್ವರ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಡಾ.ರವಿ ಕುಮಾರ್ ಅವರು ಸಿದ್ದರಾಮಯ್ಯನವರ ಆರೋಗ್ಯ ತಪಾಸಣೆ ಮಾಡಿದ್ದಾರೆ. ಅಲ್ಲದೇ ಕೋವಿಡ್‌ ಟೆಸ್ಟ್ ಮಾಡಿದ್ದು, ವರದಿ ನೆಗೆಟಿವ್ ಅಂತ ಬಂದಿದೆ. ಇನ್ನು ಸಿಟಿ ಸ್ಕ್ಯಾನಿಂಗ್ ರಿಪೋರ್ಟ್ ನಾರ್ಮಲ್ ಇದೆ.

ಈಗಾಗಲೇ ಒಮ್ಮೆ ಸಿದ್ದರಾಮಯ್ಯ ಅವರು ಕೊರೋನಾ ಸೋಂಕಿಗೆ ಒಳಗಾಗಿ ಇದೇ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದರು.

ಇನ್ನು ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಉಂಟಾಗಿರೋ ಕಾರಣ ನಿಗದಿಯಾಗಿದ್ದ ಅವರ ಎಲ್ಲಾ ಕಾರ್ಯಕ್ರಮಗಳನ್ನ ರದ್ದು ಮಾಡಲಾಗಿದೆ.