ಸಿದ್ದರಾಮಯ್ಯ, ಡಿ​ಕೆಶಿಗೆ ಸಿಎಂ ಹಗಲುಗನಸು: ಕಟೀಲ್‌ ಟೀಕೆ

ಮಹಾತ್ಮ ಗಾಂಧೀಜಿ ಕಾಂಗ್ರೆಸ್‌ನಿಂದ ದೇಶ ಸುಭಿಕ್ಷಗೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಕಾಂಗ್ರೆಸ್‌ನ್ನು ವಿಸರ್ಜನೆ ಮಾಡಿ ರಾಮರಾಜ್ಯದ ಕನಸು ಕಂಡಿದ್ದರು. ಆದರೆ, ಆ ಕನಸು ಹಾಗೆಯೆ ಉಳಿಯಿತು. ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಗಾಂಧೀಜಿಯವರ ಕನಸನ್ನು ನನಸು ಮಾಡಿದ್ದಾರೆ: ಕಟೀಲ್‌ 

Siddaramaiah and DK Shivakumar Day Dreaming about CM Says Nalin Kumar Kateel grg

ಸಿಂಧನೂರು(ಫೆ.26):  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತದೆ. ತಾವು ಮುಖ್ಯಮಂತ್ರಿಗಳಾಗುತ್ತೇವೆ ಎಂಬ ಹಗಲುಗನಸು ಕಾಣುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಟೀಕಿಸಿದರು.

ಇಲ್ಲಿಗೆ ಸಮೀಪದ ಹೊಸಳ್ಳಿ ಇ.ಜೆ.ಕ್ಯಾಂಪ್‌ ಬಳಿ ಇರುವ ಯಲಿಮಂಜಾಲಿ ವಾಸುದೇವರಾವು ಕಲ್ಯಾಣ ಮಂಟಪದಲ್ಲಿ ಶನಿವಾರ ಪುರಸಭೆ ಮಾಜಿ ಅಧ್ಯಕ್ಷ ಕೆ.ಮರಿಯಪ್ಪನವರು ಬಿಜೆಪಿ ಸೇರ್ಪಡೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಮೂಲ ಹಾಗೂ ವಲಸಿಗರು ಎಂಬ ಎರಡು ಗುಂಪುಗಳಿವೆ. ಮೂಲ ಕಾಂಗ್ರೆಸ್ಸಿಗರನ್ನು ಮೂಲೆಗೆ ತಳ್ಳಿ, ವಲಸಿಗರೇ ಕಾರುಬಾರು ಮಾಡುತ್ತಿದ್ದಾರೆ. ಮೂಲ ಕಾಂಗ್ರೆಸ್ಸಿಗರಲ್ಲಿ ಒಬ್ಬರಾಗಿದ್ದ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಅವರನ್ನು ಪಕ್ಷ ಸರಿಯಾಗಿ ನಡೆಸಿಕೊಳ್ಳದೆ ಅಪಮಾನ ಮಾಡಿದೆ. ಇದರಿಂದ ಅವರು ತುಂಬಾ ನೊಂದಿದ್ದರು. ಅವರು ಬಿಜೆಪಿಗೆ ಸೇರ್ಪಡೆಯಾದ ನಂತರ ಲವಲವಿಕೆಯಿಂದ ಸಂಘಟನೆಗೆ ಮುಂದಾಗಿದ್ದಾರೆ ಎಂದು ಹೇಳಿದರು.

ಚುನಾವಣೇಲಿ ಸೋತು ಸಿದ್ರಾಮಯ್ಯ ಕಾಡಿಗೆ ಹೋಗ್ತಾರೆ, ಬಂಡೆ ಖ್ಯಾತಿಯ ಡಿಕೆಶಿ ಚೂರು ಚೂರಾಗ್ತಾರೆ: ಕಟೀಲ್

ಮಹಾತ್ಮ ಗಾಂಧೀಜಿ ಕಾಂಗ್ರೆಸ್‌ನಿಂದ ದೇಶ ಸುಭಿಕ್ಷಗೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಕಾಂಗ್ರೆಸ್‌ನ್ನು ವಿಸರ್ಜನೆ ಮಾಡಿ ರಾಮರಾಜ್ಯದ ಕನಸು ಕಂಡಿದ್ದರು. ಆದರೆ, ಆ ಕನಸು ಹಾಗೆಯೆ ಉಳಿಯಿತು. ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಗಾಂಧೀಜಿಯವರ ಕನಸನ್ನು ನನಸು ಮಾಡಿದ್ದಾರೆ ಎಂದು ಶ್ಲಾಘಿಸಿದರು.

ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಕೆ.ಮರಿಯಪ್ಪ ಮಾತನಾಡಿದರು. ಬಿಜೆಪಿ ರಾಜ್ಯ ಮುಖಂಡರಾದ ಮಹೇಶ ಟಿಂಗಿನಕಾಯಿ, ಸಿದ್ದರಾಜು, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಸೇರಿ ಅನೇ​ಕ​ರು ಇದ್ದರು.

Latest Videos
Follow Us:
Download App:
  • android
  • ios