ಬಿಜೆಪಿ ಈಗ ದಲಿತರನ್ನು ಸಿಎಂ ಮಾಡಲಿ : ಸಿದ್ದರಾಮಯ್ಯ ಸವಾಲ್
- ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕರ್ನಾಟಕದಲ್ಲಿ ದಲಿತರನ್ನು ಮುಖ್ಯಮಂತ್ರಿ ಮಾಡಲಿ
- ಈಗೊಂದು ಅವಕಾಶ ಸಿಕ್ಕಿದೆ, ಸೀಟು ಖಾಲಿ ಎಂದು ಸಿದ್ದರಾಮಯ್ಯ ಸವಾಲು
ಮಂಗಳೂರು (ಜು.24): ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕರ್ನಾಟಕದಲ್ಲಿ ದಲಿತರನ್ನು ಮುಖ್ಯಮಂತ್ರಿ ಮಾಡಲಿ ಈಗೊಂದು ಅವಕಾಶ ಸಿಕ್ಕಿದೆ, ಸೀಟು ಖಾಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದರು.
ಮಂಗಳೂರಿನಲ್ಲಿ ಶುಕ್ರವಾರ ಮಾತನಾಡಿ ಕೆಲವು ತಿಂಗಳ ಹಿಂದೆ ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ನಾನು ಹೇಳಿದ್ದೆ. ಈ ಬಗ್ಗೆ ನನಗೆ ಖಚಿತ ಮಾಹಿತಿ ಬಂದಿತ್ತು. ದಲಿತರನ್ನು ಮುಖ್ಯಮಂತ್ರಿ ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ನನಗೊಂದು ಸವಾಲು ಹಾಕಿದ್ದಾರೆ. ನಮ್ಮಲ್ಲಿ ನಾಲ್ಕು ಮಂದಿ ಸಿಎಂ ಆಗಿದ್ದಾರೆ. ಈಗ ಬಿಜೆಪಿಗೆ ಅವಕಾಶ ಬಂದಿದೆ ಎಂದರು.
ಸಿಎಂ ಪಟ್ಟಕ್ಕೆ ನಾನೇ ನಾನೇ ಎನ್ನುವ ಯಾರೂ ಸಿಎಂ ಆಗಲ್ಲ : ಮತ್ತೆ ಯಾರಿಗೆ..?
ಯಾರು ಮುಖ್ಯಮಂತ್ರಿ ಆಗುತ್ತಾರೆ ಎಂದು ಗೊತ್ತಿಲ್ಲ. ಆದರೆ ಯಡಿಯೂರಪ್ಪ ಅವರನ್ನು ಬದಲಾಯಿಸುತ್ತಾರೆ. ಈ ಪಾರ್ಟಿ ಎಷ್ಟು ಬೇಗ ತೊಲಗುತ್ತೋ ಅಷ್ಟು ಬೇಗ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಫೋನ್ ಕದ್ದಾಲಿಸುವವರು ದೇಶದ್ರೋಹಿಗಳು : ಫೋನ್ ಕದ್ದಾಲಿಕೆ ಇದೇ ಮೊದಲಲ್ಲ, ಬಿಜೆಪಿ ಇದಕ್ಕೂ ಮೊದಲು ಕದ್ದಾಲಿಕೆ ಮಾಡಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು 2019ರಲ್ಲಿ ನನ್ನ ಪಿ ಎ ವೆಂಕಟೇಶ್ ಅವರ ಫೋನ್ ಕದ್ದಾಲಿಸಿದ್ದಾರೆ. ಕುಮಾರಸ್ವಾಮಿ ಪರಮೇಶ್ವರ್ ಸೇರಿ ಹಲವರ ಫೋನ್ ಕದ್ದಾಲಿಕೆ ಮಾಡಿದ್ದಾರೆ. ಸಮ್ಮಿಶ್ರ ಸರ್ಕಾರ ಕಿತ್ತು ಹಾಲು ಏನು ಬೇಕೋ ಅದೆಲ್ಲಾ ಮಾಡಿದ್ದಾರೆ ಎಂದರು.
ನಾನು ಈ ಬಗ್ಗೆ ಸುಪ್ರಿಂ ಕೋರ್ಟ್ ನ್ಯಾಯಮೂರ್ತಿ ಮೂಲಕ ತನಿಖೆಗೆ ಆಗ್ರಹಿಸುತ್ತೇನೆ. ಇದೊಂದು ಪ್ರಜಾಪ್ರಭುತ್ವದ ಕೊಲೆ, ಸುಪ್ರೋಂಕೋರ್ಟ್ ಮತ್ತು ಹೈ ಕೋರ್ಟ್ ನ್ಯಾಯಮೂರ್ತಿಗಳದ್ದೇ ಕದ್ದಾಲಿಸುವುದು ದೇಶದ್ರೋಹದ ಕೆಲಸ ಎಂದು ಹೇಳಿದರು.