Big Breaking: ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಕ್ಯಾನ್ಸಲ್?
ನಿಮಗೆ ಕೋಲಾರ ಸೂಕ್ತ ಅಲ್ಲ, ನೀವು ವರುಣಾದಿಂದಲೇ ಸ್ಪರ್ಧೆ ಮಾಡಿ, ನಿಮ್ಮ ಪ್ರತಿ ಒಂದು ನಿಮಿಷವೂ ಪಕ್ಷಕ್ಕೆ ಅಗತ್ಯವಾಗಿದೆ: ರಾಹುಲ್ ಗಾಂಧಿ
ನವದೆಹಲಿ(ಮಾ.18): ನಿಮಗೆ ಕೋಲಾರ ಸೂಕ್ತ ಅಲ್ಲ, ನೀವು ವರುಣಾದಿಂದಲೇ ಸ್ಪರ್ಧೆ ಮಾಡಿ, ನಿಮ್ಮ ಪ್ರತಿ ಒಂದು ನಿಮಿಷವೂ ಪಕ್ಷಕ್ಕೆ ಅಗತ್ಯವಾಗಿದೆ. ನಾಮಪತ್ರ ಹಾಕಿ ಬೇರೆ ಕಡೆ ಪ್ರಚಾರ ಮಾಡಿ ಅಂತ ಸ್ವತಃ ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಅವರೇ ಸಿದ್ದರಾಮಯ್ಯಗೆ ಸೂಚನೆ ನೀಡಿದ್ದಾರೆ.
ರಾಹುಲ್ ಗಾಂಧಿ ಅವರ ಸೂಚನೆಗೆ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದಾರೆ ಅಂತ ತಿಳಿದು ಬಂದಿದೆ. ಪಕ್ಷದ ನಾಯಕರ ಜೊತೆಗೆ ಹೋಗಿ ಚರ್ಚೆ ಮಾಡ್ತೇನೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯಗೆ ಗೆಲುವಿನ ಗ್ಯಾರಂಟಿ ಇಲ್ಲ, ಇತರರನ್ನು ಹೇಗೆ ಗೆಲ್ಲಿಸುತ್ತಾರೆ: ಎಚ್.ಡಿ.ಕುಮಾರಸ್ವಾಮಿ
ಹೀಗಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವುದು ಖಚಿತವಾಗಿದೆ. ರಾಹುಲ್ ಗಾಂಧಿ ಅವರ ಸಲಹೆಗೆ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದಾರೆ.
ಇನ್ನು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಿನ್ನೆಯ ಸಭೆಯಲ್ಲೇ ನನ್ನ ಟಿಕೆಟ್ ಕ್ಲಿಯರ್ ಮಾಡಿಲ್ಲ ಅಮತ ಹೇಳುವ ಮುಲಕ ಕೋಲಾರದಲ್ಲಿ ನಿಲ್ಲುವುದಿಲ್ಲ ಅಂತ ಪರೋಕ್ಷವಾಗಿ ಹೇಳಿದ್ದಾರೆ. ನನ್ನ ಸ್ಪರ್ಧೆಯ ವಿಚಾರವನ್ನ ನಾನು ಹೈಕಮಾಂಡ್‌ಗೆ ಬಿಟ್ಟಿದ್ದೇನೆ, ಅವರು ಏನು ತೀರ್ಮಾನ ಮಾಡ್ತಾರೋ ಮಾಡ್ಲಿ ಅಂತ ಸ್ಪಷ್ಟಪಡಿಸಿದ್ದಾರೆ.
ಸಿದ್ದರಾಮಯ್ಯ ಹುಟ್ಟುಹಬ್ಬ ಆಚರಿಸಿಕೊಂಡಂತೆ ಬಿಜೆಪಿ ಸಮಾವೇಶ ಮಾಡುವುದಿಲ್ಲ: ನಳಿನ್ ಕುಮಾರ್ ಕಟೀಲ್
ನಂಜನಗೂಡು ಟಿಕೆಟ್ ಬಗ್ಗೆ ನಿನ್ನೆಯ ಸಭೆಯಲ್ಲಿ ಚರ್ಚೆ ಯಾಗಿಲ್ಲ, ಆದ್ರೆ ದೃವನಾರಾಯಣ ಪುತ್ರನಿಗೆ ಬಹುತೇಕ ಟಿಕೆಟ್ ಪಕ್ಕಾ ಆಗಿದೆ. ಇಬ್ಬರೇ ಟಿಕೆಟ್‌ಗೆ ಅರ್ಜಿ ಹಾಕಿದ್ದರು. ಆದ್ರೆ ಮಹದೇವಪ್ಪ ಅವರು ಹಿಂದೆ ಸರಿದಿದ್ದಾರೆ. ನಾನು ಕೂಡ ದೃವನಾರಾಯಣ ಪುತ್ರನಿಗೆ ಟಿಕೆಟ್ ಕೊಡಬೇಕು ಒತ್ತಾಯ ಮಾಡಿದ್ದೇನೆ ಅಂತ ತಿಳಿಸಿದ್ದಾರೆ.
ನಿಜವಾಯ್ತು ಸುವರ್ಣ ನ್ಯೂಸ್ ಪ್ರೆಡಿಕ್ಷನ್..!
ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡಲ್ಲ ಎಂದು ಸುವರ್ಣ ನ್ಯೂಸ್ ಬಹಳ ದಿನಗಳ ಹಿಂದೆಯೇ ಹೇಳಿತ್ತು. ವರುಣಾದಿಂದಲೇ ಸಿದ್ದರಾಮಯ್ಯ ಸ್ಪರ್ಧೆಗೆ ಇಳಿಯಲಿದ್ದಾರೆ. ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಿದ್ರೆ ಗೆಲ್ಲುವ ಸಾದ್ಯತೆ ತೀರಾ ಕಡಿಮೆ ಅಂತ ಹೇಳಿತ್ತು. ಕಾಂಗ್ರೆಸ್ ಆಂತರಿಕ ಸಮೀಕ್ಷೆಯಲ್ಲೂ ಇದೇ ವಿಚಾರ ಬಯಲಾಗಿತ್ತು. ನಾಯಕರ ನಡುವಿನ ಮುಸುಕಿನ ಗುದ್ದಾಟ ಸಿದ್ದರಾಮಯ್ಯ ಗೆಲುವಿಗೆ ತೊಡಕಾಗಿತ್ತು. ವರುಣಾ ಕ್ಷೇತ್ರ ವೇರಿ ಸೇಫ್ ಎಂಬುದಾಗಿ ಸಮೀಕ್ಷೆ ಹೇಳಿತ್ತು. ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಕೂಡ ಅದನ್ನೇ ಹೇಳಿದೆ. ಇದೀಗ ಕೋಲಾರ ಬಿಟ್ಟು ಸಿದ್ದರಾಮಯ್ಯ ಮತ್ತೆ ವರುಣಾ ಕಡೆ ಮುಖ ಮಾಡಲಿದ್ದಾರಾ? ಎಂಬ ಪ್ರಶ್ನೆಗಳು ಎದ್ದಿವೆ.