Asianet Suvarna News Asianet Suvarna News

ಚಾಮರಾಜನಗರ ಆಸ್ಪತ್ರೆ ದುರಂತ: ಸಿದ್ದರಾಮಯ್ಯ ಕೆಂಡಾಮಂಡಲ

ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ದುರಂತವೊಂದು ನಡೆದಿದ್ದು, ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಕ್ಕೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

Siddaramaiah demands CM BSY cm resign over 24 Die Due To Shortage Oxygen At chamarajanagara rbj
Author
Bengaluru, First Published May 3, 2021, 3:09 PM IST

ಬೆಂಗಳೂರು, (ಮೇ.03): ಸೂಕ್ತ ಸಮಯಕ್ಕೆ ಆಕ್ಸಿಜನ್ ಸಿಗದೇ ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 24 ಜನರು ಸಾವನ್ನಪ್ಪಿದ ಘಟನೆ ನಡೆದಿದೆ.

ಚಾಮರಾಜನಗರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ, ಹಾಗೂ ಆರೋಗ್ಯ ಸಚಿವ ಸುಧಾಕರ್​ ಅವರು ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

"

ಚಾಮರಾಜನಗರ ಆಸ್ಪತ್ರೆ ದುರಂತ : ಘಟನೆಯ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಟ್ವಿಟರ್​ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅವರು, ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 24 ಜನ ರೋಗಿಗಳು ಸಾವಿಗೀಡಾಗಿರುವ ಘಟನೆ ತಿಳಿದು ಸಂಕಟವಾಯಿತು. ಈ ಪ್ರಕರಣದ ಬಗ್ಗೆ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಆಕ್ಸಿಜನ್ ಸಿಗದೆ ಉಂಟಾಗಿರುವ ಸರಣಿ ಸಾವುಗಳ ಮುಂದುವರೆದ ಭಾಗವಿದು. ಈ ಸಾವಿಗೆ ರಾಜ್ಯ ಸರ್ಕಾರ, ಜಿಲ್ಲಾಸ್ಪತ್ರೆಯ ವೈದ್ಯರು ಹಾಗೂ ಜಿಲ್ಲಾಡಳಿತವೇ ನೇರ ಹೊಣೆ. ಇದು ಅತ್ಯಂತ ಗಂಭೀರ ಹಾಗೂ ಅಮಾನವೀಯ ಪ್ರಕರಣ. ರಾಜ್ಯದಲ್ಲಿ ಆಡಳಿತಯಂತ್ರ ಕುಸಿದುಬಿದ್ದಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ..? ಅವರ ಅಧಿಕಾರದ ಲಾಲಸೆಗೆ ಇನ್ನಷ್ಟು ಅಮಾಯಕ ಜನರು ಬಲಿಯಾಗುವುದು ಬೇಡ. ಜನರ ಜೀವ ರಕ್ಷಿಸಲಾಗದ ಇಂಥಾ ಸರ್ಕಾರ ಇರುವುದಕ್ಕಿಂತ ತೊಲಗುವುದೇ ಲೇಸು ಎಂದಿದ್ದಾರೆ.

 

Follow Us:
Download App:
  • android
  • ios