Asianet Suvarna News Asianet Suvarna News

ಶಾ ಭಾಗವಹಿಸಿದ್ದ 'ಸಂಕಲ್ಪ ಸಿದ್ಧಿ' ಕಾರ್ಯಕ್ರಮ ಬ್ಯಾನರ್ ಫುಲ್ ಹಿಂದಿಮಯ, ಸಿದ್ದು ಕಿಡಿ

ಕೇಂದ್ರ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ‘ ಸಂಕಲ್ಪ್ ಸೆ ಸಿದ್ಧಿ’ ಎಂಬ ಕಾರ್ಯಕ್ರಮದ ಬ್ಯಾನರ್ ಸಂಪೂರ್ಣ ಹಿಂದಿಮಯಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

Siddaramaiah hits out at Bommai Govt Over Hindi word in sankalp se siddi Banner rbj
Author
Bengaluru, First Published Aug 5, 2022, 5:32 PM IST

ಬೆಂಗಳೂರು, (ಆಗಸ್ಟ್.05):   ರಾಜ್ಯದ ಬಸವರಾಜ್ ಬೊಮ್ಮಾಯಿ ಸರಕಾರ, ಕೇಂದ್ರ ನಾಯಕರ ಓಲೈಕೆಗಾಗಿ ಮತ್ತೆ ಮತ್ತೆ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ‌ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡುತ್ತಿರುವುದು ಖಂಡನೀಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು,  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ‘ ಸಂಕಲ್ಪ್ ಸೆ ಸಿದ್ಧಿ’ ಕಾರ್ಯಕ್ರಮದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೇಶದ ಬಗ್ಗೆ ಲಘು ಮನಸ್ಥಿತಿ ಈಗಿಲ್ಲ: ಅಮಿತ್‌ ಶಾ

ಕೇಂದ್ರ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ‘ ಸಂಕಲ್ಪ್ ಸೆ ಸಿದ್ಧಿ’ ಎಂಬ ಕಾರ್ಯಕ್ರಮದ ಬ್ಯಾನರ್ ಸಂಪೂರ್ಣ ಹಿಂದಿಮಯವಾಗಿತ್ತು.‌ಇನ್ನೊಂದೆಡೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತನ್ನ ಜಾಲತಾಣದಲ್ಲಿ ಹಿಂದಿಯ ಕಿರೀಟ ಇಟ್ಟುಕೊಂಡು ಮೆರೆಸುತ್ತಿದೆ.ರಾಜ್ಯದ ಬಿಜೆಪಿ ಸರ್ಕಾರ ತನ್ನತನವನ್ನು ಅಡವಿಟ್ಟು‌ ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದೆ ಎಂಬುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣವೇ ಸಾಕ್ಷಿ ಎಂದು ಟೀಕಿಸಿದ್ದಾರೆ.

ಮೊದಲು ಈ ಜಾಲತಾಣದಿಂದ ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ.ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ‌ ಮತ್ತು ಸಂಸ್ಕೃತಿ ಇಲಾಖೆಯೇ? ಎನ್ನುವುದನ್ನು ಮುಖ್ಯಮಂತ್ರಿಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನಿಲ್ ಕುಮಾರ್ ಅವರು ಸ್ಪಷ್ಟಪಡಿಸಬೇಕು ಎಂದು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

ಬ್ಯಾನರ್ ಸಂಪೂರ್ಣ ಹಿಂದಿಮಯ
ಬೆಂಗಳೂರಿನಲ್ಲಿ ಗುರುವಾರ 'ಸಂಕಲ್ಪ್ ಸೆ ಸಿದ್ಧಿ'(ಸಂಕಲ್ಪದಿಂದ ಸಿದ್ಧಿ) ಕಾರ್ಯಕ್ರಮ ಸರ್ಕಾರ ವತಿಯಿಂದ ನಡೆಯಿತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಭಾಗಿಯಾಗಿದ್ದರು. ಆದರೆ ಕಾರ್ಯಕ್ರಮದ ಬ್ಯಾನರ್ ನಲ್ಲಿ ಕನ್ನಡ ಸಂಪೂರ್ಣ ಮಾಯವಾಗಿ ಹಿಂದಿಮಯವಾಗಿತ್ತು. 

ಕನ್ನಡ ನಾಡಿನಲ್ಲಿ ಕನ್ನಡ ಮಾಯವಾಗಿ ಸಂಪೂರ್ಣ ಹಿಂದಿ ಆಕ್ರಮಿಸಿಕೊಂಡಿದೆ. ಬೆಂಗಳೂರು ಇರುವುದು ಕರ್ನಾಟಕದಲ್ಲಿಯೇ ದೆಹಲಿಯಲ್ಲಿಯೇ ಎಂದು ನೆಟ್ಟಿಗರು, ಕನ್ನಡಿಗರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ದೇಶ ಸ್ವಾತಂತ್ರ್ಯ ಸಿಕ್ಕಿ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಸಂಕಲ್ಪದಿಂದ ಸಿದ್ಧಿ ಯೋಜನೆಯನ್ನು ಆರಂಭಿಸಿದೆ. ಇದನ್ನು ಪ್ರಧಾನಿ ನರೇಂದ್ರ ಮೋದಿಯವರು 2017ರ ಆಗಸ್ಟ್ 21ರಂದು ಚಾಲನೆ ನೀಡಿದ್ದರು. ಅಂದಿನಿಂದ 5 ವರ್ಷಗಳವರೆಗೆ ಇದೇ ವರ್ಷ ಆಗಸ್ಟ್ 21ರವರೆಗೆ 5 ವರ್ಷಗಳ ಯೋಜನೆಯಿದು. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ಇಡೀ ಕಾರ್ಯಕ್ರಮದ ಮೇಲ್ವಿಚಾರಣೆ ಮಾಡುತ್ತದೆ.

Follow Us:
Download App:
  • android
  • ios